Viral Video: ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಜೊತೆ ವಡಾ ಪಾವ್ ಸವಿದ ಬಿಲ್ ಗೇಟ್ಸ್
ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ವಿರಾಮದ ವೇಳೆ ಬಿಲ್ ಗೇಟ್ಸ್ ಜೊತೆ ಮುಂಬೈನ ಜನಪ್ರಿಯ ತಿಂಡಿ ವಡಾ ಪಾವ್ ತಿಂದಿದ್ದಾರೆ. ಬಿಲ್ ಗೇಟ್ಸ್ ಅವರೊಂದಿಗಿನ ಅಪ್ರತಿಮವಾದ ಈ ಕ್ಷಣವನ್ನು ತಮ್ಮ ಸೋಶಿಯಲ್ ಮಿಡಿಯಾ ಪೇಜ್‍ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಸಿಕ್ಕಾಪಟ್ಟೆ ವೈರಲ್(Viral Video)ಆಗಿದೆ.


ಮುಂಬೈ: ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅವರು ಬಿಲ್ ಗೇಟ್ಸ್ ಅವರೊಂದಿಗೆ ಕಳೆದ ಅಪ್ರತಿಮ ಕ್ಷಣವೊಂದನ್ನು ತಮ್ಮ ಸೋಶಿಯಲ್ ಮಿಡಿಯಾ ಪೇಜ್‍ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊದಲ್ಲಿ ಸಚಿನ್ ತೆಂಡೂಲ್ಕರ್ ವಡಾ ಪಾವ್ ತಿನ್ನುವುದು ಕಂಡುಬಂದಿದೆ. ಆದರೆ ಸಚಿನ್ ತೆಂಡೂಲ್ಕರ್ ಒಬ್ಬರೇ ಅಲ್ಲ ಅವರ ಜೊತೆ ಬಿಲ್ ಗೇಟ್ಸ್ ಕೂಡ ಇದ್ದಾರಂತೆ ಹೀಗಾಗಿ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದ್ದು, ನೆಟ್ಟಿಗರು ಇದನ್ನು ನೋಡಿ ಫುಲ್ ಫಿದಾ ಆಗಿದ್ದಾರೆ.
ಬಿಲ್ ಗೇಟ್ಸ್ ಮತ್ತು ಸಚಿನ್ ತೆಂಡೂಲ್ಕರ್ ಮುಂಬೈನ ಜನಪ್ರಿಯ ತಿಂಡಿಯಾದ ವಡಾ ಪಾವ್ ತಿನ್ನುವ ಕೆಲವು ಕ್ಷಣಗಳನ್ನು ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಈ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಇದು ನೆಟ್ಟಿಗರ ಮನಗೆದ್ದು ವೈರಲ್ ಆಗಿದೆ. ಬಿಲ್ ಗೇಟ್ಸ್ ಭಾರತಕ್ಕೆಆಗಾಗ ಭೇಟಿ ನೀಡುತ್ತಿರುತ್ತಾರೆ. ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕರಾದ ಬಿಲ್ ಗೇಟ್ಸ್ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಮನಾರ್ಹ ವ್ಯಕ್ತಿಗಳನ್ನು ಭೇಟಿ ಮಾಡುತ್ತಿರುತ್ತಾರೆ.
ತಮ್ಮ ಇತ್ತೀಚಿನ ಭೇಟಿಯಲ್ಲಿ, ಬಿಲ್ ಗೇಟ್ಸ್ ಮಹಾರಾಷ್ಟ್ರ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಎಐ ಆಡಳಿತ ಮತ್ತು ಕೃಷಿ ಮತ್ತು ಆರೋಗ್ಯ ಮತ್ತು ಲಖ್ಪತಿ ದೀದಿ ಉಪಕ್ರಮದಂತಹ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಾರಂತೆ. ಬಿಲ್ ಗೇಟ್ಸ್ 2023 ರಲ್ಲಿ ಮುಂಬೈಗೆ ಭೇಟಿ ನೀಡಿದಾಗ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಮತ್ತು ಅವರ ಪತ್ನಿ ಅಂಜಲಿ ತೆಂಡೂಲ್ಕರ್ ಅವರನ್ನು ಭೇಟಿಯಾಗಿದ್ದರು. ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಸಚಿನ್ ಅವರು ಈ ಸಭೆಯನ್ನು "ಲೋಕೋಪಕಾರದ ದೃಷ್ಟಿಕೋನಗಳನ್ನು ಕಲಿಯಲು ಇದು ಅದ್ಭುತ ಅವಕಾಶ" ಎಂದು ಉಲ್ಲೇಖಿಸಿದ್ದಾರೆ. ಇದಕ್ಕೆ ಉತ್ತರಿಸಿದ ಗೇಟ್ಸ್, "ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ನಿಮ್ಮ ಕೆಲಸದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ನನಗೆ ಉತ್ತಮ ಸಮಯ ಸಿಕ್ಕಿದೆ. ಒಟ್ಟಾಗಿ ಕೆಲಸ ಮಾಡಿದರೆ, ನಾವು ಪ್ರಗತಿ ಸಾಧಿಸಬಹುದು ಎಂಬುದು ನನ್ನ ಭರವಸೆ " ಎಂದು ಟ್ವೀಟ್ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ:Bill Gates: ಭಾರತದ ಎಐ ಸಾಧನೆಗೆ ಬಿಲ್ ಗೇಟ್ಸ್ ಶಹಬ್ಬಾಸ್‌ಗಿರಿ; ಲಸಿಕೆ ಉತ್ಪಾದನಾ ಸಾಮರ್ಥ್ಯಕ್ಕೂ ಮೆಚ್ಚುಗೆ
ಈ ವಿಡಿಯೊವನ್ನು ಅಪ್ಲೋಡ್ ಮಾಡಿದ ನಂತರ ಸೋಶಿಯಲ್ ಮೀಡಿಯಾ ನೆಟ್ಟಿಗರ ಗಮನವನ್ನು ಸೆಳೆದಿದೆ. ಹಾಗಾಗಿ ಇದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಈ ಪೋಸ್ಟ್‌ಗೆ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ಶಿಖರ್ ಧವನ್ ಅವರಂತಹ ಪ್ರಸಿದ್ಧ ವ್ಯಕ್ತಿಗಳು ಪ್ರತಿಕ್ರಿಯಿಸಿದ್ದಾರೆ.