ಡಿಸಿಎಂ ಹುದ್ದೆಗೆ ವೈಯಕ್ತಿಕ ಹಿತಾಸಕ್ತಿಗಾಗಿ ಬೇಡಿಕೆ ಇಟ್ಟಿಲ್ಲ, ಪಕ್ಷದ ಹಿತ ದೃಷ್ಟಿಯಿಂದ ಕೇಳಲಾಗಿದೆ. ಎರಡೂವರೆ ವರ್ಷದ ನಂತರ ಸಿಎಂ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕಷ್ಟದಲ್ಲಿರುವ ರಾಜ್ಯದ ರೈತರಿಗೆ ಅನುಕೂಲ ಮಾಡಲು ಇಷ್ಟಪಟ್ಟು ಸಹಕಾರಿ ಖಾತೆ ಪಡೆದುಕೊಂಡಿದ್ದೇನೆ. ರಾಜ್ಯದಲ್ಲಿ ಬರಗಾಲವಿದೆ. ಈ ಸಂದರ್ಭದಲ್ಲಿ ರೈತರ ಹಿತಾಸಕ್ತಿ ಕಾಪಾಡಬೇಕಾದ ಆದ್ಯ ಕರ್ತವ್ಯ ನಮ್ಮ ಮೇಲಿದೆ. ಹೀಗೆ ಅನೇಕ ವಿಚಾರಗಳನ್ನು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರು ‘ವಿಶ್ವವಾಣಿ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ.
ಸಂದರ್ಶನ: ರಂಗನಾಥ ಕೆ.ಮರಡಿ ತುಮಕೂರು
ಡಿಸಿಎಂ ಹುದ್ದೆ ಬೇಡಿಕೆಯ ಉದ್ದೇಶವೇನು? ಡಿಕೆಶಿ ಜತೆಗೆ ನಿಮಗೆ ವೈಮನಸ್ಸು ಉಂಟಾಗಿದೆಯೇ?
ಡಿಸಿಎಂ ಹುದ್ದೆ ಬೇಡಿಕೆ ಹಿಂದೆ ಯಾವುದೇ ದುರುದ್ದೇಶ ಇಲ್ಲ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಹಾಗೂ ಪಕ್ಷದ ಹಿತದೃಷ್ಟಿಯಿಂದ ಡಿಸಿಎಂ ಹುದ್ದೆ ಕೇಳಲಾಗು ತ್ತಿದೆ. ಎಲ್ಲ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಲು ಅನುಕೂಲವಾಗುತ್ತದೆ. ಡಿಸಿಎಂ ಹುದ್ದೆ ಬೇಡಿಕೆಯಿಂದಾಗಿ ನಮ್ಮ ಪಕ್ಷದ ಅಧ್ಯಕ್ಷರಾದ ಡಿಕೆಶಿ ಮತ್ತು ನಮ್ಮ ನಡುವೆ ಯಾವುದೇ ವೈಮನಸ್ಸು ಉಂಟಾಗಿಲ್ಲ. ಅವರ ಮಾರ್ಗದರ್ಶನದಲ್ಲಿ ಆಡಳಿತ ನಡೆಸಿಕೊಂಡು ಹೋಗಲಾಗುತ್ತಿದೆ.
ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾಗುತ್ತಾರಾ?
ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿದ್ದಾರೆ. ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ಮೇಲೆ ಪರಿಣಾಮ ಬೀರಬಹುದೇ?
ಬಿಜೆಪಿ-ಜೆಡಿಎಸ್ ನಡುವಿನ ಮೈತ್ರಿಗೆ ಅರ್ಥವಿಲ್ಲ. ಜೆಡಿಎಸ್‌ನವರು ಯಾವಾಗ ಯಾವ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುತ್ತಾರೆ ಎಂಬುದು ತಿಳಿಯುವುದಿಲ್ಲ. ಈ ಹಿಂದೆ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ವಿಧಾನಸಭೆ ಚುನಾವಣೆ ನಂತರ ರಾಜ್ಯದಲ್ಲಿ ಜೆಡಿಎಸ್ ಸಂಪೂರ್ಣವಾಗಿ ಕ್ಷೀಣಿಸುತ್ತಿದೆ. ಪಕ್ಷದ ಉಳಿವಿಗಾಗಿ ಅವರು ಯಾವ ಪಕ್ಷದೊಂದಿಗಾದರೂ ಮೈತ್ರಿ
ಮಾಡಿಕೊಳ್ಳಲು ಮುಂದಾಗುತ್ತಾರೆ. ಜಾತ್ಯತೀತ ಜನತಾದಳ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದು ವಿಷಾದ ನೀಯ. ಇದರಿಂದ ಕಾಂಗ್ರೆಸ್ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಸದೃಢವಾಗಿದೆ.
ಕಾಂಗ್ರೆಸ್ ಸರಕಾರದ ನೂರು ದಿನಗಳ ಆಡಳಿತದ ಬಗ್ಗೆ ನಿಮ್ಮ ಅಭಿಪ್ರಾಯ?
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಯಶಸ್ವಿಯಾಗಿ ನೂರು
ದಿನ ಪೂರೈಸಿದೆ. ಚುನಾವಣೆ ಪೂರ್ವದಲ್ಲಿ ನುಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ನೀಡುವ
ಮೂಲಕ ನುಡಿದಂತೆ ನಡೆದ ಸರಕಾರವಾಗಿದೆ. ಕಾಂಗ್ರೆಸ್ ಸರಕಾರದ ನೂರು ದಿನದ ಸಾಧನೆ ತೃಪ್ತಿ ತಂದಿದೆ.
ಡಿಸಿಎಂ ಹುದ್ದೆ ಬೇಡಿಕೆಯ ಉದ್ದೇಶ ವೇನು?
ಡಿಕೆಶಿ ಜತೆಗೆ ನಿಮಗೆ ವೈಮನಸ್ಸು ಉಂಟಾಗಿದೆಯೇ?
ಡಿಸಿಎಂ ಹುದ್ದೆ ಬೇಡಿಕೆ ಹಿಂದೆ ಯಾವುದೇ ದುರುದ್ದೇಶ ಇಲ್ಲ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಹಾಗೂ ಪಕ್ಷದ ಹಿತದೃಷ್ಟಿಯಿಂದ ಡಿಸಿಎಂ ಹುದ್ದೆ ಕೇಳಲಾಗುತ್ತಿದೆ. ಎಲ್ಲ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಲು ಅನುಕೂಲವಾಗುತ್ತದೆ. ಡಿಸಿಎಂ ಹುದ್ದೆ ಬೇಡಿಕೆಯಿಂದಾಗಿ ನಮ್ಮ ಪಕ್ಷದ ಅಧ್ಯಕ್ಷರಾದ ಡಿಕೆಶಿ ಮತ್ತು ನಮ್ಮ ನಡುವೆ ಯಾವುದೇ ವೈಮನಸ್ಸು ಉಂಟಾ ಗಿಲ್ಲ. ಅವರ ಮಾರ್ಗದರ್ಶನದಲ್ಲಿ ಆಡಳಿತ ನಡೆಸಿಕೊಂಡು ಹೋಗಲಾಗುತ್ತಿದೆ.
ಎರಡೂವರೆ ವರ್ಷದ ನಂತರ ಸಿಎಂ ಬದಲಾಗುತ್ತಾರಾ ?
ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿದ್ದಾರೆ. ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ಮೇಲೆ ಪರಿಣಾಮ ಬೀರಬಹುದೇ?
ಬಿಜೆಪಿ-ಜೆಡಿಎಸ್ ನಡುವಿನ ಮೈತ್ರಿಗೆ ಅರ್ಥವಿಲ್ಲ. ಜೆಡಿಎಸ್‌ನವರು ಯಾವಾಗ ಯಾವ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುತ್ತಾರೆ ಎಂಬುದು ತಿಳಿಯುವುದಿಲ್ಲ. ಈ ಹಿಂದೆ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ವಿಧಾನಸಭೆ ಚುನಾವಣೆ ನಂತರ
ರಾಜ್ಯದಲ್ಲಿ ಜೆಡಿಎಸ್ ಸಂಪೂರ್ಣವಾಗಿ ಕ್ಷೀಣಿಸುತ್ತಿದೆ.
ಪಕ್ಷದ ಉಳಿವಿಗಾಗಿ ಅವರು ಯಾವ ಪಕ್ಷದೊಂದಿಗಾದರೂ ಮೈತ್ರಿ ಮಾಡಿಕೊಳ್ಳಲು ಮುಂದಾಗುತ್ತಾರೆ. ಜಾತ್ಯತೀತ ಜನತಾದಳ ಪಕ್ಷ ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಂಡಿರುವುದು ವಿಷಾದನೀಯ. ಇದರಿಂದ ಕಾಂಗ್ರೆಸ್ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಸದೃಢವಾಗಿದೆ.
ಕಾಂಗ್ರೆಸ್ ಸರಕಾರದ ನೂರು ದಿನಗಳ ಆಡಳಿತದ ಬಗ್ಗೆ ನಿಮ್ಮ ಅಭಿಪ್ರಾಯ?
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಯಶಸ್ವಿಯಾಗಿ ನೂರು ದಿನ ಪೂರೈಸಿದೆ. ಚುನಾವಣೆ ಪೂರ್ವದಲ್ಲಿ ನುಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ನೀಡುವ ಮೂಲಕ ನುಡಿದಂತೆ ನಡೆದ ಸರಕಾರವಾಗಿದೆ. ಕಾಂಗ್ರೆಸ್ ಸರಕಾರದ ನೂರು ದಿನದ
ಸಾಧನೆ ತೃಪ್ತಿ ತಂದಿದೆ.
ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸರಕಾರ ಕಷ್ಟಪಡುತ್ತಿದೆಯೇ?
ಚುನಾವಣಾ ಪೂರ್ವದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮುನ್ನ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಯಾವುದೇ ರೀತಿಯ ಗೊಂದಲವಿಲ್ಲದೆ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ
ಕಾರ್ಯವನ್ನು ಸಮರ್ಪಕವಾಗಿ ಮಾಡಲಾಗುತ್ತಿದೆ. ಕೇವಲ ಚುನಾವಣಾ ದೃಷ್ಟಿಯಿಂದ ಮಾತ್ರ ಯೋಜನೆಗಳನ್ನು ನೀಡುತ್ತಿಲ್ಲ. ಜನರ ಯೋಗಕ್ಷೇಮ ಕಾಪಾಡುವ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ. ಇಡೀ ದೇಶದಲ್ಲಿಯೇ ಕರ್ನಾಟಕ
ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಮನೆ ಮಾತಾಗಿವೆ. ಎಲ್ಲ ಸಿದ್ಧತೆಗಳೊಂದಿಗೆ ಸರಕಾರ ಯಾವುದೇ ತ್ರಾಸವಿಲ್ಲದೆ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿದೆ.
ತುಮಕೂರು ಕ್ಷೇತ್ರದಿಂದ ದೇವೇಗೌಡರು ಕಣಕ್ಕಿಳಿಯುವ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ತುಮಕೂರು ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಚರ್ಚೆಯಾಗುತ್ತಿದೆ. ಮಾಜಿ ಪ್ರಧಾನಿ ಅವರನ್ನು ಗೆಲ್ಲಿಸಿದರೆ ತುಮಕೂರಿಗೂ ಕೀರ್ತಿ ಬರುತ್ತದೆ. ಕಳೆದ ಬಾರಿ ಸೋತಿದ್ದರು, ಈ
ಬಾರಿಯಾದರೂ ಗೆದ್ದರೆ ತುಮಕೂರಿನ ಕೀರ್ತಿ ರಾಷ್ಟ್ರಮಟ್ಟದಲ್ಲಿ ಹೆಚ್ಚಾಗುತ್ತದೆ.
ತುಮಕೂರು ಕ್ಷೇತ್ರದಿಂದ ವಿ.ಸೋಮಣ್ಣ ಕಣಕ್ಕಿಳಿಯುವ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಸೋಮಣ್ಣ ಹಿರಿಯ ರಾಜಕಾರಣಿ. ಮೊದಲು ಕಾಂಗ್ರೆಸ್ ನಲ್ಲಿದ್ದ ಅವರು ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಸೇರ್ಪಡೆಗೊಂಡು ಸಚಿವರಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ಗೆ ಬರುವುದು ಬಿಡುವುದು ಅವರ ವೈಯಕ್ತಿಕ ವಿಚಾರ. ಅವರ
ಸೇರ್ಪಡೆಯ ಬಗ್ಗೆ ಪಕ್ಷದ ಮುಖಂಡರು ತೀರ್ಮಾನ ಮಾಡುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರಕ್ಕೆ ಪಕ್ಷ ಯಾರನ್ನು ಕಣಕ್ಕಿಳಿಸುತ್ತದೆಯೋ ಅವರಿಗೆ ಸಂಪೂರ್ಣ ಬೆಂಬಲ ನೀಡಿ ಗೆಲುವಿಗೆ ಶ್ರಮಿಸಲಾಗುವುದು.
ನಿಮ್ಮ ಅವಧಿಯಲ್ಲಿ ಮಧುಗಿರಿ ಜಿಲ್ಲೆಯಾಗುತ್ತದೆಯೇ?
ಮಧುಗಿರಿ ಜಿಲ್ಲೆಯಾದರೆ ಸಾಕಷ್ಟು ಅನುಕೂಲವಾಗುತ್ತದೆ. ಪಾವಗಡ ತಾಲೂಕಿನಿಂದ ತುಮಕೂರಿಗೆ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ಬರಲು ತೊಂದರೆ ಆಗುತ್ತಿದೆ. ಮಧುಗಿರಿ ಜಿಲ್ಲೆಯಾದರೆ ಬರಪೀಡಿತ ಪ್ರದೇಶಗಳಿಗೆ ಅನುಕೂಲವಾಗುತ್ತದೆ
.ಜಿಯಾಗುವ ಎಲ್ಲ ಸೌಲಭ್ಯಗಳನ್ನು ಮಧುಗಿರಿ ಹೊಂದಿದೆ. ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ತಿಪಟೂರು ಜಿಲ್ಲೆಯಾಗಲು ನಿಮ್ಮ ಸಹಕಾರವಿದೆಯೇ?
ತಿಪಟೂರು ಜಿಲ್ಲೆಯಾಗುವ ಎಲ್ಲ ಲಕ್ಷಣಗಳನ್ನು ಹೊಂದಿದೆ. ಗಡಿಭಾಗದ ಕೊನೆಹಳ್ಳಿಯಿಂದ ತುಮಕೂರಿಗೆ ಬರಲು ಸಾಕಷ್ಟು ದೂರವಿದೆ. ಅರಸೀಕೆರೆ ತಾಲೂಕು ಒಳಗೊಂಡಂತೆ ತಿಪಟೂರು ಜಿಲ್ಲೆ ಮಾಡಲು ಸಂಪೂರ್ಣ ಸಹಕಾರವಿದೆ.
ರಾಜಕೀಯ ವೈರಿಗಳ ಜಿಲ್ಲೆಯಲ್ಲಿ ಉಸ್ತುವಾರಿ ವಹಿಸಿಕೊಂಡಿರುವ ಅನುಭವ ಹೇಗಿದೆ?
ಹಾಸನ ಜಿಲ್ಲೆಯ ಉಸ್ತುವಾರಿಯನ್ನು ರಾಜಕೀಯ ಮಾಡಲು ವಹಿಸಿಕೊಂಡಿಲ್ಲ. ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಅಭಿವೃದ್ಧಿ ಕಾರ್ಯ ಗಳನ್ನು ಹಾಸನ ಜಿಯಲ್ಲಿ ಕೈಗೊಳ್ಳುವುದರ ಮೂಲಕ ಮಾದರಿ ಜಿಲ್ಲೆಯನ್ನಾಗಿ ಮಾಡಲಾಗುವುದು. ತುಮ
ಕೂರು ಜಿಯನ್ನು ಪ್ರೀತಿಸಿದಂತೆ, ಹಾಸನ ಜಿಲ್ಲೆಯನ್ನೂ ಪ್ರೀತಿಸುತ್ತೇನೆ. ಹಾಸನ ಜಿಲ್ಲೆಯಲ್ಲಿ ರಾಜಕೀಯ ಮಾಡಲು ನಮಗೆ ಸಮಯವಿಲ್ಲ, ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಮಯವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು.
ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಭಿಪ್ರಾಯ ಇದೆಯಾ?
ಜಿಲ್ಲೆ ಕಾಂಗ್ರೆಸ್ ಮುಖಂಡರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಏಳು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಿದ್ದೇವೆ. ಮುಂದಿನ ಲೋಕ
ಸಭಾ ಚುನಾವಣೆಯಲ್ಲಿಯೂ ಅತಿ ಹೆಚ್ಚು ಸೀಟುಗಳನ್ನು ಗೆಲ್ಲಲು ಎಲ್ಲರೂ ಒಗ್ಗೂಡಿ ಪ್ರಯತ್ನಿಸುತ್ತೇವೆ.