ರೀಲ್ಸ್ ಕ್ರೇಜ್‌ಗೆ ಯುವತಿ ಬಲಿ: ಬೈಕ್ ರೈಡ್ ಮಾಡುತ್ತಲೇ ವಿಡಿಯೊ ಚಿತ್ರೀಕರಿಸುವ ದುಸ್ಸಾಹಸಕ್ಕೆ ಮುಂದಾದ ವೇಳೆ ಡಿವೈಡರ್‌ಗೆ ಡಿಕ್ಕಿ
Viral Video: ಚಲಿಸುವ ವಾಹನಗಳ ಮುಂದೆ, ರೈಲ್ವೆ ಹಳಿಗಳ ಮೇಲೆ ನಿಂತು ರೀಲ್ಸ್ ಮಾಡಿ ಯುವಜನತೆ ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಯುವತಿಯೊಬ್ಬಳು ರೀಲ್ಸ್ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಸದ್ಯ ಈ ದೃಶ್ಯದ ಬಗ್ಗೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.
ಹಶೀಮ್ ಮತ್ತು ಇಕ್ರಾ -
ಘಾಜಿಯಾಬಾದ್, ಏ. 13: ಇತ್ತೀಚೆಗೆ ರೀಲ್ಸ್ ಕ್ರೇಜ್ ಹೆಚ್ಚಾಗಿದೆ. ಚಲಿಸುವ ವಾಹನಗಳ ಮುಂದೆ, ರೈಲ್ವೆ ಹಳಿಗಳ ಮೇಲೆ ನಿಂತು ರೀಲ್ಸ್ ಮಾಡಿ ಯುವಜನತೆ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದೆ. ಅದೇ ರೀತಿಯ ಘಟನೆಯೊಂದು ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದಿದೆ. ಯುವತಿಯೊಬ್ಬಳು ರೀಲ್ಸ್ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಸದ್ಯ ಈ ದೃಶ್ಯದ (Viral News) ಬಗ್ಗೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.
ರೈಡ್ ಮಾಡುತ್ತಲೇ ರೀಲ್ ಚಿತ್ರೀಕರಣ ಮಾಡುತ್ತಿದ್ದಾಗ ಸಮತೋಲನ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನ್ನಪ್ಪಿದ್ದಾಳೆ. ಆಕೆ ಅತಿ ವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದಳು ಎಂದು ವರದಿಯಾಗಿದೆ. ಆದರೆ ಆಕೆಯ ಹಿಂದೆ ಕುಳಿತಿದ್ದ ವ್ಯಕ್ತಿ ಆ ಸಮಯದಲ್ಲಿ ತನ್ನ ಮೊಬೈಲ್ ಫೋನ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ.
ವಿಡಿಯೋ ನೋಡಿ:
A tragic accident was reported in Ghaziabad, where a high-speed sports bike crashed into a divider, resulting in the death of a young woman, Ikra.
— Hate Detector 🔍 (@HateDetectors) April 13, 2026
According to reports, Ikra was riding the bike while her friend, Hashim, was filming a video at the time of the crash. Neither of… pic.twitter.com/5qTUqBPygs
ಭಾನುವಾರ (ಏಪ್ರಿಲ್ 12) ಸಂಜೆ ವೇವ್ ಸಿಟಿ ಪ್ರದೇಶದ ಐಎಂಎಸ್ ಕಾಲೇಜು ಫ್ಲೈಓವರ್ ಬಳಿ ಈ ಘಟನೆ ನಡೆದಿದೆ. ಅಪಘಾತದಿಂದ ಯುವಕನಿಗೆ ಗಂಭೀರ ಗಾಯವಾಗಿದೆ. ಯುವಕನನ್ನು 20 ವರ್ಷದ ಹಾಶಿಮ್ ಎಂದು ಗುರುತಿಸಲಾಗಿದೆ. ಮೃತ ಯುವತಿ 19 ವರ್ಷದ ಇಕ್ರಾ.
ವೇದಿಕೆಯಲ್ಲೇ ಆ್ಯಂಕರ್‌ಗೆ ಚಪ್ಪಲಿಯಿಂದ ಹೊಡೆದ ಖ್ಯಾತ ಗಾಯಕಿ
ಅಪಘಾತದ ಪರಿಣಾಮ ಇಬ್ಬರೂ ಹಲವು ಅಡಿಗಳಷ್ಟು ಎತ್ತರಕ್ಕೆ ಎಸೆದು ನೆಲಕ್ಕೆ ಬಿದ್ದಿದ್ದಾರೆ. ಇಬ್ಬರೂ ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಅಪಘಾತವಾದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ವೈದ್ಯರು ಯುವತಿ ಮೃತಪಟ್ಟಿದ್ದಾಗಿ ಘೋಷಿಸಿದರು. ತಲೆ ಮತ್ತು ಮುಖಕ್ಕೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಇಕ್ರಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಹಶೀಮ್‌ನ ಕಾಲು ಮತ್ತು ಸೊಂಟದ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾನೆ.