ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಛೀ...ಇವನೆಂಥಾ ಗುರು? ವಿದ್ಯಾರ್ಥಿನಿ ಜೊತೆಯೇ ಅಸಭ್ಯ ವರ್ತನೆ- ಈ ವಿಡಿಯೊ ನೋಡಿ

Teacher caught misbehaving: ಶಿಕ್ಷಕ ಹಾಗೂ ವಿದ್ಯಾರ್ಥಿನಿಯ ನಡುವಿನ ಅಶ್ಲೀಲ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬಿಹಾರದ ಮಧುಬನಿ ಜಿಲ್ಲೆಯ ಜಯನಗರ ಪ್ರದೇಶದಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ. ಶಿಕ್ಷಕನನ್ನು ರಾಕೇಶ್ ಯಾದವ್ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ವಿದ್ಯಾರ್ಥಿನಿಯನ್ನು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಹೇಳಲಾಗಿದೆ. ವಿಡಿಯೊ ವೈರಲ್ ಆಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾನೆ.

ಪಾಟ್ನಾ: ಟ್ಯೂಶನ್ ನೀಡುವ ಶಿಕ್ಷಕನೊಬ್ಬ (teacher) ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ (social media) ವೈರಲ್ ಆಗಿದೆ. ಬಿಹಾರದ ಮಧುಬನಿ ಜಿಲ್ಲೆಯ ಜಯನಗರ ಪ್ರದೇಶದಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ. ವಿಡಿಯೊ ವೈರಲ್ (Viral Video) ಆಗುತ್ತಿದ್ದಂತೆ ನೆಟ್ಟಿಗರು ತೀವ್ರ ಟೀಕೆ, ಅಸಹ್ಯ ವ್ಯಕ್ತಪಡಿಸಿದ್ದಾರೆ. ವರದಿಗಳ ಪ್ರಕಾರ, ಜಯನಗರದ ಭೇಲ್ವಾ ಚೌಕ್ ಗಾಲಿಯಲ್ಲಿರುವ ಟ್ಯೂಶನ್ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಶಿಕ್ಷಕನನ್ನು ರಾಕೇಶ್ ಯಾದವ್ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ವಿದ್ಯಾರ್ಥಿನಿಯನ್ನು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದ್ದು, ಮಹಿಳೆಯ ಹೇಳಿಕೆಯನ್ನು ಸಹ ದಾಖಲಿಸಲಾಗಿದೆ.

ಶಿಕ್ಷಕ ರಾಕೇಶ್, ಮನೆ ಮಾಲೀಕರಾದ ಕುಲದೀಪ್ ಸಿಂಗ್, ಸೋನು ಚೌಧರಿ ಮತ್ತು ವಿಡಿಯೊವನ್ನು ವೈರಲ್ ಮಾಡಿದವರ ವಿರುದ್ಧ ಕಿರುಕುಳ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿನಿಯು ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್‌ಗೆ ಬಲಿಯಾಗಿರುವ ಸಾಧ್ಯತೆಯಿದೆ. ಲೈಂಗಿಕ ಕಿರುಕುಳ ನೀಡುತ್ತಿರುವಾಗ ವಿಡಿಯೊ ಚಿತ್ರೀಕರಣ ಮಾಡುವುದಾಗಿ ಮತ್ತು 20 ಲಕ್ಷ ರೂ. ಸುಲಿಗೆ ಮಾಡುವುದಾಗಿ ಮನೆ ಮಾಲೀಕ ಕುಲದೀಪ್ ಸಿಂಗ್ ಬೆದರಿಕೆ ಹಾಕಿದ್ದರು ಎಂದು ವಿದ್ಯಾರ್ಥಿನಿ ದೂರಿದ್ದಾಳೆ. ಅಲ್ಲದೆ ತರಗತಿಗಳಿಗೆ ಬಂದಾಗಲೆಲ್ಲಾ ಕುಲದೀಪ್ ಅನುಚಿತ ಸನ್ನೆಗಳನ್ನು ಮಾಡುತ್ತಿದ್ದರು ಎಂದು ಹೇಳಿದ್ದಾಳೆ.

ಈ ಸುದ್ದಿಯನ್ನೂ ಓದಿ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಯುವಕನಿಗೆ ಕಾದಿತ್ತು ಶಾಕ್; ಆಚಾನಕ್ಕಾಗಿ ಸ್ಫೋಟಗೊಂಡ ಕೇಕ್!

ವೈರಲ್ ವಿಡಿಯೊ



ಕೆಲವು ವರ್ಷಗಳ ಹಿಂದೆ ರಾಕೇಶ್ ಮತ್ತೊಬ್ಬ ವಿದ್ಯಾರ್ಥಿನಿಯೊಂದಿಗೆ ಇದೇ ರೀತಿಯ ಘಟನೆ ನಡೆದಿತ್ತು ಎಂದು ಆರೋಪಿಸಲಾಗಿದೆ. ಸಂತ್ರಸ್ತೆ ಆತನ ವಿರುದ್ಧ ಪೊಲೀಸ್ ದೂರು ನೀಡಿದ ನಂತರ ಶಿಕ್ಷಕನನ್ನು ಜೈಲಿಗೆ ಹಾಕಲಾಗಿತ್ತು. ಇದೀಗ ಮತ್ತೆ ರಾಕೇಶ್ ವಿರುದ್ಧ ಮತ್ತದೇ ರೀತಿಯ ಆರೋಪ ಬಂದಿದೆ. ಇದು ಸ್ಥಳೀಯರಲ್ಲಿ ಕೋಪ ತರಿಸಿದ್ದು, ಶಿಕ್ಷಕ ರಾಕೇಶ್‍ನನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಪೋಷಕರು ತಮ್ಮ ಮಕ್ಕಳ ವಿರುದ್ಧ ನಡೆಯುವ ಇಂತಹ ಹೇಯ ಕೃತ್ಯಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಸ್ಥಳೀಯರು ಸೂಚಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಪ್ರಸ್ತುತ ಪರಿಸ್ಥಿತಿಯನ್ನು ತನಿಖೆ ನಡೆಸುತ್ತಿದ್ದಾರೆ, ನಂತರ ಆರೋಪಿಗಳ ವಿರುದ್ಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಆಡಳಿತ ಮಂಡಳಿ ಬಹಿರಂಗಪಡಿಸಿದೆ. ಘಟನೆ ಬಳಿಕ ಶಿಕ್ಷಕ ಪರಾರಿಯಾಗಿದ್ದರೂ, ತರಬೇತಿ ಸಂಸ್ಥೆ ತನ್ನ ಸ್ಥಳವನ್ನು ಬದಲಾಯಿಸಿದೆ ಎಂದು ಪ್ರದೇಶದ ನಿವಾಸಿಗಳು ಮಾಹಿತಿ ನೀಡಿದ್ದಾರೆ.

ಇದೇ ರೀತಿಯ ಅಪರಾಧ

ಜುಲೈನಲ್ಲಿ, ಮುಂಬೈನಲ್ಲಿ ಅಪ್ರಾಪ್ತ ವಯಸ್ಕ ವಿದ್ಯಾರ್ಥಿಗೆ ಅಶ್ಲೀಲ ವಿಡಿಯೊ ಕರೆ ಮಾಡಿದ ಆರೋಪದ ಮೇಲೆ ಪೊಲೀಸರು 35 ವರ್ಷದ ಮಹಿಳಾ ಶಿಕ್ಷಕಿಯನ್ನು ಬಂಧಿಸಿದ್ದರು. ಬಾಲಕ ಘಟನೆಯ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡರು.

ಇದನ್ನೂ ಓದಿ: Viral Video: ಲಬುಬು ಗೊಂಬೆಗೆ ಪೂಜೆ-ಪುನಸ್ಕಾರ ಮಾಡಿದ ಮಹಿಳೆ; ಇಲ್ಲಿದೆ ವಿಡಿಯೊ