Viral Video: ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಇಣುಕಿ ನೋಡಿ, ವಿಡಿಯೊ ರೆಕಾರ್ಡ್! ಶಾಕಿಂಗ್ ವಿಡಿಯೊ ಇಲ್ಲಿದೆ
Youths Peeping in Girls Changing Room: ಕಾಲೇಜು ಕಾರ್ಯಕ್ರಮವೊಂದರಲ್ಲಿ ಎಬಿವಿಪಿ ಸಂಘಟನೆಯ ಕೆಲ ವಿದ್ಯಾರ್ಥಿಗಳು ಹುಡುಗಿಯರು ಬಟ್ಟೆ ಬದಲಾಯಿಸುವ ಕೋಣೆಯಲ್ಲಿ ಇಣುಕಿ ನೋಡಿದ್ದಲ್ಲದೆ, ರಹಸ್ಯವಾಗಿ ವಿಡಿಯೊ ಚಿತ್ರೀಕರಣ ಮಾಡಿದ್ದಾರೆ. ಈ ನೀಚ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

-

ಇಂದೋರ್: ಕಾಲೇಜು ಯುವಜನೋತ್ಸವದ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳು ನಡೆದುಕೊಂಡ ರೀತಿಯು ಆಘಾತ ತಂದಿದೆ. ವಿದ್ಯಾರ್ಥಿನಿಯರ ಬಟ್ಟೆ ಬದಲಾಯಿಸುವ ಕೋಣೆಯಲ್ಲಿ ಇಣುಕಿ ನೋಡುತ್ತಾ, ರಹಸ್ಯವಾಗಿ ವಿಡಿಯೊ ಚಿತ್ರೀಕರಣ ಮಾಡಿರುವ ಆಘಾತಕಾರಿ ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಇದರ ವಿಡಿಯೊ ವೈರಲ್ (Viral Video) ಆಗಿದೆ. ಮಧ್ಯಪ್ರದೇಶದ (Madhya Pradesh) ಮಂದ್ಸೌರ್‌ನಲ್ಲಿ ಈ ಘಟನೆ ವರದಿಯಾಗಿದೆ.
ಕೆಲವು ವಿದ್ಯಾರ್ಥಿನಿಯರು ತಮ್ಮನ್ನು ಯಾರೋ ಗಮನಿಸುತ್ತಿರುವುದನ್ನು ನೋಡಿ ಎಚ್ಚರಿಕೆ ನೀಡಿದರು. ಅವರು ಈ ವಿಷಯದ ಬಗ್ಗೆ ಉಸ್ತುವಾರಿ ಪ್ರಾಂಶುಪಾಲರಾದ ಪ್ರೀತಿ ಪಂಚೋಲಿಗೆ ದೂರು ನೀಡಿದರು. ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಪಂಚೋಲಿ, ಸಿಸಿ ಕ್ಯಾಮರಾ ಪರಿಶೀಲಿಸಿದರು. ಈ ವೇಳೆ ಕೆಲ ವಿದ್ಯಾರ್ಥಿಗಳು ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ.
ಕೂಡಲೇ ಪಂಚೋಲಿ ಅವರು ಭಾನಪುರ ಪೊಲೀಸರಿಗೆ ಲಿಖಿತ ದೂರು ನೀಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಬಿವಿಪಿ ಜೊತೆ ಸಂಬಂಧ ಹೊಂದಿದ್ದಾರೆಂದು ಹೇಳಲಾದ 3 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಒಬ್ಬ ವಿದ್ಯಾರ್ಥಿ ಪರಾರಿಯಾಗಿದ್ದಾನೆ. ಬಂಧಿತರನ್ನು ಉಮೇಶ್ ಜೋಶಿ, ನಗರ ಸಹ-ಕಾಲೇಜು ಮುಖ್ಯಸ್ಥ ಅಜಯ್ ಗೌರ್ ಮತ್ತು ಹಿಮಾಂಶು ಬೈರಾಗಿ ಎಂದು ಗುರುತಿಸಲಾಗಿದ್ದು, ಮೂವರು ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದೆ.
ವಿಡಿಯೊ ವೀಕ್ಷಿಸಿ:
BJP से बेटी बचाओ
— Congress (@INCIndia) October 16, 2025
मध्य प्रदेश के मंदसौर में BJP के फ्रंटल ABVP के चार पदाधिकारी एक सरकारी कॉलेज में कपड़े बदलती छात्राओं का चोरी-छिपे वीडियो बनाते पकड़े गए हैं।
उनकी ये घिनौनी करतूत CCTV कैमरे में सामने आई है। ये शर्मनाक हरकत BJP के चाल, चरित्र और चेहरे को उजागर करती है।
एक… pic.twitter.com/qsIPybKQhg
ಅಲ್ಲದೆ, ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ಕನೇ ವಿದ್ಯಾರ್ಥಿಯನ್ನು ಗುರುತಿಸಲು ತನಿಖೆ ನಡೆಯುತ್ತಿದೆ. ಪೊಲೀಸರು ಆತನನ್ನು ಹುಡುಕಲು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆ ಮುಂದುವರೆದಿದ್ದು, ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ, ಈ ಘಟನೆಯನ್ನು ಕಾಂಗ್ರೆಸ್ ಖಂಡಿಸಿದೆ. ಮಧ್ಯಪ್ರದೇಶದ ಮಂದ್ಸೌರ್‌ನಲ್ಲಿ, ಬಿಜೆಪಿಯೊಂದಿಗೆ ಸಂಯೋಜಿತವಾಗಿರುವ ವಿದ್ಯಾರ್ಥಿ ಘಟಕವಾದ ಎಬಿವಿಪಿಯ ನಾಲ್ವರು ಪದಾಧಿಕಾರಿಗಳು ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುತ್ತಿದ್ದಾಗ ರಹಸ್ಯವಾಗಿ ವಿಡಿಯೊಗಳನ್ನು ರೆಕಾರ್ಡ್ ಮಾಡುತ್ತಿದ್ದರು. ಅವರ ನಾಚಿಕೆಗೇಡಿನ ಕೃತ್ಯ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಈ ನಾಚಿಕೆಗೇಡಿನ ಘಟನೆಯು ಬಿಜೆಪಿಯ ನಿಜವಾದ ನಡವಳಿಕೆ ಮತ್ತು ಸ್ವರೂಪವನ್ನು ಬಹಿರಂಗಪಡಿಸುತ್ತದೆ. ಒಂದೆಡೆ, ಬಿಜೆಪಿ ಮಹಿಳೆಯರ ಸುರಕ್ಷತೆ ಮತ್ತು ಗೌರವದ ಬಗ್ಗೆ ಮಾತನಾಡುತ್ತದೆ. ಮತ್ತೊಂದೆಡೆ ತನ್ನದೇ ಸದಸ್ಯರು, ಮಹಿಳೆಯರ ಘನತೆಯನ್ನು ಉಲ್ಲಂಘಿಸುವ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಅವರು ನಾಚಿಕೆಪಡಬೇಕು ಎಂದು ಬರೆದಿದೆ.