ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರವಾಸಿ ಸ್ಥಳದಲ್ಲಿ ವಿದೇಶಿ ಮಹಿಳೆಗೆ ಕಿರುಕುಳ ನೀಡಿದ ಕಾಮುಕ: ವಿಡಿಯೊ ವೈರಲ್

Viral News: ಕೆಲಸದ ಸ್ಥಳದಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸುವ ಅನೇಕ ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ ಹಿಮಾಚಲ ಪ್ರದೇಶದಲ್ಲಿ ವಿದೇಶಿ ಮಹಿಳೆ ಜತೆ ವ್ಯಕ್ತಿಯೊಬ್ಬ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಸಾರ್ವಜನಿಕವಾಗಿ ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದು, ಇದರ ಸಿಸಿಟಿವಿ ದೃಶ್ಯವು ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

ಹಿಮಾಚಲ ಪ್ರದೇಶದಲ್ಲಿ ವಿದೇಶಿ ಮಹಿಳೆ ಜತೆ ಅನುಚಿತವಾಗಿ ವರ್ತಿಸಿದ ಯುವಕ

ವಿದೇಶಿ ಮಹಿಳೆ ಜತೆ ಅನುಚಿತವಾಗಿ ವರ್ತಿಸಿದ ವ್ಯಕ್ತಿ -

Profile
Pushpa Kumari Jun 5, 2026 7:17 PM

ಶಿಮ್ಲಾ, ಜೂ‌. 5: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕೆಲಸದ ಸ್ಥಳದಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿದ ಅನೇಕ ಘಟನೆಗಳು ನಡೆಯುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಹಿಮಾಚಲ ಪ್ರದೇಶದಲ್ಲಿ ವಿದೇಶಿ ಮಹಿಳೆ ಜತೆ ವ್ಯಕ್ತಿಯೊಬ್ಬ ಕೆಟ್ಟದಾಗಿ ವರ್ತಿಸಿದ್ದಾನೆ. ಸಾರ್ವಜನಿಕವಾಗಿ ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದು ಇದರ ಸಿಸಿಟಿವಿ ದೃಶ್ಯವು ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ (Viral News) ಆಗಿದೆ.

ಸಾರ್ವಜನಿಕ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದೇಶಿ ಮಹಿಳೆಯನ್ನು ಈ ವ್ಯಕ್ತಿ ಅನುಚಿತವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ಜೂನ್ 4ರಂದು ನಡೆದ ಈ ಘಟನೆಯನ್ನು 'ದಿ ಮಾಡರ್ನ್ ಹಿಮಾಚಲ್' ಎಂಬ ಎಕ್ಸ್‌ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಇಬ್ಬರು ಪ್ರವಾಸಿಗರು ನಡೆದುಕೊಂಡು ಹೋಗುತ್ತಿರುವಾಗ ಕಟ್ಟಡದ ಹೊರಗೆ ಜಮಾಯಿಸಿದ್ದ ಗುಂಪೊಂದು ವಿಡಿಯೊದಲ್ಲಿ ಕಂಡು ಬಂದಿದೆ. ಕೆಲವೇ ಹೊತ್ತಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪ್ರವಾಸಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ‌.

ವಿಡಿಯೊ ನೋಡಿ:



ಆತ ​ಮಹಿಳಾ ಪ್ರವಾಸಿಯ ಕೈಯನ್ನು ಅಸಭ್ಯವಾಗಿ ಮುಟ್ಟಿದ್ದಾನೆ. ಇದರಿಂದ ಭಯಪಟ್ಟ ಮಹಿಳೆ ತಕ್ಷಣ ತನ್ನ ಸಂಗಾತಿಯೊಂದಿಗೆ ಮುಂದೆ ಸಾಗಿದ್ದಾರೆ. ವಿಡಿಯೊವನ್ನು ಹಂಚಿಕೊಂಡ ʼದಿ ಮಾಡ್ರನ್ ಹಿಮಾಚಲʼ ಖಾತೆಯು ಘಟನೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಇಂತಹ ಕೆಲವು ವ್ಯಕ್ತಿಗಳ ಕೃತ್ಯದಿಂದ ಇಡೀ ರಾಜ್ಯ ಮತ್ತು ಅಲ್ಲಿನ ನಿವಾಸಿಗಳಿಗೆ ಕೆಟ್ಟ ಹೆಸರು ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ಬರೇಲಿಯಲ್ಲಿ ರಣ ಭೀಕರ ಬಿರುಗಾಳಿ; ಶೆಡ್‌ನೊಂದಿಗೆ ಆಕಾಶಕ್ಕೆ ಹಾರಿದ ವ್ಯಕ್ತಿ

ವಿದೇಶಿಗರು ಇಲ್ಲಿನ ಬೆಟ್ಟಗಳ ಸೌಂದರ್ಯವನ್ನು ಸವಿಯಲು ಬಂದಿದ್ದರು. ಆದರೆ ಅಪರಿಚಿತ ವ್ಯಕ್ತಿಯ ಅಸಭ್ಯ ವರ್ತನೆಯಿಂದ ಅಲ್ಲಿದ್ದ ಮಹಿಳೆಗೆ ಅಸುರಕ್ಷತೆ ಭಾವನೆ ಮೂಡಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ​ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಹಿಮಾಚಲ ಪ್ರದೇಶ ಪೊಲೀಸರನ್ನು ಟ್ಯಾಗ್ ಮಾಡಿ, ಆರೋಪಿಯನ್ನು ತಕ್ಷಣವೇ ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದಾರೆ.