ಭುವನೇಶ್ವರ, ಜೂ. 4: ಸರಕಾರಿ ಆಸ್ಪತ್ರೆಯೊಂದರಲ್ಲಿ ಅಘಾತಕಾರಿ ಘಟನೆಯೊಂದು ನಡೆದಿದೆ. ವೈದ್ಯಕೀಯ ತಪಾಸಣೆ ವೇಳೆ ಪೊಲೀಸರಿಗೆ ಕುಡುಕ ಯುವಕನೊಬ್ಬ ಕಪಾಳ ಮೋಕ್ಷ ಮಾಡಿದ ಘಟನೆ ಒಡಿಶಾದ ಖುರ್ದಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಇಬ್ಬರು ಯುವಕರು ಮದ್ಯದ ಅಮಲಿನಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ತೊಂದರೆ ನೀಡುತ್ತಿದ್ದರು. ಅವರ ವರ್ತನೆಯಿಂದ ಕಿರಿಕಿರಿಗೆ ಒಳಗಾದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಒಬ್ಬ ಯುವಕ ಕುಡಿತದ ಮತ್ತಿನಲ್ಲಿ ಪೊಲೀಸರ ಕೆನ್ನೆಗೆ ಬಾರಿಸಿದ್ದಾನೆ. ಸದ್ಯ ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral News) ಆಗಿದೆ.
ಯಾವುದೇ ತಪ್ಪು ಮಾಡಿದಾಗ ಪೊಲೀಸರು ಸಾರ್ವಜನಿಕರಿಗೆ ಶಿಕ್ಷೆ ನೀಡಿರುವುದನ್ನು ನೀವು ಕೇಳಿರಬಹುದು. ಆದರೆ ಇಲ್ಲಿ ಯುವಕನೊಬ್ಬ ಬೇಕಾಬಿಟ್ಟಿಯಾಗಿ ವರ್ತಿಸಿ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೊ ನೋಡಿದ ಅನೇಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ವಿಡಿಯೊ ನೋಡಿ:
ಸಾರ್ವಜನಿಕ ಸ್ಥಳದಲ್ಲಿ ಯುವಕರಿಬ್ಬರು ಕುಡಿತದ ಅಮಲಿನಲ್ಲಿ ಗಲಾಟೆ ಮಾಡಿದ್ದರು. ಈ ಆರೋಪದ ಮೇಲೆ ಬಂಧಿತರಾಗಿದ್ದ ಇಬ್ಬರು ಯುವಕರನ್ನು ವೈದ್ಯಕೀಯ ತಪಾಸಣೆಗಾಗಿ ಒಡಿಶಾದ ಖುರ್ದಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಇಲ್ಲಿ ನಡೆದ ಘಟನೆ ಸಂಘರ್ಷಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ನಡೆಯಬೇಕಿದ್ದ ವೈದ್ಯಕೀಯ ತಪಾಸಣೆ ಕೆಲವೇ ಕ್ಷಣಗಳಲ್ಲಿ ರಣರಂಗವಾಗಿ ಮಾರ್ಪಟ್ಟಿತು. ಆಸ್ಪತ್ರೆಯ ಒಳಗಡೆ ಯುವಕರು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ಬಳಿಕ ಓರ್ವ ಯುವಕ ಪೊಲೀಸರ ಮೇಲೆ ಮುನ್ನುಗ್ಗಿ ಹಲ್ಲೆ ನಡೆಸಿದ್ದಾನೆ.
ಬೆಂಗಳೂರಿನಲ್ಲಿ ಮಧ್ಯರಾತ್ರಿ ಆಟೋದಲ್ಲಿ ಸಂಚರಿಸಿದ ಮಹಿಳೆ ವಿಡಿಯೋದಲ್ಲಿ ಹೇಳಿದ್ದೇನು?
ಯುವಕ ಅಲ್ಲೇ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ಹೇಳಲಾಗಿದೆ. ಈ ಹಠಾತ್ ವಾತಾವರಣದಿಂದ ಆಸ್ಪತ್ರೆಯಲ್ಲಿದ್ದ ರೋಗಿಗಳು, ಸಿಬ್ಬಂದಿ ಗಾಬರಿಗೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೊ ಆರೋಪಿಗಳು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಆಸ್ಪತ್ರೆ ಆವರಣದೊಳಗೆ ಉದ್ವಿಗ್ನ ಮಾತಿನ ಚಕಮಕಿ ನಡೆಯುತ್ತಿರುವುದನ್ನು ತೋರಿಸಿದೆ.
ಈ ಸಂಘರ್ಷ ನಡೆಯುತ್ತಿದ್ದಂತೆ ಹೆಚ್ಚುವರಿ ಅಧಿಕಾರಿಗಳು ಆಗಮಿಸಿ ಇಬ್ಬರು ಆರೋಪಿಗಳನ್ನು ಮತ್ತೆ ವಶಕ್ಕೆ ಪಡೆದರು. ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಿ ಆಸ್ಪತ್ರೆಯೊಳಗೆ ಗದ್ದಲ ಸೃಷ್ಟಿಸಿದ್ದಕ್ಕಾಗಿ ಅಧಿಕಾರಿಗಳು ಅವರ ವಿರುದ್ಧ ಹೆಚ್ಚಿನ ಕಾನೂನು ಕ್ರಮ ಕೈಗೊಂಡಿದ್ದಾರೆ.