ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಹಸುಗಳ ಮೇಲೆ ಪೈಶಾಚಿಕ ಕೃತ್ಯ- ಇಬ್ಬರು ಅರೆಸ್ಟ್‌! ಶಾಕಿಂಗ್‌ ವಿಡಿಯೊ ವೈರಲ್‌

ಮಧ್ಯಪ್ರದೇಶದ ಇಂದೋರ್‌ನಲ್ಲಿ ವಿಜಯ್ ಅಹಿರ್ವಾರ್ ಮತ್ತು ಮಂದಸೌರ್ ಜಿಲ್ಲೆಯಲ್ಲಿ ಗೋಸ್ವಾಮಿ (35) ಎಂಬಾತ ಹಸುವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ.ಈತನ ಈ ನೀಚ ಕೃತ್ಯ ವಿಡಿಯೊದಲ್ಲಿ ರೆಕಾರ್ಡ್ ಆಗಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಪೊಲೀಸರು ಇಬ್ಬರನ್ನು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಹಸುಗಳ ಮೇಲೆ ಪೈಶಾಚಿಕ ಕೃತ್ಯ- ಇಬ್ಬರು ಅರೆಸ್ಟ್‌

Profile pavithra Apr 12, 2025 12:33 PM

ಭೋಪಾಲ್: ಇತ್ತೀಚೆಗಷ್ಟೇ ಬೀದಿನಾಯಿಯ ಮೇಲೆ ವ್ಯಕ್ತಿಯೊಬ್ಬ ಪೈಶಾಚಿಕ ಕೃತ್ಯ ಎಸಗಿದ ಘಟನೆ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು.ಇದೀಗ ಮಧ್ಯಪ್ರದೇಶದ ಇಂದೋರ್ ಮತ್ತು ಮಂದಸೌರ್ ಜಿಲ್ಲೆಗಳಲ್ಲಿ ವರದಿಯಾದ ಪ್ರತ್ಯೇಕ ಪ್ರಕರಣಗಳಲ್ಲಿ ಹಸುಗಳೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗಳ ವಿಡಿಯೊಗಳು ಸೋಶಿಯಲ್ ಮೀಡಿಯಾಗಳಲ್ಲಿ ಕಾಣಿಸಿಕೊಂಡಿದ್ದು, ಇದು ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ. ಈ ನಾಚಿಕೆಗೇಡಿನ ಕೃತ್ಯದ ವಿರುದ್ಧ ಸಾರ್ವಜನಿಕರು, ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಮತ್ತು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಇಂದೋರ್ ಪ್ರಕರಣ

ಇಂದೋರ್‌ನಲ್ಲಿ ಹಸುವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪಿಯನ್ನು ಕಾರ್ಖಾನೆ ಕಾರ್ಮಿಕ ವಿಜಯ್ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಈತ ಹಸುವಿನೊಂದಿಗೆ ಇಂತಹ ನೀಚ ಕೃತ್ಯದಲ್ಲಿ ತೊಡಗಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆದ ಬಳಿಕ ಗೋರಕ್ಷಣಾ ಕಾರ್ಯಕರ್ತರು ಮತ್ತು ಹಲವಾರು ಹಿಂದೂ ಗುಂಪುಗಳ ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಹತ್ತಿರದ ಕಟ್ಟಡಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಕಾರ್ಖಾನೆಯ ಕಾರ್ಮಿಕನಾಗಿ ಕೆಲಸ ಮಾಡುವ ವಿಜಯ್ ಅಹಿರ್ವಾರ್ ಎಂಬ ವ್ಯಕ್ತಿ ಮಾಡಿರುವ ಕೆಲಸ ಬೆಳಕಿಗೆ ಬಂದಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂದಸೌರ್‌ನ ಅಫ್ಜಲ್‌ಪುರ ಪ್ರದೇಶದಲ್ಲಿ ನಡೆದ ಪ್ರಕರಣ

ಇಂದೋರ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಮಂದಸೌರ್ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಇದೇ ರೀತಿಯ ಮತ್ತೊಂದು ಪ್ರಕರಣ ವರದಿಯಾಗಿದೆ. ಆರೋಪಿ ದ್ವಾರಕಾ ಗೋಸ್ವಾಮಿ (35) ಸೋಮವಾರ(ಏಪ್ರಿಲ್ 7) ರಾತ್ರಿ ತನ್ನ ಚಿಕ್ಕಪ್ಪನ ದನದ ಕೊಟ್ಟಿಗೆಯಲ್ಲಿರುವ ಹಸುವಿನೊಂದಿಗೆ ಅಸ್ವಾಭಾವಿಕ ಕ್ರಿಯೆಯಲ್ಲಿ ತೊಡಗಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.



ಸ್ಥಳೀಯ ನಿವಾಸಿಯೊಬ್ಬರು ಈ ಘಟನೆಯನ್ನು ಗಮನಿಸಿ ಅದನ್ನು ವಿಡಿಯೊದಲ್ಲಿ ಸೆರೆಹಿಡಿದಿದ್ದಾರೆ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತಕ್ಷಣ ಪೊಲೀಸ್ ಕ್ರಮಕ್ಕೆ ಕಾರಣವಾಗಿದೆ. ಪೊಲೀಸರು ಆತನನ್ನು ಬಂಧಿಸಿ ಸಾರ್ವಜನಿಕವಾಗಿ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿದ್ದಾರೆ.

ಪ್ರಾಣಿಗಳಿಗೆ ಅನಗತ್ಯ ಹಾನಿ ಅಥವಾ ಸಂಕಟವನ್ನು ಉಂಟುಮಾಡುವ ಈ ಕೃತ್ಯವನ್ನು ಅಪರಾಧವೆಂದು ಪರಿಗಣಿಸುವ ಕಾನೂನಿನ ಪ್ರಕಾರ ಇಬ್ಬರೂ ಆರೋಪಿಗಳ ವಿರುದ್ಧ ಪಶು ಕೃತ ಅಧಿನಿಯಮ್ (ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ) ಅಡಿಯಲ್ಲಿ ಆರೋಪ ದಾಖಲಿಸಲಾಗಿದೆ. ಹಾಗೇ ಹೆಚ್ಚಿನ ಘಟನೆಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನೂ ಓದಿ:Viral News: ಮದ್ವೆ ಸಂಭ್ರಮದಲ್ಲಿದ್ದ ವಧುವಿನ ಮನೆಯವ್ರಿಗೆ ಕಾದಿತ್ತು ಬಿಗ್‌ ಶಾಕ್! ಅಷ್ಟಕ್ಕೂ ನಡೆದಿದ್ದೇನು?

ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ ಬಂಧನ!

ಇತ್ತೀಚೆಗೆ ದೆಹಲಿಯಲ್ಲಿ ಕೂಡ ಇಂತಹದೊಂದು ಪ್ರಕರಣ ವರದಿಯಾಗಿತ್ತು. ದೆಹಲಿಯ ಕೈಲಾಶ್ ನಗರದಲ್ಲಿ ಹೆಣ್ಣು ನಾಯಿಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಸ್ಥಳೀಯರು ಹಾಗೂ ಪ್ರಾಣಿ ಪ್ರಿಯರು ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಆ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ 1960 ರ ಸೆಕ್ಷನ್ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು 429 (ಪ್ರಾಣಿಗಳಿಗೆ ಹಾನಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಂತರ ಆತನನ್ನು ಬಂಧಿಸಲಾಗಿತ್ತು.