ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಹಿಂದಕ್ಕೆ ಚಲಿಸಿದ ಟಿಪ್ಪರ್; ಪವಾಡಸದೃಶ್ಯವಾಗಿ ಮಹಿಳೆ ಪಾರು

ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಬಳಿ ಭಯಾನಕ ಘಟನೆಯೊಂದು ನಡೆದಿದ್ದು, ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೊದಲ್ಲಿ ಸಿಮೆಂಟ್ ಇಟ್ಟಿಗೆಗಳನ್ನು ತುಂಬಿದ ಟಿಪ್ಪರ್ ಚಾಲಕ ನಿಯಂತ್ರಣ ತಪ್ಪಿ ಹಿಂದಕ್ಕೆ ಚಲಿಸಿದ್ದನ್ನು ಕಾಣಬಹುದು. ಈ ವೇಳೆ ಮಹಿಳೆಯ ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.

ಹಿಂದಕ್ಕೆ ಚಲಿಸಿದ ಟಿಪ್ಪರ್: ತಪ್ಪಿದ ಭಾರಿ ದುರಂತ

ತಿರುವನಂತಪುರಂ: ಸಿಮೆಂಟ್ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಹಿಂದಕ್ಕೆ ಚಲಿಸಿದ್ದು, ಮಹಿಳೆಯೊಬ್ಬರು ಅದೃಷ್ಟವಶಾತ್ ಪಾರಾಗಿರುವ ಘಟನೆ ಕೇರಳದ (Kerala) ಕೋಝಿಕ್ಕೋಡ್ (Kozhikode Medical College)ನಲ್ಲಿ ನಡೆದಿದೆ. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಜಾಗರೂಕರಾಗಿರಿ ಈ ರೀತಿಯೂ ಅಪಾಯಗಳಾಗಬಹುದು ಎನ್ನುವ ಶೀರ್ಷಿಕೆಯೊಂದಿಗೆ ಡಾ. ಶ್ರೀನುಬಾಬು ಗೆದೆಲಾ ಎಂಬವರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಬಳಿ ನಡೆದ ಈ ಭಯಾನಕ ಘಟನೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಬಳಿ ನಡೆದ ಈ ಭಯಾನಕ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಈ ವಿಡಿಯೊದಲ್ಲಿ ಸಿಮೆಂಟ್ ಇಟ್ಟಿಗೆಗಳನ್ನು ತುಂಬಿದ ಟಿಪ್ಪರ್ ಚಾಲಕ ನಿಯಂತ್ರಣ ತಪ್ಪಿ ಹಿಂದಕ್ಕೆ ಚಲಿಸಿದ್ದನ್ನು ಕಾಣಬಹುದು. ಈ ವೇಳೆ ಹಿಂಬದಿಯಲ್ಲಿ ಸಂಚರಿಸುತ್ತಿದ್ದ ಮಹಿಳೆಯ ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಟಿಪ್ಪರ್ ಕೊನೆಗೆ ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ.



ಟಿಪ್ಪರ್ ಅಡಿಗೆ ಬಿದ್ದಿದ್ದ ಸ್ಕೂಟರ್ ನಜ್ಜುಗುಜ್ಜಾಗಿದ್ದು, ಮಹಿಳೆ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಈ ದೃಶ್ಯವಾಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಳಿಕ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರ್‌ ಕುಟುಂಬಕ್ಕೆ 14 ಕೋಟಿ ರೂ. ಪರಿಹಾರ; ಪಾಕ್‌ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ರಾಜನಾಥ್‌ ಸಿಂಗ್‌

ವರದಿಗಳ ಪ್ರಕಾರ ಈ ಘಟನೆ ಮೇ 9ರ ಬೆಳಗ್ಗೆ 7.30ರ ಸುಮಾರಿಗೆ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನ ಬಳಿ ನಡೆದಿದೆ. ಸಿಮೆಂಟ್ ಇಟ್ಟಿಗೆಗಳನ್ನು ಹೊತ್ತೊಯ್ಯುತ್ತಿದ್ದ ಟಿಪ್ಪರ್ ಇದ್ದಕ್ಕಿದ್ದಂತೆ ನಿಯಂತ್ರಣ ಕಳೆದುಕೊಂಡು ಹಿಂದಕ್ಕೆ ಚಲಿಸಿದೆ. ಟಿಪ್ಪರ್ ಹಿಂದೆ ಇದ್ದ ಸ್ಕೂಟರ್‌ಗೆ ಇದು ಡಿಕ್ಕಿಯಾಗಿದೆ. ಅದೃಷ್ಟವಶಾತ್ ಸ್ಕೂಟರ್ ಸವಾರ ಮಹಿಳೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿ ಪಕ್ಕಕ್ಕೆ ಬಿದ್ದಿದ್ದರಿಂದ ಅವರು ಕೂದಲೆಳೆ ಅಂತರದಲ್ಲಿ ಭಾರಿ ಅಪಾಯದಿಂದ ತಪ್ಪಿಸಿಕೊಂಡರು.

ಈ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಟಿಪ್ಪರ್ ನ ಬ್ರೇಕ್ ಫೇಲ್ ಆಗಿರಬಹುದು ಎನ್ನಲಾಗಿದೆ.