ಲಖನೌ: ಉತ್ತರ ಪ್ರದೇಶದ ಫಿರೋಜಾಬಾದ್‍ನ ಆಸ್ಪತ್ರೆಯೊಂದರಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಆಸ್ಪತ್ರೆಯ ಒಳಗೆ ನಮಾಜ್ ಮಾಡಿದ್ದಾನೆ. ಆತ ಆಸ್ಪತ್ರೆಯ ಒಳಗೆ ನಮಾಜ್ ಮಾಡಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದು ಸೋಶಿಯಲ್ ಮಿಡಿಯಾದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ವಿಡಿಯೊಗೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. ಫಿರೋಜಾಬಾದ್‍ನ 100 ಬೆಡ್ ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ವೃದ್ಧ ವ್ಯಕ್ತಿಯೊಬ್ಬ ಆಸ್ಪತ್ರೆಯ ಒಳಗೆ ಸ್ಟ್ರೆಚರ್ ಬಳಿ ನಮಾಜ್ ಮಾಡಿದ್ದಾನೆ. ಈ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್(Viral Video) ಆಗಿದೆ. ಕೆಲವರು ಆ ವ್ಯಕ್ತಿಯನ್ನು ಬೆಂಬಲಿಸಿದರೆ, ಇತರರು ಆಸ್ಪತ್ರೆಯ ಒಳಗೆ ಪ್ರಾರ್ಥಿಸಿದ್ದಕ್ಕಾಗಿ ವ್ಯಕ್ತಿಯ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ.
ಈ ವಿಡಿಯೊ ಅಸಲಿಯೇ? ಅಥವಾ ನಕಲಿಯೇ? ಎಂಬುದು ದೃಢಪಟ್ಟಿಲ್ಲ ಮತ್ತು ಆಸ್ಪತ್ರೆಯ ಒಳಗೆ ನಮಾಜ್ ಮಾಡಿದ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡ ಬಗ್ಗೆ ವರದಿಗಳಿಲ್ಲ. ಆದರೆ ಈ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆದ ನಂತರ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಆಸ್ಪತ್ರೆಯೊಳಗೆ ನಮಾಜ್ ಮಾಡಿದ ವ್ಯಕ್ತಿಯ ವಿಡಿಯೊ ಇಲ್ಲಿದೆ:
ಆಸ್ಪತ್ರೆಯಲ್ಲಿ ನಮಾಜ್ ಮಾಡಿದ ಘಟನೆ ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯ ಜೊತೆ ಬಂದ ಮಹಿಳೆಯೊಬ್ಬಳು ನಮಾಜ್ ಮಾಡಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆಸ್ಪತ್ರೆಯ ಅಧಿಕಾರಿಗಳು ಮಹಿಳೆಗೆ ಮತ್ತೆ ಈ ಕೆಲಸ ಮಾಡದಂತೆ ಎಚ್ಚರಿಕೆ ನೀಡಿದ್ದರು. ಆದರೆ ಈ ವಿಡಿಯೊ ವೈರಲ್ ಆದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸುವುದು ಕಾನೂನುಬಾಹಿರವೇ? ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಉಂಟಾಗಿತ್ತು. ಅನೇಕರು ಯಾರಾದರೂ ತಮ್ಮ ಪ್ರೀತಿಪಾತ್ರರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದರು.
ಪ್ರಯಾಗ್‌ರಾಜ್ ಪೊಲೀಸರು ಆರಂಭದಲ್ಲಿ ಈ ಬಗ್ಗೆ ತನಿಖೆ ನಡೆಸಿ ಕೊನೆಗೆ ಟ್ವೀಟ್ ಮಾಡಿ ವಿಡಿಯೊದಲ್ಲಿರುವ ಮಹಿಳೆಗೆ ಯಾವುದೇ ತಪ್ಪು ಉದ್ದೇಶಗಳಿಲ್ಲದೆ ಮತ್ತು ಯಾವುದೇ ಕೆಲಸ ಅಥವಾ ಸಂಚಾರಕ್ಕೆ ಅಡ್ಡಿಪಡಿಸದೆ, ರೋಗಿಯ ಚೇತರಿಕೆಗಾಗಿ ನಮಾಜ್ ಮಾಡಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಕೃತ್ಯವು ಯಾವುದೇ ವರ್ಗದ ಅಪರಾಧಕ್ಕೆ ಸೇರುವುದಿಲ್ಲ. ತಪ್ಪಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ:Hanuman Chalisa Row: ನಮಾಜ್ ವೇಳೆ ಹನುಮಾನ್ ಚಾಲೀಸಾ ಪಠಣ; 7 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ
ವಾರಣಾಸಿಯ ಕಾಲೇಜಿನ ಆವರಣದಲ್ಲಿರುವ ಮಸೀದಿಯೊಂದರಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಹನುಮಾನ್ ಚಾಲೀಸಾ ಪಠಣ ಮಾಡಿದ ಆರೋಪದ ಮೇಲೆ ಏಳು ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಉತ್ತರ ಪ್ರದೇಶದ ವಾರಣಾಸಿಯ ಕಾಲೇಜೊಂದರ ಆವರಣದಲ್ಲಿರುವ ಮಸೀದಿಗೆ ಬಂದು ಹೊರಗಿನವರು ನಮಾಜ್ ಮಾಡಿದ ಕಾರಣಕ್ಕಾಗಿ ಅಲ್ಲಿನ ವಿದ್ಯಾರ್ಥಿಗಳು ಸಿಟ್ಟಿಗೆದ್ದು ಜೋರಾಗಿ ಹನುಮಾನ್ ಚಾಲೀಸಾ ಪಠಣ ಮಾಡಿದ್ದು, ಏಳು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿತ್ತು.