ಇಡೀ ದೇಶವೇ ಬೆರಗುಗಣ್ಣಿನಿಂದ ನೋಡುತ್ತಿದ್ದ ಕೇಂದ್ರ ಸರಕಾರದ ಬಜೆಟ್‌ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಈ ಬಜೆಟ್ ಸರ್ವರನ್ನೂ ತೃಪ್ತಿಪಡಿಸಿದೆ. ಜನಸಾಮಾನ್ಯರಿಗೆ ಹೊರೆಯಾಗ ದಂತೆ ಹೊಸ ತೆರಿಗೆಯನ್ನು ವಿಧಿಸದೆ ವೈಯಕ್ತಿಕ ಆದಾಯ ತೆರಿಗೆ ಮಿತಿಯನ್ನು ಹೆಚ್ಚಿಸಿ ಹಿರಿಯ ನಾಗರಿಕರು, ಮಹಿಳೆಯರು, ರೈತರು, ಕಾರ್ಮಿಕರು, ಮಧ್ಯಮ ವರ್ಗದವರು ಸೇರಿದಂತೆ ಪ್ರತಿಯೊಬ್ಬರಿಗೂ ಈ ಬಜೆಟ್‌ನಿಂದ ಸಂತೃಪ್ತಿಯಾಗಿದ್ದಾರೆ.
ಮಧ್ಯಮ ವರ್ಗಕ್ಕೆ ಹೊರೆಯಾಗಿದ್ದ ೫ ಲಕ್ಷವರೆಗಿನ ವಯಕ್ತಿಕ ಆದಾಯ ತೆರಿಗೆ ಮಿತಿಯನ್ನು ೭ ಲಕ್ಷದವರೆಗೆ ಹೆಚ್ಚಿಸುವ ಮೂಲಕ ಕೇಂದ್ರ ಸರಕಾರವು ಮಧ್ಯಮ ವರ್ಗದ ಮೇಲೆ ಕಾಳಜಿ ಪ್ರದರ್ಶಿಸಿದೆ. ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಭದ್ರ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ೫೩೦೦ ಕೋಟಿ ರು. ಅನುದಾನ ಘೋಷಿಸಲಾಗಿದೆ. ಅಲ್ಲದೆ ಇದು ರಾಜ್ಯದ ಮೊಟ್ಟಮೊದಲ ರಾಷ್ಟ್ರೀಯ ನೀರಾವರಿ ಯೋಜನೆಯಾಗಿದ್ದು, ಶಿವಮೊಗ್ಗ, ಚಿಕ್ಕಮ ಗಳೂರು, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ನಗರಗಳಿಗೆ ಕುಡಿಯುವ ನೀರು ಹಾಗೂ ನೀರಾವರಿಗೂ ಅನುಕೂಲವಾಗಲಿದೆ.
ಕೋವಿಡ್ ನಂತರವೂ ಭಾರತ ತನ್ನ ಆರ್ಥಿಕತೆಯ ವೇಗದಿಂದಾಗಿ ಜಗತ್ತಿನ ಗಮನ ಸೆಳೆದಿದೆ. ರೈಲ್ವೆ ಇಲಾಖೆಯಲ್ಲಿ ಹೆಚ್ಚಿನ ಹಣ ಹೂಡಿಕೆ, ಯುವ ಉದ್ಯಮಿಗಳು, ಕೃಷಿ ಸ್ಟಾರ್ಟಪ್‌ಗಳಿಗೆ ಉತ್ತೇಜನ, ಪ್ರವಾಸೋದ್ಯಮಕ್ಕೆ ಒತ್ತು ಕೊಟ್ಟಿದ್ದು, ಒಂದು ಜಿಲ್ಲೆ ಒಂದು ಉತ್ಪನ್ನಕ್ಕೆ ಪ್ರೋತ್ಸಾಹ ಕೊಟ್ಟ ಆಯವ್ಯಯ ಪತ್ರ ಇದಾಗಿದೆ. ಮಹಿಳಾ ಸಬಲೀಕರಣ ಕ್ಕಾಗಿ ಮಹಿಳಾ ಸಮ್ಮಾನ್ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆಯಡಿ ಮಹಿಳೆಯರಿಗೆ ಶೇ.೭ ಬಡ್ಡಿ ದರದಲ್ಲಿ ೨ ಲಕ್ಷ ರು.ವರೆಗೆ ಮಹಿಳಾ ಸಮ್ಮಾನ್ ಪ್ರಮಾಣ ಪತ್ರದಡಿ ಠೇವಣಿ ಇಡುವ ಅವಕಾಶವನ್ನು ಕಲ್ಪಿಸಲಾಗಿದ್ದು, ಆ ಮೂಲಕ ಮಹಿಳೆಯರ ಪರ ವಿಶೇಷ ಕಾಳಜಿ ತೋರಿದ್ದಾರೆ.
ಒಟ್ಟಾರೆ ಇದೊಂದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಬಜೆಟ್. ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಇದಾಗಿದೆ. ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳಿಗೆ ಆದಷ್ಟು ಬೇಗ ಹಣ ಬಿಡುಗಡೆ ಯಾಗಿ, ಯೋಜನೆಗಳುಜನರಿಗೆ ತಲುಪುವಂತಾಗಲಿ.
Read E-Paper click here