ನವದೆಹಲಿ, ಫೆ. 27: ಯುವಕ- ಯುವತಿಯರ ಕಿತ್ತಾಟದ ಅನೇಕ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗುತ್ತದೆ. ಇತ್ತೀಚೆಗಷ್ಟೇ ಯುವತಿಯೊಬ್ಬಳು ಗುರುಗ್ರಾಮ್‌ನಲ್ಲಿ ತನ್ನ ಪ್ರಿಯತಮನಿಗೆ ಸಾರ್ವಜನಿಕವಾಗಿ ಥಳಿಸಿದ ದೃಶ್ಯ ವೈರಲ್ ಆಗಿತ್ತು. ಇದೀಗ ಯುವಕನೊಬ್ಬ ತನ್ನ ಪ್ರಿಯತಮೆ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದ ಘಟನೆ ಕಂಡು ಬಂದಿದೆ. ರಾಜಧಾನಿ ದೆಹಲಿಯ ರೋಹಿಣಿ ಪ್ರದೇಶದಲ್ಲಿರುವ ಸ್ವರ್ಣ ಜಯಂತಿ ಪಾರ್ಕ್‌ನಲ್ಲಿ ಈ ಅಘಾತಕಾರಿ ಘಟನೆ ಕಂಡು ಬಂದಿದೆ.
ದೆಹಲಿಯ ಉದ್ಯಾನವನದಲ್ಲಿ ಯುವಕ ಯುವತಿ ಜಗಳವಾಡುತ್ತಿರುವ ದೃಶ್ಯ ಕಂಡು ಬಂದಿದ್ದು ಯುವಕ ತನ್ನ ಗೆಳತಿಗೆ ಪದೇ ಪದೆ ಕಪಾಳಮೋಕ್ಷ ಮಾಡಿದ್ದಾನೆ. ಆಕೆಗೆ ಸುಮಾರು 30ರಿಂದ 40 ಬಾರಿ ಹೊಡೆದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿಡಿಯೊ ನೋಡಿ:
ಆ ಸಮಯದಲ್ಲಿ ಪಾರ್ಕ್‌ನಲ್ಲಿದ್ದ ಇದ್ದ ಇನ್ನೊಬ್ಬ ವ್ಯಕ್ತಿ ಈ ದೃಶ್ಯ ರೆಕಾರ್ಡ್ ಮಾಡಿದ್ದಾರೆ. ʼʼಪಾರ್ಕ್‌ನಲ್ಲಿ ಕುಳಿತಿದ್ದಾಗ ಈ ಜೋಡಿ ಜಗಳವಾಡುತ್ತಿರುವುದನ್ನು ಗಮನಿಸಿದೆ. ಇವರಿಬ್ಬರು ತೀವ್ರ ವಾಗ್ವಾದದಲ್ಲಿ ತೊಡಗಿದ್ದು ಸ್ವಲ್ಪ ಸಮಯದ ನಂತರ, ಯುವಕನು ಯುವತಿಗೆ ಕಪಾಳಮೋಕ್ಷ ಮಾಡಿದ್ದಾನೆ. ಆದರೆ ಯುವತಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲʼʼ ಎಂದು ಹೇಳಿದ್ದಾರೆ.
ವೈರಲ್ ಆಗಿರುವ ವಿಡಿಯೊದಲ್ಲಿ ಯುವಕ ಮತ್ತು ಯುವತಿ ಕುಳಿತು ತೀವ್ರವಾಗಿ ವಾಗ್ವಾದ ನಡೆಸುತ್ತಿರುವುದು ಕಂಡು ಬಂದಿದೆ. ಮಾತಿನ ಮೂಲಕ ಜಗಳ ನಡೆಯುತ್ತಿರುವಾಗಲೇ ಯುವಕ ಹಠಾತ್ತನೆ ಯುವತಿಯ ಕೆನ್ನೆಗೆ ಸರಿಯಾಗಿ ಬಾರಿಸಿದ್ದಾನೆ.
ದಿನನಿತ್ಯ 3.5 ಕೆಜಿ ಚಿನ್ನ ಧರಿಸುವ ಗೋಲ್ಡ್ ಮ್ಯಾನ್ ಕನ್ಹಯ್ಯಾಲಾಲ್ ಖಾತಿಕ್ ಗೆ ಜೀವ ಬೆದರಿಕೆ!
ಈ ಘಟನೆಯ ವಿಡಿಯೊ ವೈರಲ್ ಆಗುತ್ತಿದ್ದಂತೆ ಅನೇಕರು ಯುವಕನ ನಡೆಯನ್ನು ಟೀಕಿಸಿದ್ದಾರೆ. ಒಬ್ಬರು ಕಾಮೆಂಟ್ ಮಾಡಿ “ಅತ್ಯಂತ ಆಘಾತಕಾರಿ ವಿಚಾರ. ಜನರು ಸುಮ್ಮನೆ ನಡೆದುಕೊಂಡು ಹೋಗುತ್ತಾರೆ. ಮಹಿಳೆಗೆ 30-40 ಬಾರಿ ಕಪಾಳಮೋಕ್ಷ ಮಾಡುವುದನ್ನು ನೋಡುವುದು ನಮ್ಮ ಸಮಾಜದ ವರ್ತನೆʼʼ ಎಂದಿದ್ದಾರೆ. ಮತ್ತೊಬ್ಬರು, ನಿʼʼಜವಾದ ಪುರುಷನು ಮಹಿಳೆಯರ ಮೇಲೆ ಕೈ ಎತ್ತುವುದಿಲ್ಲ. ನಿಮ್ಮ ಭಾವನೆಗಳನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದಿದ್ದರೆ, ನೀವು ಸಂಬಂಧಕ್ಕೆ ಅರ್ಹರಲ್ಲ. ಹಿಂಸೆ ಪ್ರೀತಿಯಲ್ಲ, ಅದು ದೌರ್ಬಲ್ಯʼʼ ಎಂದು ಹೇಳಿದ್ದಾರೆ.
ಅನೇಕರು ದೆಹಲಿ ಪೊಲೀಸರನ್ನು ಟ್ಯಾಗ್ ಮಾಡಿ, ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಆ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿದೆಯೇ ಎಂಬುದರ ಕುರಿತು ದೆಹಲಿ ಪೊಲೀಸರಿಂದ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ .