#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Viral Video: ಪ್ರೀತಿ ನಿರಾಕರಿಸಿದ ಯುವತಿಯ ಮೇಲೆ ನಡುರಸ್ತೆಯಲ್ಲಿ ಪೆಟ್ರೋಲ್‌ ಸುರಿದ ಯುವಕ; ಭಯಾನಕ ವಿಡಿಯೊ ವೈರಲ್‌

ತೆಲಂಗಾಣದ ಹುಜೂರ್‌ನಗರ ಪ್ರದೇಶದ ಬೀದಿಯಲ್ಲಿ ಯುವಕನೊಬ್ಬ ತನ್ನ ಪ್ರೀತಿಯನ್ನು ತಿರಸ್ಕರಿಸಿದ ಬುರ್ಖಾ ಧರಿಸಿದ ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಯುವತಿಯ ಮೇಲೆ ನಡುರಸ್ತೆಯಲ್ಲಿ ಪೆಟ್ರೋಲ್‌ ಸುರಿದ ಯುವಕ

Profile pavithra Feb 12, 2025 9:08 PM

ಹೈದರಾಬಾದ್‌: ವ್ಯಕ್ತಿಯೊಬ್ಬ ಹಾಡಹಗಲೇ ಬುರ್ಖಾ ಧರಿಸಿದ ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಆಘಾತಕಾರಿ ಘಟನೆ ನಡೆದಿದೆ. ತೆಲಂಗಾಣದ ಹುಜೂರ್‌ನಗರ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಯುವಕ ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೀದಿಯಲ್ಲಿ ಗಲಾಟೆ ಮಾಡುವ ದೃಶ್ಯ ರೆಕಾರ್ಡ್ ಆಗಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ವೈರಲ್ ಆದ ವಿಡಿಯೊದಲ್ಲಿ ಬುರ್ಖಾ ಧರಿಸಿದ ಇಬ್ಬರು ಯುವತಿಯರ ಜತೆ ನಿಂತಿದ್ದ ಯುವಕ ಯುವತಿಯೊಬ್ಬಳ ಮೇಲೆ ಪೆಟ್ರೋಲ್‌ ಸುರಿದಿದ್ದು ಅಲ್ಲde ತನ್ನ ಮೇಲೂ ಪೆಟ್ರೋಲ್‌ ಸುರಿದು ಕೊಂಡಿದ್ದಾನೆ. ನಂತರ ಅಲ್ಲಿಗೆ ಬಂದ ವ್ಯಕ್ತಿ ಇದನ್ನು ನೋಡಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾನೆ.



ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೋಪಗೊಂಡ ಯುವಕ ಪೆಟ್ರೋಲ್ ಸುರಿದು ಸಾರ್ವಜನಿಕವಾಗಿ ಜೀವಂತವಾಗಿ ಸುಡುವುದಾಗಿ ಬೆದರಿಕೆ ಹಾಕಿದ್ದಾನೆ. ಪೆಟ್ರೋಲ್ ತುಂಬಿದ ಬಾಟಲಿಯನ್ನು ಹಿಡಿದು ಯುವತಿಯ ಬಳಿ ಬಂದ ಆತ ಬೀದಿಯಲ್ಲಿ ಬಹಿರಂಗವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಯನ್ನು ಗಮನಿಸಿದ ದಾರಿಹೋಕನೊಬ್ಬ ಅವನನ್ನು ಇಬ್ಬರು ಯುವತಿಯರಿಂದ ದೂರ ತಳ್ಳಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾನೆ.

ವರದಿಯ ಪ್ರಕಾರ, ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಹುಜೂರ್‌ನಗರದಲ್ಲಿ 23 ವರ್ಷದ ಈ ಯುವತಿ ತನ್ನ ಚಿಕ್ಕಪ್ಪನೊಂದಿಗೆ ವಾಸಿವಾಗಿದ್ದಾಳೆ. ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಘಟನೆಯ ನಂತರ, ಯುವತಿ ಸುಂದರ್ ಪ್ರಮೋದ್ ಎಂದು ಗುರುತಿಸಲ್ಪಟ್ಟ ಅಪರಾಧಿಯ ವಿರುದ್ಧ ಹುಜೂರ್‌ನಗರ ಪೊಲೀಸರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಪ್ರಯತ್ನಿಸಿದ್ದಾನೆ ಎಂದು ದೂರು ನೀಡಿದ್ದಾಳೆ.

ಈ ಸುದ್ದಿಯನ್ನೂ ಓದಿ:Raichur Horror: ಪ್ರೀತಿಸಿದ ಹುಡುಗಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಸೆರೆ

ರಾಯಚೂರು: ಎಂಎಸ್​ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ದುರಂತ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ಇತ್ತೀಚೆಗೆ ನಡೆದಿತ್ತು. ವಿದ್ಯಾರ್ಥಿಯನ್ನು ಎಂಟು ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯಕರನೇ ಹಾಡಹಗಲಿನಲ್ಲಿ ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಮೃತ ವಿದ್ಯಾರ್ಥಿನಿಯನ್ನು 24 ವರ್ಷದ ಶಿಫಾ ಅಬ್ದುಲ್ ವಾಹೀದ್ ಎಂದು ಗುರುತಿಸಲಾಗಿದೆ. ಆರೋಪಿ ಮುಬಿನ್ ಕಾಲೇಜಿಗೆ ತೆರಳುತ್ತಿದ್ದ ಶಿಫಾಳನ್ನು ಮಾತನಾಡಬೇಕೆಂದು ಕರೆದಿದ್ದ. ಈ ವೇಳೆ ವಿದ್ಯಾರ್ಥಿನಿ ಕಾಲೇಜಿಗೆ ಹೋಗದೆ ಮುಬಿನ್ ಜತೆ ಮಾತನಾಡಲು ಹೋಗಿದ್ದಳು. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಬಳಿಕ ಮುಬಿನ್ ಏಕಾಏಕಿ ಚೂರಿ ತೆಗೆದು ಶಿಫಾಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ. ತೀವ್ರ ರಕ್ತಸ್ರಾವದಿಂದ ಶಿಫಾ ಸ್ಥಳದಲ್ಲಿಯೇ ಮೃತಪಟ್ಟಿದ್ದಳು.