ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಸರ್ಕಾರಿ ನೌಕರನ ಮೇಲೆ ಲಂಚದ ಆರೋಪ ಹೊರಿಸಿ ಮಹಿಳೆಯಿಂದ ಕಪಾಳಮೋಕ್ಷ; ವಿಡಿಯೊ ವೈರಲ್

Woman Slaps Government Employee: ಸರ್ಕಾರಿ ನೌಕರ ಲಂಚ ತೆಗೆದುಕೊಂಡಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಆತನಿಗೆ ಕಪಾಳಮೋಕ್ಷ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸರ್ಕಾರಿ ನೌಕರನಿಗೆ ಮಹಿಳೆಯಿಂದ ಕಪಾಳಮೋಕ್ಷ- ವಿಡಿಯೊ ನೋಡಿ

-

Priyanka P Priyanka P Sep 20, 2025 7:13 PM

ಅಶೋಕನಗರ: ಸರ್ಕಾರಿ ನೌಕರ ಲಂಚ ತೆಗೆದುಕೊಂಡಿದ್ದಾನೆ ಎಂದು ಕೋಪಗೊಂಡ ಮಹಿಳೆಯೊಬ್ಬರು ಆತನಿಗೆ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗುತ್ತಿದೆ. ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನ ಅಶೋಕ ನಗರದಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಉದ್ಯೋಗಿ ಪಟ್ವಾರಿ ರಾಜೇಶ್‌ಗೆ ಮಹಿಳೆ ಕಪಾಳಕ್ಕೆ ಹೊಡೆದಿದ್ದಾರೆ.

ಸರ್ಕಾರಿ ನೌಕರ ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ ಮತ್ತು ಲಂಚ ಪಡೆಯುತ್ತಿದ್ದಾರೆ ಎಂದು ಮಹಿಳೆಯು ಆರೋಪಿಸಿದ್ದಾರೆ. ಇಸಾಘರ್ ತಹಸಿಲ್ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಇಡೀ ಅವ್ಯವಸ್ಥೆಯನ್ನು ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮಹಿಳೆಯನ್ನು ಹೈದರ್ ಗ್ರಾಮದ ಲಕ್ಷ್ಮಿ ಅಹಿರ್ವಾರ್ ಎಂದು ಗುರುತಿಸಲಾಗಿದೆ.

ವಿಡಿಯೊ ವೀಕ್ಷಿಸಿ:



ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಭೂ ಗುರುತಿಸುವಿಕೆ ಮತ್ತು ತನ್ನ ಹೆಸರನ್ನು ಸೇರಿಸಲು ಪಟ್ವಾರಿ ರಾಜೇಶ್ ತನ್ನಿಂದ 2,000 ರೂ. ಪಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಆದರೆ, ಹಣವನ್ನು ಪಡೆದ ನಂತರವೂ ಅವನು ಕೆಲಸವನ್ನು ಪೂರ್ಣಗೊಳಿಸಲಿಲ್ಲ. ಇದರಿಂದ ಹತಾಶೆಗೊಂಡ ಲಕ್ಷ್ಮಿ, ಸಿಎಂ ಸಹಾಯವಾಣಿಯ ಮೂಲಕ ಅವರ ವಿರುದ್ಧ ದೂರು ದಾಖಲಿಸಿದರು. ನಂತರ ರಾಜೇಶ್ ತಹಸಿಲ್ ಕಚೇರಿಗೆ ಬಹ ಹೇಳಿ ತನ್ನ ಫೋನ್ ಕಸಿದುಕೊಂಡು, ದೂರನ್ನು ಸ್ವತಃ ಅಳಿಸಿಹಾಕಿದರು ಎಂದು ಅವರು ಆರೋಪಿಸಿದ್ದಾರೆ.

ಈ ಘಟನೆಯು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು ಎಂದು ಹೇಳಲಾಗಿದೆ. ಕೋಪಗೊಂಡ ಲಕ್ಷ್ಮಿಯು ರಾಜೇಶ್‌ಗೆ ಕಪಾಳಮೋಕ್ಷ ಮಾಡಿದ್ದಾಳೆ. ನಂತರ ಪಟ್ವಾರಿ ರಾಜೇಶ್ ಪೊಲೀಸ್ ದೂರು ದಾಖಲಿಸಿ, ಲಕ್ಷ್ಮಿ ತನ್ನ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ನೌಕರ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಲಕ್ಷ್ಮಿ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆ ಕೂಡ ಪಟ್ವಾರಿ ವಿರುದ್ಧ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಇನ್ನು ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಇದನ್ನೂ ಓದಿ: Viral Video: ಫುಟ್‌ಪಾತ್‌ನಲ್ಲಿ ಬೈಕ್ ಚಲಾಯಿಸಿ ಹುಚ್ಚಾಟ! ಜನ ಬದುಕುಳಿದಿದ್ದೇ ಅದೃಷ್ಟ- ವಿಡಿಯೊ ನೋಡಿ