ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Viral Video: ರೀಲ್ಸ್ ನೋಡ್ತಾ ಕುಳಿತ ವೈದ್ಯ- ಚಿಕಿತ್ಸೆಗೆ ಬಂದಿದ್ದ ಮಹಿಳೆ ಹೃದಯಘಾತದಿಂದ ಸಾವು

ವೈದ್ಯನ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಆಸ್ಪತ್ರೆಯಲ್ಲಿ ನಡೆದಿದೆ. ಮೈನ್‌ಪುರಿಯ ಮಹಾರಾಜ ತೇಜ್ ಸಿಂಗ್ ಜಿಲ್ಲಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು ವೈದ್ಯ ಆದರ್ಶ್ ಸೆಂಗರ್, ಮಹಿಳೆಗೆ ತುರ್ತು ಚಿಕಿತ್ಸೆ ನೀಡುವ ಬದಲು ಮೊಬೈಲ್‌ನಲ್ಲಿ ರೀಲ್ಸ್‌ ನೋಡ್ತಾ ಕುಳಿತಿರುವ ವಿಡಿಯೊ ವೈರಲ್‌ ಆಗಿದೆ.

ರೀಲ್ಸ್‌ನಲ್ಲಿ ಬ್ಯುಸಿಯಾದ ವೈದ್ಯ- ಚಿಕಿತ್ಸೆಗೆ ಬಂದಿದ್ದ ಮಹಿಳೆ ಸಾವು!

Viral Video

Profile Pushpa Kumari Jan 29, 2025 6:16 PM

ಲಖನೌ: ವೈದ್ಯನ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಆಸ್ಪತ್ರೆಯಲ್ಲಿ ನಡೆದಿದೆ. ಇತ್ತ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದರೂ ಚಿಕಿತ್ಸೆ ನೀಡುವ ಬದಲು ವೈದ್ಯ ಮೊಬೈಲ್​ನಲ್ಲಿ ರೀಲ್ಸ್ ನೋಡುತ್ತಿದ್ದು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ವಿಡಿಯೊ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸದ್ಯ ವಿಡಿಯೊ ಬಹಳಷ್ಟು ಕಡೆ ವೈರಲ್(Viral Video) ಆಗಿದ್ದು ನೆಟ್ಟಿಗರು ವೈದ್ಯನ ಈ ರೀತಿಯ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈನ್‌ಪುರಿಯ ಮಹಾರಾಜ ತೇಜ್ ಸಿಂಗ್ ಜಿಲ್ಲಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ವೈದ್ಯನನ್ನು ಆದರ್ಶ್ ಸೆಂಗರ್ ಎಂದು ಗುರುತಿಸಲಾಗಿದೆ. ಗುರುಶರಣ್ ಸಿಂಗ್ ಎನ್ನುವವರ ತಾಯಿ ಪ್ರವೇಶ್ ಕುಮಾರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ತುರ್ತು ಚಿಕಿತ್ಸಾ ವಿಭಾಗದಲ್ಲಿರುವ ವೈದ್ಯರಿಗೆ ಮಹಿಳೆಯನ್ನು ನೋಡುವಂತೆ ಹಲವು ಬಾರಿ ಮನವಿ ಮಾಡಲಾಗಿತ್ತು. ಈ ವೇಳೆ ಕರ್ತವ್ಯ ನಿರತ ವೈದ್ಯ ಡಾ.ಆದರ್ಶ ಸೆಂಗರ್ ತಮ್ಮ ಕುರ್ಚಿಯ ಮೇಲೆ ಕುಳಿತು ಮೊಬೈಲ್ ನಲ್ಲಿ ರೀಲ್ಸ್‌ ವೀಕ್ಷಿಸುತ್ತಿದ್ದರು ಎಂದು ಕುಟುಂಬದವರು ಆರೋಪ ಮಾಡಿದ್ದಾರೆ.



ಆದಾಗ್ಯೂ, ಸಹಾಯಕ್ಕಾಗಿ ಪದೇ ಪದೇ ಮನವಿ ಮಾಡಿದರೂ ವೈದ್ಯ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ರೀಲ್‌ಗಳನ್ನು ನೋಡುತ್ತಾ ಕುಳಿತಿದ್ದರು ಎಂದು ಗುರುಶರನ್ ಆರೋಪಿಸಿದ್ದು ಚಿಕಿತ್ಸೆ ನೀಡುವಂತೆ ನರ್ಸಿಂಗ್ ಸಿಬ್ಬಂದಿಗೆ ಸೂಚಿಸಿದ್ದಾರೆ. ಈ ಸಂದರ್ಭ ವೈದ್ಯರು ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ಮಹಿಳೆಯ ಪುತ್ರ ವೈದ್ಯರೊಂದಿಗೆ ಗಲಾಟೆ ಮಾಡಿದ್ದಾರೆ. ಈ ವೇಳೆ ವೈದ್ಯರು ರೋಗಿಯ ಮಗನಿಗೆ ಕಪಾಳಮೋಕ್ಷ ಮಾಡಿದ್ದು ಆ ಹೊತ್ತಿಗೆ, ನನ್ನ ತಾಯಿ ಮೃತಪಟ್ಟಿದ್ದರು ಎಂದು ಮಗ ಗುರುಶರಣ್ ಆರೋಪಿಸಿದ್ದಾರೆ.

ಇದನ್ನು ಓದಿ: Viral News: ವಿಮಾನ ಟೇಕ್‌-ಆಫ್ ಮುಂಚೆಯೇ ಎಮರ್ಜೆನ್ಸಿ ಎಕ್ಸಿಟ್‌ ಡೋರ್‌ ತೆಗೆದ ವ್ಯಕ್ತಿ ಅರೆಸ್ಟ್!

ತಾಯಿ ಮೃತಪಟ್ಟ ಬೆನ್ನಲ್ಲೇ ಗುರುಶರಣ್ ಸಿಂಗ್ ಕುಟುಂಬಸ್ಥರು ಆಪ್ತರು ಆಸ್ಪತ್ರೆಗೆ ಆಗಮಿಸಿದ್ದು ಆಸ್ಪತ್ರೆ ಆವರಣದಲ್ಲಿ ಭಾರಿ ಪ್ರತಿಭಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಕಂಡ ಮುಖ್ಯ ವೈದ್ಯಕೀಯ ಅಧೀಕ್ಷಕ ಮದನ್ ಲಾಲ್ ಕೂಡ ಘಟನಾ ಸ್ಥಳಕ್ಕೆ ಆಗಮಿಸಿದರು. ಈಗಾಗಲೇ ಆಸ್ವತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು ಈ ಆರೋಪಗಳು ನಿಜವಾದರೆ ವೈದ್ಯನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಸ್ವತ್ರೆಯ ಸಿಎಂಒ ತನಿಖೆಗೆ ಆದೇಶಿಸಿದ್ದಾರೆ. ಪೊಲೀಸರು ಈಗಾಗಲೇ ಘಟನೆಯ ತನಿಖೆ ಆರಂಭಿಸಿದ್ದಾರೆ.