Viral Video: ಮೊಬೈಲ್ ಕಸಿದು ಯುವತಿಯನ್ನು ಧರ ಧರನೆ ಎಳೆದೊಯ್ದ ದುಷ್ಕರ್ಮಿ- ಭಯಾನಕ ವಿಡಿಯೊ ವೈರಲ್!
ಯುವತಿ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ಆಕೆಯನ್ನು ಹಿಂಬಾಲಿಸುತ್ತಿದ್ದ ವ್ಯಕ್ತಿಯೊಬ್ಬ ಸ್ಕೂಟರ್‌ನಲ್ಲಿ ಹಿಂದಿನಿಂದ ಬಂದು ಆಕೆಯ ಫೋನ್ ಕಸಿದುಕೊಳ್ಳಲು ಪ್ರಯತ್ನ ಪಟ್ಟಿದ್ದು, ದುಷ್ಕರ್ಮಿ ಆಕೆಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿರುವ ಭಯಾನಕ ದೃಶ್ಯವನ್ನು ವಿಡಿಯೊದಲ್ಲಿ ನೋಡಬಹುದು.


ಚಂಡೀಗಢ: ಯುವತಿಯೊಬ್ಬಳು ಮೊಬೈಲ್ನಲ್ಲಿ ದಾರಿಯುದ್ದಕ್ಕೂ ಮಾತನಾಡಿಕೊಂಡು ಹೋಗುತ್ತಿರುವಾಗ ಕಿಡಿಗೇಡಿಯೊಬ್ಬ ಸ್ಕೂಟರ್‌ನಲ್ಲಿ ಬಂದು ಫೋನ್ ಕಸಿದುಕೊಳ್ಳಲು ಯತ್ನಿಸಿ ಆಕೆಯನ್ನು ರಸ್ತೆಯುದ್ಧಕ್ಕೂ ಧರಧರನೆ ಎಳೆದೊಯ್ದ ಅಘಾತಕಾರಿ ಘಟನೆ ಪಂಜಾಬ್‌ನ ಲೂಧಿಯಾನದಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ವೈರಲ್ ಆಗಿದ್ದು, ಈ ಭಯಾನಕ ವಿಡಿಯೊ(Viral Video) ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.
ಯುವತಿ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ಆಕೆಯನ್ನು ಹಿಂಬಾಲಿಸುತ್ತಿದ್ದ ವ್ಯಕ್ತಿಯೊಬ್ಬ ಸ್ಕೂಟರ್‌ನಲ್ಲಿ ಹಿಂದಿನಿಂದ ಬಂದು ಆಕೆಯ ಫೋನ್ ಕಸಿದುಕೊಳ್ಳಲು ಪ್ರಯತ್ನಪಟ್ಟಿದ್ದು, ದುಷ್ಕರ್ಮಿ ಆಕೆಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿರುವ ಭಯಾನಕ ದೃಶ್ಯವನ್ನು ವಿಡಿಯೊದಲ್ಲಿ ನೋಡಬಹುದು.
ವಿಡಿಯೊದಲ್ಲಿ ಏನಿದೆ?
ಪಂಜಾಬ್‌ನ ರೋಸ್ ಗಾರ್ಡನ್ ಬಳಿ ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಯೊಬ್ಬ ಯುವತಿಯ ಮೊಬೈಲ್ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿರುವುದನ್ನು ವಿಡಿಯೊದಲ್ಲಿ ನೋಡಬಹುದು. ಮಹಿಳೆಯನ್ನು ಸ್ವಲ್ಪ ದೂರದವರೆಗೆ ರಸ್ತೆಯ ಮೇಲೆ ಎಳೆದುಕೊಂಡು ಹೋಗಿದ್ದರೂ ಸಹ ತನ್ನ ಫೋನ್ ಅನ್ನು ಹಿಡಿದಿಟ್ಟುಕೊಳ್ಳಲು ಆಕೆ ಪ್ರಯತ್ನ ಪಟ್ಟಿದ್ದಾಳೆ. ಘಟನೆ ನಡೆಯುತ್ತಿದ್ದಂತೆ ಅಲ್ಲಿದ್ದ ಜನರು ಮಹಿಳೆಯ ಬಳಿಗೆ ಓಡಿ ಕಳ್ಳನನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆ ವ್ಯಕ್ತಿ ಅದಾಗಲೇ ಪರಾರಿಯಾಗಿದ್ದಾನೆ.
ಇದನ್ನು ಓದಿ: Viral News: ಚಾಲಾಕಿ ಕಳ್ಳನಿಗೆ ಬಸ್ ಕಂಡಕ್ಟರ್‌ನಿಂದ ತಕ್ಕ ಶಾಸ್ತಿ; ಅಷ್ಟಕ್ಕೂ ಆಗಿದ್ದೇನು?
ವರದಿಗಳ ಪ್ರಕಾರ, ಮಹಿಳೆ ಗಾರ್ಮೆಂಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಕೆಲಸದಿಂದ ಮನೆಗೆ ಹಿಂದಿರುಗಲು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ. ಮಹಿಳೆ ನಡೆದುಕೊಂಡು ಹೋಗುವುದನ್ನು ಗಮನಿಸಿದ ವ್ಯಕ್ತಿ ಜನಸಂದಣಿಯ ಪ್ರದೇಶವಾಗಿದ್ದರೂ ಈ ಕೃತ್ಯವನ್ನು ಎಸಗಲು ಮುಂದಾಗಿದ್ದಾನೆ. ಎಳೆದೊಯ್ದ ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಶಂಕಿತನನ್ನು ಲುಧಿಯಾನ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಪವನದೀಪ್ ಕುಮಾರ್ ಎಂದು ಗುರುತಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.