ಲಖನೌ, ಡಿ. 30: ಟ್ರಾಫಿಕ್ ಜಾಮ್ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ದಂಪತಿಯನ್ನು ನಿಂದಿಸಿ ಬೆದರಿಸುತ್ತಿರುವ ವಿಡಿಯೊವೊಂದು ವೈರಲ್ (Viral Video) ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದಲ್ಲಿ (Uttar Pradesh) ಡಿಸೆಂಬರ್ 29ರ ಸಂಜೆ ಮೀರತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಜನನಿಬಿಡ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆಯಿಂದಾಗಿ ವಾಹನಗಳು ಸ್ಥಗಿತಗೊಂಡವು.
ವೈರಲ್ ಆಗಿರುವ ವಿಡಿಯೊದಲ್ಲಿ ಮಹಿಳಾ ಅಧಿಕಾರಿ ತಮ್ಮ ಕಾರಿನಿಂದ ಇಳಿದು ಮತ್ತೊಂದು ವಾಹನದ ಪ್ರಯಾಣಿಕರನ್ನು ಸಾರ್ವಜನಿಕರ ಮುಂದೆಯೇ ಕೆಟ್ಟ ಭಾಷೆಯಲ್ಲಿ ಬೈದಿರುವುದು ಕಂಡು ಬಂದಿದೆ. ಪ್ರಯಾಣಿಕರಿಗೆ ನಿಂದನೀಯ ಭಾಷೆಯನ್ನು ಬಳಸಿದ್ದು, ಬೆದರಿಕೆ ಹಾಕಿದ್ದಾರೆ. ಮುಖದ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಎಂದೂ ಅಸಭ್ಯವಾಗಿ ಮಾತನಾಡಿದ್ದಾರೆ.
ರೀಲ್ಸ್‌ಗಾಗಿ ಪೊಲೀಸ್ ಜೀಪ್ ಉಪಯೋಗಿಸಿ ಕೆಲಸವನ್ನೇ ಕಳೆದುಕೊಂಡ ಅಧಿಕಾರಿ
ಮಾಹಿತಿಯ ಪ್ರಕಾರ, ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸಂಚಾರ ದಟ್ಟಣೆಯಿಂದಾಗಿ ವಾಹನಗಳು ಒಂದರ ನಂತರ ಒಂದರಂತೆ ಸಿಲುಕಿಕೊಂಡವು. ಐ20 ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅಧಿಕಾರಿಯು ಜಾಮ್‌ನಲ್ಲಿ ಸಿಲುಕಿಕೊಂಡ ನಂತರ ಕೋಪಗೊಂಡಿದ್ದರು ಎನ್ನಲಾಗಿದೆ.
ವಿಡಿಯೊ ವೀಕ್ಷಿಸಿ:
ಅವರು ತಮ್ಮ ವಾಹನದ ಒಳಗಿನಿಂದ ವಾಹನ ಸವಾರರ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದಿಸಲು ಪ್ರಾರಂಭಿಸಿದರು ಎಂದು ಹೇಳಲಾಗಿದೆ. ದಾರಿ ಬಿಡಲಿಲ್ಲ ಎಂದು ಆರೋಪಿಸಿ ಕಾರಿನಿಂದ ಇಳಿದು ಮತ್ತೊಂದು ವಾಹನದಲ್ಲಿ ಕುಳಿತಿದ್ದ ದಂಪತಿಗೆ ಕೆಟ್ಟ ಭಾಷೆಯನ್ನು ಪ್ರಯೋಗಿಸಿದ್ದಾರೆ. ಟ್ರಾಫಿಕ್ ಜಾಮ್ ನಡುವೆ ರಸ್ತೆಯಲ್ಲೇ ವಾಗ್ವಾದ ನಡೆಸಿದ್ದಾರೆ.
ಮಾತಿನ ಚಕಮಕಿಯ ಸಮಯದಲ್ಲಿ ಇನ್ನೊಂದು ಕಾರಿನಲ್ಲಿದ್ದ ಪ್ರಯಾಣಿಕರು, ಮಹಿಳಾ ಅಧಿಕಾರಿಯೊಂದಿಗೆ ಮಾತನಾಡುತ್ತಿದ್ದ ರೀತಿ ಬಗ್ಗೆ ಪ್ರಶ್ನಿಸುತ್ತಿರುವುದು ಕಂಡುಬಂದಿದೆ. ನಂತರ ವಾದ ಮುಂದುವರೆದಂತೆ ಅಧಿಕಾರಿ ಬೆದರಿಕೆ ಹಾಕಿದ್ದಾರೆ. ಜಗಳ ಜೋರಾಗುತ್ತಿದ್ದಂತೆ ಸ್ಥಳದಲ್ಲಿ ಜನಸಮೂಹ ಜಮಾಯಿಸಿತು. ಹಲವು ಮಂದಿ ಮ್ಮ ಮೊಬೈಲ್ ಫೋನ್‌ಗಳಲ್ಲಿ ಘಟನೆಯನ್ನು ರೆಕಾರ್ಡ್ ಮಾಡಿಕೊಂಡು, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅದು ವೈರಲ್ ಆಗಿದ್ದು, ಅನೇಕ ಬಳಕೆದಾರರು ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಯ ನಡವಳಿಕೆಯನ್ನು ಟೀಕಿಸಿದರು ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ವಿಡಿಯೊದಲ್ಲಿರುವ ಮಹಿಳೆಯನ್ನು ಅಲಿಗಢದಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರತ್ನಾ ರತಿ ಎಂದು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರು ಅಧಿಕೃತ ಕರ್ತವ್ಯದ ಮೇಲೆ ಸಹರಾನ್‌ಪುರದಿಂದ ಹಿಂತಿರುಗುತ್ತಿದ್ದರು. ಘಟನೆ ನಡೆದಾಗ ಮೀರತ್ ಮೂಲಕ ಹಾದುಹೋಗುತ್ತಿದ್ದರು ಎಂದು ವರದಿಯಾಗಿದೆ.
ವೈರಲ್ ಆಗಿರುವ ವಿಡಿಯೊವನ್ನು ಪೊಲೀಸ್ ಅಧಿಕಾರಿಗಳು ಒಪ್ಪಿಕೊಂಡಿದ್ದು, ಪ್ರಕರಣವನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಔಪಚಾರಿಕ ದೂರು ದಾಖಲಾಗಿದ್ದರೆ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನದ ಕಿಟಕಿ ಗ್ಲಾಸ್ ಮೇಲೆ ತನ್ನದೇ ಹೆಸರು ಕೆತ್ತಿದ ಪ್ರಯಾಣಿಕ
ಮಹಿಳೆಗೆ ಥಳಿಸಿದ ಗ್ರಾಮಸ್ಥರು
ಗ್ರಾಮಸ್ಥರು ಮಹಿಳೆಯೊಬ್ಬರನ್ನು ಮನೆಯಿಂದ ಹೊರಗೆಳೆದು, ಚಪ್ಪಲಿಗಳಿಂದ ಹಾರ ಹಾಕಿ, ನಂತರ ಥಳಿಸಿರುವ ಆಘಾತಕಾರಿ ಘಟನೆ ತ್ರಿಪುರಾದ ಧಲೈ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಆರೋಪಿಸಲಾಗಿದೆ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಯಿತು.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ರಸ್ತೆಯಲ್ಲಿ ಗಾಯಗೊಂಡಿದ್ದ ಮಹಿಳೆ ಪತ್ತೆಯಾಗಿದ್ದಾಳೆ. ನಂತರ ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.