Viral News: ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಗೆ ಕೊಲೆ ಬೆದರಿಕೆ ಹಾಕಿದ ಭಾರತೀಯ- ಆಮೇಲೆ ಆಗಿದ್ದೇನು ಗೊತ್ತಾ?
ವಿಮಾನದಲ್ಲಿ ಸಿಂಗಾಪುರಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕ್ಯಾಬಿನ್ ಸಿಬ್ಬಂದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಕಾರಣ ಆತನನ್ನು ಸಿಂಗಾಪುರದ ಪೊಲೀಸರು ಬಂಧಿಸಿದ್ದಾರೆ. ಈತ ಭಾರತೀಯ ಪ್ರಜೆಯಾಗಿದ್ದು ಅವನ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಈಗ ವೈರಲ್(Viral News) ಆಗಿದೆ.


ಸಿಂಗಾಪುರ: ವಿಮಾನದಲ್ಲಿ ಸಿಂಗಾಪುರಕ್ಕೆ ಪ್ರಯಾಣಿಸುತ್ತಿದ್ದ 42 ವರ್ಷದ ಭಾರತೀಯ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕ್ಯಾಬಿನ್ ಸಿಬ್ಬಂದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆ ಆತನನ್ನು ಸಿಂಗಾಪುರದ ಪೊಲೀಸರು ಬಂಧಿಸಿದ್ದಾರೆ. ವರದಿಯ ಪ್ರಕಾರ, ಸಿಂಗಾಪುರ ಪೊಲೀಸರು ಭಾರತೀಯ ಪ್ರಜೆಯ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರಂತೆ. ಅಷ್ಟೇ ಅಲ್ಲದೇ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಭಾರತೀಯ ವ್ಯಕ್ತಿ ಕುಡಿದ ಮತ್ತಿನಲ್ಲಿ ತನ್ನ ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕನ ಸೀಟನ್ನು ಹಿಡಿದು ತನ್ನ ಮುಂದೆ ಬಲವಂತವಾಗಿ ತಳ್ಳುವ ಮೂಲಕ ಇತರ ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಈ ಸುದ್ದಿ ಈಗ ವೈರಲ್ (Viral News)ಆಗಿದೆ.
ವಿಮಾನ ಸಿಬ್ಬಂದಿಗಳು ಅವನನ್ನು ಶಾಂತಗೊಳಿಸಲು ಪ್ರಯತ್ನಿಸಿದಾಗ ಅವನು ಅವರ ಮೇಲೆ ಆಕ್ರಮಣಕಾರಿ ನಡವಳಿಕೆ ತೋರಿಸಿದ್ದಾನೆ ಎನ್ನಲಾಗಿದೆ. ಅಲ್ಲದೇ ಆತ ಕ್ಯಾಬಿನ್ ಸಿಬ್ಬಂದಿಯೊಬ್ಬನ ಮಣಿಕಟ್ಟನ್ನು ಹಿಡಿದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಆತನ ದುರ್ವತನೆಯ ಕಾರಣದಿಂದ ಆತನ ಪ್ರಯಾಣವನ್ನು ಅರ್ಧಕ್ಕೆ ತಡೆದು ಸಿಂಗಾಪುರದ ಚಾಂಗಿ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದಾರೆ. ನಂತರ ಆತನನ್ನು ಸಿಂಗಾಪುರದ ಪೊಲೀಸರು ಬಂಧಿಸಿದ್ದಾರೆ. ಆತನ ಮೇಲೆ ಅಶಿಸ್ತಿನ ನಡವಳಿಕೆ ಹಾಗೂ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಅನೇಕ ಅಪರಾಧಗಳನ್ನು ಹೊರಿಸಲಾಗಿದೆ. ಅವನ ಮೇಲಿನ ಈ ಆರೋಪಕ್ಕೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು ಎನ್ನಲಾಗಿದೆ.
ಈ ಸುದ್ದಿಯನ್ನೂ ಓದಿ:Viral News: ಕುಡುಕರೇ ಎಚ್ಚರ; ಅಮಲಿನಲ್ಲಿ ಮಲಗಿದ್ದ ವ್ಯಕ್ತಿಯ ಜನನಾಂಗಕ್ಕೆ ನಟ್ ಸಿಲುಕಿಸಿದ ಕಿಡಿಗೇಡಿಗಳು; ಕೊನೆಗೆ ತೆಗೆದಿದ್ದು ಹೇಗೆ?
ವಿಮಾನದ ಪ್ರಯಾಣದ ವೇಳೆ ಪ್ರಯಾಣಿಕರು ಈ ರೀತಿ ಅಶಿಸ್ತಿನಿಂದ ವರ್ತಿಸಿದ ಘಟನೆ ನಡೆದಿದ್ದು ಇದೇ ಮೊದಲಲ್ಲ. ಈ ಹಿಂದೆ ಜೈಪುರ-ದೆಹಲಿ-ಚೆನ್ನೈ ಇಂಡಿಗೊ ವಿಮಾನದಲ್ಲಿ ಮಹಿಳಾ ಪ್ರಯಾಣಿಕರನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ 45 ವರ್ಷದ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರಂತೆ. ಆರೋಪಿ ರಾಕೇಶ್ ಶರ್ಮಾ ಎಂಬಾತ ಮತ್ತು ಮಹಿಳೆ ಜೈಪುರದಿಂದ ಚೆನ್ನೈಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ವಿಮಾನದೊಳಗೆ ಮಹಿಳೆ ಕಿಟಕಿಯ ಸೀಟಿನಲ್ಲಿ ಕುಳಿತಿದ್ದಳು. ಆಕೆಯ ಹಿಂದೆ ಕುಳಿತಿದ್ದ ಶರ್ಮಾ ಆಕೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಆರೋಪಿಸಲಾಗಿದೆ. ವ್ಯಕ್ತಿಯ ವರ್ತನೆಯ ಬಗ್ಗೆ ಮಹಿಳೆ ಕ್ಯಾಬಿನ್ ಸಿಬ್ಬಂದಿಗೆ ದೂರು ನೀಡಿದ್ದಾಳೆ. ವಿಮಾನವು ಚೆನ್ನೈನಲ್ಲಿ ಇಳಿದಾಗ, ಮಹಿಳೆಯ ಪೊಲೀಸ್ ದೂರಿನ ಆಧಾರದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಶರ್ಮಾ ಟೈಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸಕ್ಕೆ ಸಂಬಂಧಿಸಿದ ಉದ್ದೇಶಗಳಿಗಾಗಿ ಜೈಪುರಕ್ಕೆ ಪ್ರಯಾಣಿಸಿದ್ದನು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.