ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral News: ಬೆಚ್ಚಿ ಬೀಳಿಸೋ ಘಟನೆ! ಗರ್ಭಿಣಿಯರಿಗೆ ಚಿಕಿತ್ಸೆ ನೀಡುವ ದೃಶ್ಯಗಳು ಸೋರಿಕೆ

ಗುಜರಾತಿನ ಹೆರಿಗೆ ಆಸ್ಪತ್ರೆಯೊಂದರಲ್ಲಿ ಸಿಸಿಟಿವಿಯಲ್ಲಿ ಸೆರೆಯಾದ ಗರ್ಭಿಣಿಯರ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯ ದೃಶ್ಯಗಳು ಸೋರಿಕೆಯಾಗಿ ಟೆಲಿಗ್ರಾಮ್, ಯುಟ್ಯೂಬ್‌ಗಳಲ್ಲಿ ಹರಿದಾಡಿದ್ದು, ಸಾಕಷ್ಟು ವೈರಲ್‌ ಆಗಿದೆ. ಸಿಸಿಟಿವಿ ಸರ್ವ‌ರ್ ಹ್ಯಾಕ್ ಆಗಿದೆ. ನಾವು ಪೊಲೀಸರಿಗೆ ದೂರು ನೀಡುತ್ತೇವೆ ಮತ್ತು ತನಿಖೆಗೆ ಸಹಕರಿಸುತ್ತೇವೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಅಮಿತ್ ಅಕ್ಟರಿ ಹೇಳಿದ್ದಾರೆ.

ಶಾಕಿಂಗ್‌! ಗರ್ಭಿಣಿಯರಿಗೆ ಚಿಕಿತ್ಸೆ ನೀಡುವ ದೃಶ್ಯಗಳು ಸೋರಿಕೆ

ಗರ್ಭಿಣಿ ಮಹಿಳೆಯರಿಗೆ ಚಿಕಿತ್ಸೆ ನೀಡುವ ದೃಶ್ಯಗಳು ಸೋರಿಕೆಯಾಗಿವೆ

Profile Deekshith Nair Feb 18, 2025 3:56 PM

ಗಾಂಧಿನಗರ: ಗುಜರಾತ್‌ನ (‌Gujarat) ಶಾಕಿಂಗ್‌ ಘಟನೆಯೊಂದು ನಡೆದಿದ್ದು, ಹೆರಿಗೆ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಚಿಕಿತ್ಸೆ ನೀಡುವ ವಿಡಿಯೊವೊಂದು ಲೀಕ್‌ ಆಗಿದೆ. ರಾಜಕೋಟ್‌ನ(Rajkot) ಪಾಯಲ್ ಹೆರಿಗೆ ಆಸ್ಪತ್ರೆಯ(Payal Maternity) ಸಿಸಿಟಿವಿಯಲ್ಲಿ ಸೆರೆಯಾದ ಗರ್ಭಿಣಿಯರ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯ ದೃಶ್ಯಗಳು ಸೋರಿಕೆಯಾಗಿ ಟೆಲಿಗ್ರಾಮ್, ಯುಟ್ಯೂಬ್‌ಗಳಲ್ಲಿ ಹರಿದಾಡಿದ್ದು, ವಿಡಿಯೊ ಸಾಕಷ್ಟು(Viral Video) ವೈರಲ್‌ ಆಗಿದೆ. ನಮ್ಮ ಆಸ್ಪತ್ರೆಯಲ್ಲಿ ಸಿಸಿಟಿವಿ ಸರ್ವ‌ರ್ ಹ್ಯಾಕ್ ಆಗಿದೆ. ನಾವು ಪೊಲೀಸರಿಗೆ ದೂರು ನೀಡುತ್ತೇವೆ ಮತ್ತು ತನಿಖೆಗೆ ಸಹಕರಿಸುತ್ತೇವೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಅಮಿತ್ ಅಕ್ಟರಿ ಹೇಳಿದ್ದಾರೆ. ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗುಜರಾತ್‌ನ ರಾಜ್‌ಕೋಟ್‌ನ ಪಾಯಲ್ ಹೆರಿಗೆ ಆಸ್ಪತ್ರೆಯಲ್ಲಿ ನರ್ಸಿಂಗ್ ಸಿಬ್ಬಂದಿ ಗರ್ಭಿಣಿಯರಿಗೆ ಇಂಜೆಕ್ಷನ್ ನೀಡುತ್ತಿರುವ ಸಿಸಿಟಿವಿ ದೃಶ್ಯಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ. ಘಟನೆಯ ಕುರಿತು ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಆಸ್ಪತ್ರೆಯ ನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದು, ಪೊಲೀಸರಿಗೆ ದೂರು ನೀಡಿದ್ದು,ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇವೆ ಎಂದು ಹೇಳಿದ್ದಾರೆ. ಅಹಮದಾಬಾದ್‌ನ ಸೈಬರ್ ಕ್ರೈಮ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಪ್ರಕರಣ ದಾಖಲಿಸಿಕೊಂಡಿರುವ ರಾಜ್‌ಕೋಟ್ ಸೈಬರ್ ಕ್ರೈಮ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಡೀ ಆಸ್ಪತ್ರೆಯ ಸಿಬ್ಬಂದಿ ವಿಚಾರಣೆಗೆ ಒಳಪಟ್ಟಿದೆ.

ಈ ಸುದ್ದಿಯನ್ನೂ ಓದಿ:Modi-Trump Meet: ಭಾರತ-ಅಮೆರಿಕ ನಾಗರಿಕ ಪರಮಾಣು ಸಹಕಾರದಲ್ಲಿ ಮುಂದುವರಿಯಲು ಮೋದಿ-ಟ್ರಂಪ್‌ ಸಮ್ಮತಿ

ವಿಡಿಯೊಗಳಲ್ಲಿರುವ ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ವಿಡಿಯೊಗಳನ್ನು ಯಾರು ಮತ್ತು ಯಾವ ಉದ್ದೇಶಕ್ಕಾಗಿ ತೆಗೆದುಕೊಂಡಿದ್ದಾರೆ ಎಂಬುದರ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ. ಸೈಬರ್ ಅಪರಾಧ ಐಟಿ ಕಾಯ್ದೆಯ ಸೆಕ್ಷನ್ 66ಇ, 67 ರ ಅಡಿಯಲ್ಲಿ ನಾವು ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.