ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ವಿದ್ಯಾರ್ಥಿನಿಗೆ ಹಿಗ್ಗಾಮುಗ್ಗಾ ಥಳಿಸಿದ ಪಾಪಿ ಶಿಕ್ಷಕ: ವಿಡಿಯೋ ನೋಡಿದ್ರೆ ಸಿಟ್ಟು ಬರುತ್ತೆ

ಹರಿಯಾಣದ ಫತೇಹಾಬಾದ್‌ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಮನಬಂದಂತೆ ಥಳಿಸುತ್ತಿರುವ ಘಟನೆ ನಡೆದಿದೆ. ಸದ್ಯ ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತ ವಾಗಿದೆ. ಶಿಕ್ಷಕನು ಸಾಲಿನಲ್ಲಿ ನಿಂತಿದ್ದ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿ, ನಂತರ ಆಕೆಯ ಕೂದ ಲನ್ನು ಹಿಡಿದು ಮೊಣಕಾಲಿಗೆ ಹೊಡೆಯುವ ದೃಶ್ಯ ಕಂಡು ಬಂದಿದೆ..

ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿ ಹಲ್ಲೆ ನಡೆಸಿದ ಶಿಕ್ಷಕ: ವಿಡಿಯೊ ವೈರಲ್!

(ಸಂಗ್ರಹ ಚಿತ್ರ) -

Profile
Pushpa Kumari Dec 3, 2025 4:52 PM

ಚಂಡೀಗಢ: ಇಂದು ಪಾಠ ಹೇಳಿಕೊಡುವ ಶಿಕ್ಷಕರು ಮಕ್ಕಳ ಮೇಲೆ ಅತಿರೇಕದ ವರ್ತನೆ ತೋರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಹರಿಯಾಣದ ಫತೇಹಾಬಾದ್‌ ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಮನಬಂದಂತೆ ಥಳಿಸುತ್ತಿರುವ ಘಟನೆ ನಡೆದಿದೆ. ಸದ್ಯ ಈ ವಿಡಿಯೊ ವೈರಲ್ (Viral Video) ಆಗುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತ ವಾಗಿದೆ. ಶಿಕ್ಷಕನು ಸಾಲಿನಲ್ಲಿ ನಿಂತಿದ್ದ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿ, ನಂತರ ಆಕೆಯ ಕೂದಲನ್ನು ಹಿಡಿದು ಮೊಣಕಾಲಿಗೆ ಹೊಡೆಯುವ ದೃಶ್ಯ ಕಂಡು ಬಂದಿದೆ. ಸದ್ಯ ಪ್ರಾಂಶುಪಾಲರ ಅಮಾನುಷ ಕೃತ್ಯದ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ತನಿಖೆಗೆ ಆದೇಶ ನೀಡಲಾಗಿದೆ

ನವೆಂಬರ್ 24 ರಂದು ಹರಿಯಾಣದ ಫತೇಹಾಬಾದ್‌ನ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಪ್ರಾಂಶುಪಾಲರೇ ವಿದ್ಯಾರ್ಥಿಗಳಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ವಿಡಿಯೊದಲ್ಲಿ ಪ್ರಾಂಶುಪಾಲರು ಸಾಲಿನಲ್ಲಿ ನಿಂತಿದ್ದ ವಿದ್ಯಾರ್ಥಿನಿಯರಲ್ಲಿ ಒಬ್ಬಳಿಗೆ‌ ಕಪಾಳಮೋಕ್ಷ ಮಾಡಿ, ನಂತರ ಆಕೆಯ ಕೂದಲನ್ನು ಹಿಡಿದು ಹೊಡೆಯುವ ದೃಶ್ಯ ಕಂಡುಬಂದಿದೆ. ನಂತರ ಅದೇ ಶಿಕ್ಷಕ ಇನ್ನೊಬ್ಬ ವಿದ್ಯಾರ್ಥಿನಿಯ ಮೇಲೆ ಸಹ ಹಲ್ಲೆ ನಡೆಸಲು ಮುಂದಾಗಿದ್ದಾರೆ.

ವಿಡಿಯೋ ನೋಡಿ:



ಹಲ್ಲೆ ಆದ ವಿದ್ಯಾರ್ಥಿಗಳು 11 ಮತ್ತು 12 ನೇ ತರಗತಿಯ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ. ಶಾಲಾ ಸಿಬ್ಬಂದಿಗಳು ತಿಳಿಸಿದಂತೆ ವಿದ್ಯಾರ್ಥಿನಿಯರು ಶಾಲೆಗೆ ಮೊಬೈಲ್ ತಂದು ಬಳಕೆ ಮಾಡುತ್ತಿದ್ದರು ಎನ್ನುವ ಕಾರಣಕ್ಕೆ ಪ್ರಾಂಶುಪಾಲರು ಈ ರೀತಿ ಕ್ರೌರ್ಯ ಮೆರೆದಿದ್ದಾರೆ‌. ಸದ್ಯ ಈ ಘಟನೆ ನಡೆದ ಬಳಿಕ ಪ್ರಾಂಶುಪಾಲರ ಗುರುತು ಇನ್ನು ಬಹಿರಂಗವಾಗಿಲ್ಲ. ಈ ಅಮಾನುಷ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆ ಆರಂಭಿ ಸಿದ್ದಾರೆ.

Viral News: ಜಸ್ಟ್‌ 20 ನಿಮಿಷಕ್ಕೆ ಮುರಿದು ಬಿತ್ತು ಮದುವೆ! ಗಂಡನ ಮನೆ ಸೇರುತ್ತಿದ್ದಂತೆ ದಾಂಪತ್ಯ ಜೀವನ ನಿರಾಕರಿಸಿದ್ದೇಕೆ ನವ ವಧು?

ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದ್ದು,‌ ವ್ಯಾಪಕ ಆಕ್ರೋಶ ಗಳು ವ್ಯಕ್ತವಾಗಿವೆ. ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ದೈಹಿಕವಾಗಿ ಹಲ್ಲೆ ಮಾಡುವುದು ಕಾನೂನುಬಾಹಿರವಾಗಿದ್ದು, ಈ ದೃಶ್ಯವು ಮಕ್ಕಳ ಸುರಕ್ಷತೆ ಮತ್ತು ಶಿಕ್ಷಕರ ಜವಾಬ್ದಾರಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಉಂಟು ಮಾಡಿದೆ. ಸಾಮಾನ್ಯವಾಗಿ ವಿದ್ಯಾರ್ಥಿಗಳು ತಪ್ಪು ಮಾಡಿದ್ದರೂ ಬುದ್ಧಿವಾದ ಹೇಳುತ್ತಾರೆ. ಆದರೆ ಶಿಕ್ಷಕ ಇಲ್ಲಿ ವಿಕೃತಿ ಮೆರೆದಿದ್ದಾರೆ. ಹಾಗಾಗಿ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು, ಇಂತಹ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಬಳಕೆದಾರರೊಬ್ಬರು ರಾಷ್ಟ್ರೀಯ ಮಹಿಳಾ ಆಯೋಗ "ಇಂತಹ ಮಕ್ಕಳ ಮೇಲಿನ ದೌರ್ಜನ್ಯ ಎಸಗುವವರ ವಿರುದ್ಧ POSCO ಕಾಯ್ದೆಯನ್ನು ಪ್ರಾರಂಭಿಸಬೇಕು ಎಂದು ಬರೆದುಕೊಂಡಿದ್ದಾರೆ.