Viral Video: ಬಸ್ ಡಿಕ್ಕಿ ಹೊಡೆದು ಹಾರಿ ಹೋಗಿ ಪಿಕಪ್ ಗಾಡಿ ಕೆಳಗೆ ಬಿದ್ದ ಬೈಕ್ ಸವಾರ; ಮುಂದೇನಾಯ್ತು? ವಿಡಿಯೊ ನೋಡಿ
ಅಜಾಗರೂಕತೆಯಿಂದ ಚಲಿಸಿದ ರಾಜ್ಯ ಸಾರಿಗೆ ಬಸ್ ಚಾಲಕ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್‍ನ ವಲ್ಸಾದ್‍ನಲ್ಲಿ ಇತ್ತೀಚೆಗೆ ನಡೆದಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಬೈಕ್ ಸವಾರನು ಬೈಕಿನಿಂದ ಹಾರಿ ಹೋಗಿ ರಸ್ತೆಯಲ್ಲಿ ಬಿದ್ದು, ಪಿಕಪ್ ಜೀಪ್ ಅಡಿಯಲ್ಲಿ ಸಿಲುಕಿಕೊಂಡಿದ್ದಾನಂತೆ. ಈ ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ ಸೋಶಿಯಲ್ ಮಿಡಿಯಾದಲ್ಲಿ ವೈರಲ್(Viral Video) ಆಗಿದೆ.


ಗಾಂಧಿನಗರ: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿ ನಡೆಯುತ್ತಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊಗಳು ಸೋಶಿಯಲ್ ಮಿಡಿಯಾಗಳಲ್ಲಿ ಹರಿದಾಡುತ್ತಿರುತ್ತವೆ. ಅದೇ ರೀತಿ ಇದೀಗ ಅಜಾಗರೂಕತೆಯಿಂದ ಚಲಿಸಿದ ರಾಜ್ಯ ಸಾರಿಗೆ ಬಸ್ ಚಾಲಕ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಪಿಕಪ್ ಜೀಪ್ ಅಡಿಯಲ್ಲಿ ಹೋಗಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್‍ನ ವಲ್ಸಾದ್‍ನಲ್ಲಿ ಇತ್ತೀಚೆಗೆ ನಡೆದಿದೆ. ಈ ಆಘಾತಕಾರಿ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಹಾಗೂ ಘಟನೆಯ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದು ಸಿಕ್ಕಾಪಟ್ಟೆ ವೈರಲ್(Viral Video) ಆಗಿವೆ. ಧರಂಪುರ ಗ್ರಾಮದ ಜಂಕ್ಷನ್ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ವೈರಲ್ ಆದ ವಿಡಿಯೊದಲ್ಲಿ, ವೇಗವಾಗಿ ಬಂದ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದು ಸೆರೆಯಾಗಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನು ಬೈಕಿನಿಂದ ಹಾರಿ ಹೋಗಿ ರಸ್ತೆಯಲ್ಲಿ ಬಿದ್ದು, ಪಿಕಪ್ ಜೀಪ್ ಅಡಿಯಲ್ಲಿ ಸಿಲುಕಿಕೊಂಡಿದ್ದಾನೆ. ಅದೃಷ್ಟವಶಾತ್, ಪಿಕಪ್ ಜೀಪ್ ಚಾಲಕ ಸಮಯಕ್ಕೆ ಸರಿಯಾಗಿ ಬ್ರೇಕ್ ಹಾಕಿದ್ದಕ್ಕೆ ದೊಡ್ಡ ಅಪಘಾತವೊಂದು ತಪ್ಪಿದೆ. ಘಟನೆಯಲ್ಲಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಅವನ ತಲೆ ಮತ್ತು ದೇಹದ ಹಲವಾರು ಭಾಗಗಳಲ್ಲಿ ತೀವ್ರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಈ ಭೀಕರ ಅಪಘಾತದ ವಿಡಿಯೊ ಇಲ್ಲಿದೆ ನೋಡಿ...
ಈ ಸುದ್ದಿಯನ್ನೂ ಓದಿ:Viral Video: ಕುಡಿದ ಮತ್ತಿನಲ್ಲಿ ಯದ್ವಾ-ತದ್ವಾ ಕಾರು ಚಲಾಯಿಸಿ ಮಾಡಿದ ಎಡವಟ್ಟು ಒಮ್ಮೆ ನೋಡಿ- ವಿಡಿಯೊ ವೈರಲ್
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸಿದ್ದಾರೆ. ಬಸ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಮುಖ್ಯ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಘಟನೆಯ ನಂತರ ನಾಪತ್ತೆಯಾಗಿರುವ ಆತನನ್ನು ಪತ್ತೆ ಹಚ್ಚಲಾಗುವುದು ಎಂದು ತಿಳಿಸಿದ್ದಾರೆ.
ಯುವಕನಿಗೆ ಡಿಕ್ಕಿ ಹೊಡೆದ ಬೈಕ್!
ಇತ್ತೀಚೆಗೆ ರಸ್ತೆ ಅಪಘಾತಕ್ಕೆ ಸಂಬಂಧಿಸಿದ ಘಟನೆಗಳು ಹಲವಾರು ದಾಖಲಾಗಿದ್ದು, ಇತ್ತೀಚೆಗಷ್ಟೇ ಲಿಫ್ಟ್‌ಗಾಗಿ ಕಾಯುತ್ತಿದ್ದ ಯುವಕನಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‍ನ ನಂದಗ್ರಾಮ್ ಪ್ರದೇಶದ ವಿವಿಐಪಿ ಮಾಲ್ ಹೊರಗೆ ನಡೆದಿದೆ. ಈ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರ ವಿಡಿಯೊ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಅವನು ಗಾಳಿಯಲ್ಲಿ ಹಾರಿ ಬಹಳ ದೂರ ಹೋಗಿ ಬಿದ್ದಿದ್ದಾನಂತೆ. ವರದಿಗಳ ಪ್ರಕಾರ, ಅತನ ತಲೆಗೆ ಗಾಯಗಳಾಗಿದ್ದು, ಅಪಘಾತದಲ್ಲಿ ಕಾಲು ಕೂಡ ಮುರಿದಿದೆಯಂತೆ.