ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral News: ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್! ಮುಸ್ಲಿಂ ಕಿಡಿಗೇಡಿ ಅರೆಸ್ಟ್

ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಶಿವಲಿಂಗದ ಮೇಲೆ ಕಾಲು ಇರಿಸಿ ರೀಲ್ ಮಾಡಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿ ಹಿಂದೂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.

reel craze

ಭೋಪಾಲ್‌: ರೀಲ್‌ ಕ್ರೇಜ್‌ಗಾಗಿ ಜನ ಏನೇನೋ ಮಾಡುತ್ತಿರುತ್ತಾರೆ. ಇದೀಗ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಶಿವಲಿಂಗದ ಮೇಲೆ ಕಾಲು ಇರಿಸಿ ರೀಲ್ ತಯಾರಿಸಿದ್ದಾನೆ. ಇದು ಎಲ್ಲೆಡೆ ವೈರಲ್‌(Viral News) ಆಗಿ ಹಿಂದೂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.ಇದಲ್ಲದೆ ಆತನನ್ನು ಬಂಧಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಾಗ, ಕೋಪಗೊಂಡ ಜನರ ಗುಂಪು ಅವನ ಮೇಲೆ ಹಲ್ಲೆ ನಡೆಸಿದೆ. ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ, ಅವನನ್ನು ಸುರಕ್ಷಿತವಾಗಿ ಹೊರಗೆ ಕರೆದೊಯ್ದಿದ್ದಾರೆ.
ವರದಿಗಳ ಪ್ರಕಾರ, ಆರೋಪಿಯನ್ನು ಇಮ್ರಾನ್ ಸುಖಾ ಎಂದು ಗುರುತಿಸಲಾಗಿದೆ. ಅವನು ಶಿವಲಿಂಗದ ಮೇಲೆ ಪಾದವನ್ನು ಇಟ್ಟು ವಿಡಿಯೊವನ್ನು ಚಿತ್ರೀಕರಿಸಿ ಅದನ್ನು ಜನವರಿ 29ರಂದು (ಬುಧವಾರ) ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಪೋಸ್ಟ್ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.



ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸದಸ್ಯರು ರತ್ಲಾಮ್ನ ಸ್ಟೇಷನ್ ರೋಡ್ ಪೊಲೀಸ್ ಠಾಣೆಗೆ ರೀಲ್‍ನ ಸ್ಕ್ರೀನ್‌ಶಾರ್ಟ್‌ನೊಂದಿಗೆ ಬಂದು ಅದನ್ನು ಸಾಕ್ಷ್ಯವಾಗಿ ಪೊಲೀಸರಿಗೆ ನೀಡಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಆರೋಪಿ ಉದ್ದೇಶಪೂರ್ವಕವಾಗಿ ಹಿಂದೂ ದೇವರನ್ನು ಅವಮಾನಿಸಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಈ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಈ ವಿಡಿಯೊ ಹಿಂದೂ ಸಮುದಾಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ನೆಟ್ಟಿಗರು ಆರೋಪಿ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Viral Video: ಛೇ..ಎಂಥಾ ಪೈಶಾಚಿಕ ಕೃತ್ಯ! ರೀಲ್‌ ಕ್ರೇಜ್‌ಗಾಗಿ ಬೆಕ್ಕುಗಳನ್ನು ಕಟ್ಟಿಹಾಕಿ ಕೊಂದ ಪಾಪಿ- ಬೆಚ್ಚಿ ಬೀಳಿಸುವ ವಿಡಿಯೊ ವೈರಲ್

ಇಮ್ರಾನ್ ಒಬ್ಬ ಅಪರಾಧಿಯಾಗಿದ್ದು, ಆತನ ವಿರುದ್ಧ ಈ ಹಿಂದೆ ಮಾನಕ್ ಚೌಕ್ ಮತ್ತು ಸ್ಟೇಷನ್ ರೋಡ್ ಪೊಲೀಸ್ ಠಾಣೆಗಳಲ್ಲಿ ಅನೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ರತ್ಲಾಮ್ ಪೊಲೀಸರು ಬಹಿರಂಗಪಡಿಸಿದ್ದಾರೆ. ಹಾಗೇ ಈ ಘಟನೆಗೆ ಕೆಲವೇ ದಿನಗಳ ಮೊದಲು ಇಮ್ರಾನ್ ಜೈಲಿನಿಂದ ಬಿಡುಗಡೆಯಾಗಿದ್ದನು ಎನ್ನಲಾಗಿದೆ.