ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

‌Viral News: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಚಾಲಕ; 8 ಬೈಕ್‍ಗಳಿಗೆ ಡಿಕ್ಕಿ, 3 ಮಂದಿಗೆ ಗಾಯ- ಶಾಕಿಂಗ್‌ ವಿಡಿಯೊ ವೈರಲ್

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಚಾಲಕ ನಿಂತಿದ್ದ ಬೈಕ್‍ಗಳಿಗೆ ಡಿಕ್ಕಿ ಹೊಡೆದ ಘಟನೆ ತೆಲಂಗಾಣದ ಜಂಗಾವ್‍ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಕುಡಿದ ಮತ್ತಿನಲ್ಲಿ ಕಾರು ಚಾಲಕನ ಅವಾಂತರ- ಶಾಕಿಂಗ್‌ ವಿಡಿಯೊ ವೈರಲ್‌

Profile pavithra Feb 18, 2025 4:02 PM

ಹೈದರಾಬಾದ್‌: ತೆಲಂಗಾಣದ ಜಂಗಾವ್‍ನಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎಂಟು ಬೈಕ್‍ಗಳಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಕುಡಿದ ಮತ್ತಿನಲ್ಲಿ ಚಾಲಕ ಕಾರು ಚಲಾಯಿಸಿದ ಕಾರಣ ತನ್ನ ಕಾರಿನ ಮೇಲೆ ನಿಯಂತ್ರಣ ಕಳೆದುಕೊಂಡು ನಿಂತಿದ್ದ ಬೈಕ್‍ಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಈ ಭಯಾನಕ ದೃಶ್ಯ ಹತ್ತಿರದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ವೈರಲ್ ವಿಡಿಯೊದಲ್ಲಿ ಜನಗಾಂವ್‍ನ ಸೂರ್ಯಪೇಟ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆಯ ಬಜಾಜ್ ಎಲೆಕ್ಟ್ರಿಕಲ್ಸ್ ಸ್ಟೋರ್ ಬಳಿ ಬರುತ್ತಿದ್ದಾಗ ಕುಡಿದ ಮತ್ತಿನಲ್ಲಿದ್ದ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ಬೈಕ್‌ ಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಅದು ಅಲ್ಲದೇ, ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದವರಿಗೆ ಕೂಡ ಕಾರು ಡಿಕ್ಕಿ ಹೊಡೆದಿದೆ.



ಅಪಘಾತದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಗಾಯಗೊಂಡವರು ಕಾರಿನ ಪ್ರಯಾಣಿಕರೇ ಅಥವಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ದಾರಿಹೋಕರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವರದಿ ಪ್ರಕಾರ, ಕಾರಿನಲ್ಲಿ ನಾಲ್ವರು ಮಧ್ಯವಯಸ್ಕ ಪ್ರಯಾಣಿಕರಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಕುಡಿದು ವಾಹನ ಚಲಾಯಿಸುತ್ತಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಈ ಹಿಂದೆ ತೆಲಂಗಾಣದ ರಾಮನಾಥಪುರದಲ್ಲಿ ಕುಡಿದ ಮತ್ತಿನಲ್ಲಿ ಆಟೋ ಚಾಲಕನೊಬ್ಬ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಾಲಕನ ಜೊತೆಗಿದ್ದ ಆತನ ತಂದೆ ತೀವ್ರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಬಾಲಕ ಮತ್ತು ಅವನ ತಂದೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಟೋ ವಿರುದ್ಧ ದಿಕ್ಕಿನಿಂದ ಬಂದು ಬಾಲಕನಿಗೆ ಡಿಕ್ಕಿ ಹೊಡೆದಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಈ ಬಗ್ಗೆ ಉಪ್ಪಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ: Road Accident: ಭೀಕರ ರಸ್ತೆ ಅಪಘಾತ; ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ 8 ಮಂದಿ ಬಲಿ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ (Maha Kumbh)ಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್‌ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ-ಅಜ್ಮೀರ್‌ ಹೆದ್ದಾರಿಯ ದುಡು (Dudu) ಎಂಬಲ್ಲಿ ಅಪಘಾತ ನಡೆದಿದೆ. ಕಾರು ಭಿಲ್ವಾರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರೆ, ಬಸ್‌ ಜೈಪುರದಿಂದ ಜೋಧಪುರಕ್ಕೆ ಹೋಗುತ್ತಿತ್ತು. ಬಸ್‌ನಲ್ಲಿ 30ರಿಂದ 40 ಪ್ರಯಾಣಿಕರಿದ್ದರು.

ಟೈರ್‌ ಸ್ಫೋಟಗೊಂಡ ಕಾರಣ ನಿಯಂತ್ರಣ ಕಳೆದುಕೊಂಡ ಬಸ್‌ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದು ಜೈಪುರ ರೂರಲ್‌ ಎಸ್‌ಪಿ ಆನಂದ್‌ ಶರ್ಮಾ ಮಾಹಿತಿ ನೀಡಿದ್ದಾರೆ. ಮೃತರನ್ನು ಭಿಲ್ವಾರದ ಕೊಟ್ರಿ ಪ್ರದೇಶದ ನಿವಾಸಿಗಳಾದ ದಿನೇಶ್ ರೇಗರ್, ಸುರೇಶ್ ರೇಗರ್, ರವಿಕಾಂತ್ ರೇಗರ್, ಬಾಬು ರೇಗರ್, ಬಬ್ಲು ಮೇವಾರ, ಕಿಶನ್ ಲಾಲ್, ನಾರಾಯಣ ಬೈರ್ವಾ ಮತ್ತು ಪ್ರಮೋದ್ ಸುತಾರ್ ಎಂದು ಗುರುತಿಸಲಾಗಿದೆ.