ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಶಾಲೆಯಲ್ಲಿ ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಪ್ರಿನ್ಸಿಪಾಲ್-ಲೈಬ್ರೆರಿಯನ್; ಶಾಕಿಂಗ್‌ ವಿಡಿಯೊ ಇಲ್ಲಿದೆ

ಮಧ್ಯಪ್ರದೇಶದ ಖಾರ್ಗೋನ್‍ನ ಸರ್ಕಾರಿ ಏಕಲವ್ಯ ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಶಾಲೆಯ ಆವರಣದಲ್ಲಿ ಮಹಿಳಾ ಶಾಲೆಯ ಪ್ರಾಂಶುಪಾಲರು ಮತ್ತು ಮಹಿಳಾ ಲೈಬ್ರೇರಿಯನ್‌ ಇಬ್ಬರು ಜುಟ್ಟು ಹಿಡಿದುಕೊಂಡು ಜಗಳವಾಡಿದ್ದಾರೆ. ಇಡೀ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡು ಈಗ ವೈರಲ್(Viral Video) ಆಗಿದೆ.

ಪ್ರಿನ್ಸಿಪಾಲ್-ಲೈಬ್ರೆರಿಯನ್‌ ನಡುವೆ ಮಾರಾಮಾರಿ; ಏನಿದು ಘಟನೆ?

Profile pavithra May 5, 2025 12:30 PM

ಭೋಪಾಲ್: ಮಧ್ಯಪ್ರದೇಶದ ಖಾರ್ಗೋನ್‍ನ ಸರ್ಕಾರಿ ಏಕಲವ್ಯ ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಶಾಲೆಯ ಆವರಣದಲ್ಲಿ ಮಹಿಳಾ ಶಾಲೆಯ ಪ್ರಾಂಶುಪಾಲರು ಮತ್ತು ಮಹಿಳಾ ಲೈಬ್ರೆರಿಯನ್ ಇಬ್ಬರೂ ಜುಟ್ಟು ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರೆ. ಇಡೀ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದು, ಇದು ಈಗ ವೈರಲ್(Viral Video) ಆಗಿದೆ. ಘಟನೆಯ ನಂತರ, ಇಬ್ಬರೂ ಮಹಿಳೆಯರನ್ನು ಕೆಲಸದಿಂದ ತೆಗೆದುಹಾಕಲಾಗಿದೆಯಂತೆ. ವೈರಲ್ ಆದ ವಿಡಿಯೊದಲ್ಲಿ, ಇಬ್ಬರೂ ಒಬ್ಬರಿಗೊಬ್ಬರು ಪರಸ್ಪರ ಕಪಾಳಮೋಕ್ಷ ಮಾಡಿಕೊಂಡು, ಕೂದಲನ್ನು ಎಳೆದುಕೊಂಡಿದ್ದಾರೆ. ಅದು ಅಲ್ಲದೇ, ಪ್ರಾಂಶುಪಾಲರು ಲೈಬ್ರೆರಿಯನ್ ಕೈಯಲ್ಲಿದ್ದ ಮೊಬೈಲ್ ಫೋನ್ ಅನ್ನು ಸಹ ಒಡೆದುಹಾಕಿದ್ದಾರೆ ಎಂದು ವರದಿಯಾಗಿದೆ.

ಈ ಜಗಳದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಮಾಹಿತಿಯ ಪ್ರಕಾರ, ಈ ವಿಷಯದಲ್ಲಿ ಭಾಗಿಯಾಗಿರುವ ಇಬ್ಬರು ಮಹಿಳೆಯರನ್ನು ಪ್ರಾಂಶುಪಾಲ ಪ್ರವೀಣ್ ದಹಿಯಾ ಮತ್ತು ಲೈಬ್ರೆರಿಯನ್ ಮಧುರಾಣಿ ಎಂದು ಗುರುತಿಸಲಾಗಿದೆ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯದಿಂದಾಗಿ ಇಬ್ಬರ ನಡುವೆ ಜಗಳ ಶುರುವಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ, ಇಬ್ಬರೂ ಮಹಿಳೆಯರನ್ನು ಕೆಲಸದಿಂದ ತೆಗೆದುಹಾಕಲಾಗಿದೆಯಂತೆ ಹಾಗೂ ಏಕಲವ್ಯ ಶಾಲೆಯನ್ನು ಕೇಂದ್ರ ಸರ್ಕಾರದ ಯೋಜನೆಯಡಿ ನಡೆಸುತ್ತಿರುವುದರಿಂದ, ಮುಂದಿನ ಕ್ರಮಕ್ಕಾಗಿ ವರದಿಯನ್ನು ದೆಹಲಿಗೆ ಕಳುಹಿಸಲಾಗಿದೆ.

ವಿಡಿಯೊ ಇಲ್ಲಿದೆ ನೋಡಿ...



ಈ ವಿಷಯವು ಜಿಲ್ಲಾಧಿಕಾರಿ ಭವ್ಯಾ ಮಿತ್ತಲ್ ಅವರನ್ನು ತಲುಪಿದ್ದು, ಅವರು ತಕ್ಷಣ ಕ್ರಮ ಕೈಗೊಂಡು ಬುಡಕಟ್ಟು ಕಲ್ಯಾಣ ಇಲಾಖೆಯಿಂದ ತನಿಖೆಗೆ ಆದೇಶಿಸಿದ್ದಾರೆ. ಈ ವಿಷಯದ ಬಗ್ಗೆ ಆಳವಾದ ತನಿಖೆ ನಡೆಯುತ್ತಿದೆ. ದೆಹಲಿಯ ಉನ್ನತ ಅಧಿಕಾರಿಗಳಿಗೆ ಸಲ್ಲಿಸಿದ ವರದಿಯ ಆಧಾರದ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ.

ಈ ಸುದ್ದಿಯನ್ನೂ ಓದಿ:Viral Video: ರಸ್ತೆ ಮಧ್ಯೆ ಸಿಕ್ಕಿದ ಮಗ, ಆತನ ಗೆಳತಿಗೆ ಚಪ್ಪಲಿಯಲ್ಲಿ ಹೊಡೆದ ತಾಯಿ

ಶಾಲೆಯಲ್ಲಿ ಶಿಕ್ಷಕರು ಈ ರೀತಿ ಜುಟ್ಟು ಹಿಡಿದು ಹೊಡೆದಾಡಿಕೊಂಡಿದ್ದು ಇದೇ ಮೊದಲಲ್ಲ. ಈ ಹಿಂದೆ ಉತ್ತರ ಪ್ರದೇಶದ ಮಥುರಾದ ಪ್ರಾಥಮಿಕ ಶಾಲೆಯೊಂದರಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಶಿಕ್ಷಕಿ ನಡುವೆ ಮಾರಾಮಾರಿ ನಡೆದಿತ್ತು. ಈ ಘಟನೆಯನ್ನು ಕಂಡು ಕೆಲವು ಮಕ್ಕಳು ಹೆದರಿಕೊಂಡಿದ್ದರೆ ಇನ್ನೂ ಕೆಲವು ಮಕ್ಕಳು ಈ ಹೋರಾಟದಲ್ಲಿ ತಮ್ಮ ಶಿಕ್ಷಕರನ್ನು ಬೆಂಬಲಿಸಲು ಅಂಗನವಾಡಿ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಪ್ರಾಥಮಿಕ ಶಿಕ್ಷಣ ಅಧಿಕಾರಿ (ಬಿಎಸ್ಎ) ತಕ್ಷಣ ಗಮನ ಹರಿಸಿ ಈ ಬಗ್ಗೆ ತನಿಖೆ ನಡೆಸಲು ಬ್ಲಾಕ್ ಶಿಕ್ಷಣ ಅಧಿಕಾರಿಯನ್ನು ನಿಯೋಜಿಸಿದ್ದರು. ಈ ಜಗಳದಲ್ಲಿ ಅಂಗನವಾಡಿ ಕಾರ್ಯಕರ್ತೆಗೆ ಗಂಭೀರ ಗಾಯಗಳಾಗಿದ್ದು, ಅವಳನ್ನು ಚಿಕಿತ್ಸೆಗಾಗಿ ಫರಿದಾಬಾದ್‍ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.