ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

POCSO Act: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 13,719 ಫೋಕ್ಸೊ ಪ್ರಕರಣ

18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗುವುದು ಕಂಡುಬಂದರೆ, ಅಂತಹವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆಯಡಿ (ಪೋಕ್ಸೋ) ಪ್ರಕರಣ ದಾಖಲಾಗ ಲಿದೆ. ಈ ಸಂಬಂಧ 2022ರಿಂದ ಈ ವರ್ಷದ ಜುಲೈ ಅಂತ್ಯಕ್ಕೆ ರಾಜ್ಯದಲ್ಲಿ 13,719 ಪ್ರಕರಣಗಳು ದಾಖಲಾ ಗಿವೆ.

ಶೇ.26 ಪ್ರಕರಣ ಹೆಚ್ಚಳ: ಶಿಕ್ಷೆಯ ಪ್ರಮಾಣ ಕಡಿಮೆ

ರಾಜಿ ಸಂಧಾನ ಮೂಲಕ ಪ್ರಕರಣ ಇತ್ಯರ್ಥ

ಗುಡ್ ಟಚ್ ಮತ್ತು ಬ್ಯಾಡ್ ಟಚ್ ಕುರಿತು ಮಕ್ಕಳಿಗೆ ತಿಳಿವಳಿಕೆ

ಬೆಂಗಳೂರು: ಅಪ್ರಾಪ್ತೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಅಧಿಕವಾಗುತ್ತಿದೆ. ಬಿಗಿಯಾದ ಕಾನೂನು ರೂಪಿಸಿ ಈ ಬಗ್ಗೆ ನಿರಂತರ ಜಾಗೃತಿ ಮೂಡಿಸುತ್ತಿದ್ದರೂ, ಬಾಲಕಿಯರ ಮೇಲೆ ಹೀನಕೃತ್ಯ ಮುಂದುವರಿದಿರುವುದು ಆತಂಕಕಾರಿ ಯಾಗಿದೆ.

18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗುವುದು ಕಂಡುಬಂದರೆ, ಅಂತಹವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆಯಡಿ (ಪೋಕ್ಸೋ) ಪ್ರಕರಣ ದಾಖಲಾಗಲಿದೆ. ಈ ಸಂಬಂಧ 2022ರಿಂದ ಈ ವರ್ಷದ ಜುಲೈ ಅಂತ್ಯಕ್ಕೆ ರಾಜ್ಯದಲ್ಲಿ 13,719 ಪ್ರಕರಣಗಳು ದಾಖಲಾಗಿವೆ.

ಈ ಪೈಕಿ 348 ಪ್ರಕರಣಗಳಲ್ಲಿ ಮಾತ್ರ ಆರೋಪಿಗಳಿಗೆ ಶಿಕ್ಷೆಯಾಗಿದೆ. ಇನ್ನುಳಿದ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ ಎಂದು ಸರಕಾರ ನೀಡಿದ ಅಂಕಿ ಅಂಶಗಳಿಂದ ಬಹಿರಂಗಗೊಂಡಿದೆ. 2022ರಲ್ಲಿ 3209 ಪೋಕ್ಸೋ ಪ್ರಕರಣ ದಾಖಲಾಗಿದ್ದರೆ 2024ರಲ್ಲಿ ಈ ಸಂಖ್ಯೆ 4604ಕ್ಕೆ ಏರಿಕೆಯಾಗಿದೆ, ಈ ಮೂಲಕ ಶೇಕಡಾ 26ರಷ್ಟು ಪ್ರಕರಣ ಹೆಚ್ಚಳವಾಗಿವೆ.

2022ರಲ್ಲಿ ದಾಖಲಾಗಿದ್ದ 3209 ಪ್ರಕರಣಗಳ ಪೈಕಿ 186 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿವೆ. ಇನ್ನು 1562 ಪ್ರಕರಣಗಳು ನ್ಯಾಯಾಲಯದಲ್ಲಿ ವಜಾಗೊಂಡರೆ, 1224 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಪೋಕ್ಸೋ ಕಾಯ್ದೆ ಕುರಿತು ನಿರಂತರ ಜಾಗೃತಿ ಮೂಡಿಸುತ್ತಿರುವ ಕಾರಣ ಪ್ರಕರಣ ದಾಖಲಾಗುವ ಸಂಖ್ಯೆಯಲ್ಲಿ ಅಧಿಕವಾಗುತ್ತಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ನ್ಯಾಯಾಲಯ ದಲ್ಲಿ ಪ್ರಕರಣಗಳನ್ನು ಮುಂದುವರಿಸದೆ ಹಿಂಜರಿಯುತ್ತಿದ್ದಾರೆ.

ನ್ಯಾಯಾಲಯದ ಹೊರಗೆ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳು ತ್ತಿದ್ದಾರೆ, ಹೀಗಾಗಿ ಶಿಕ್ಷೆ ಪ್ರಮಾಣ ಕಡಿಮೆಯಾಗಿದೆ ಎಂದು ಮಕ್ಕಳ ತಜ್ಞರೊಬ್ಬರು ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯ ಕಡಿವಾಣಕ್ಕೆ ಕೈಗೊಂಡ ಕ್ರಮಗಳೇನು ಗುಡ್ ಟಚ್ ಮತ್ತು ಬ್ಯಾಡ್ ಟಚ್ ಕುರಿತು ಮಕ್ಕಳಿಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ.

ಪಾರ್ಕ್, ಆಟದ ಮೈದಾನ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಕರ್ನಾಟಕ ಸ್ಟೇಟ್ ಪೊಲೀಸ್ ಆಪ್ ಹಾಗೂ ಬೆಂಗಳೂರು ನಗರದಲ್ಲಿ ಸುರಕ್ಷ ಆಪ್ ಮೂಲಕ ತುರ್ತು ಸಂದರ್ಭಗಳಲ್ಲಿ ವಿಡಿಯೋ ಕರೆ ಮಾಡಿ ದೂರು ನೀಡಬಹುದು. ರಾಜ್ಯದ ಪೊಲೀಸ್ ಠಾಣೆಗಳಲ್ಲಿ ದಿನದ 24 ಗಂಟೆಗಳ ಕಾರ್ಯನಿರ್ವಹಿಸುವ 1050 ಮಹಿಳಾ ಹೆಲ್ಪ್ ಡೆ ರಚನೆ ಮಾಡಲಾಗಿದೆ.

ರಾಜ್ಯದ ವಿವಿಧ‌ ಪೊಲೀಸ್ ಠಾಣೆಗಳಲ್ಲಿ 35 ಮಾನವ ಕಳ್ಳ ಸಾಗಾಣಿಕೆ ನಿಷೇಧ ಘಟಕ ಸ್ಥಾಪಿಸ ಲಾಗಿದೆ. ಸುರಕ್ಷಿತ ನಗರ (ಸೇಫ್ ಸಿಟಿ) ಯೋಜನೆಯಡಿ ರಾಜಧಾನಿಯಲ್ಲಿ 7500 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.