Saturday, 14th December 2024

ಚಂದ್ರಯಾನ-೩ ಮುಂದಿನ ಪಯಣ ಸುಗಮವಾಗಲಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-೩ ಅನ್ನು ಯಶಸ್ವಿಯಾಗಿ ನಿಗದಿತ ಕಕ್ಷೆಗೆ ಸೇರಿಸುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ್ದು, ತನ್ನ ಹಿರಿಮೆ ಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಇದಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣ ರಾದ ಎಲ್ಲ ವಿಜ್ಞಾನಿಗಳೂ ಅಭಿನಂದನಾರ್ಹರು.

ಚಂದ್ರಯಾನ-೩ರ ಮೊದಲ ಹಂತ ಯಶಸ್ವಿಯಾಗಿದೆಯಾದರೂ ಸಾಗಬೇಕಾಗಿರುವ ದಾರಿ ಇನ್ನೂ ದೂರ ಇದೆ. ಉಡಾವಣೆ ಗೊಂಡ ಕೆಲ ಕ್ಷಣಗಳ ನೌಕೆಯು ಕಕ್ಷೆಗೆ ಸೇರುವಲ್ಲಿ ಸ-ಲವಾಗಿದೆ. ಇದರೊಂದಿಗೆಉಪಗ್ರಹವನ್ನು ಚಂದ್ರನ ಮೇಲ್ಮೈಯಲ್ಲಿ ಇಳಿಸುವ ಆರು ವಾರಗಳ ಅಭಿಯಾನಕ್ಕೆ ಚಾಲನೆ ದೊರೆತಂತಾಗಿದೆ. ಚಂದ್ರಯಾನ-೩ರ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಸುರಕ್ಷಿತವಾಗಿ ಇಳಿಸುವುದಕ್ಕೆ ಮೊದಲು ಆದ್ಯತೆ ನೀಡಲಾಗುತ್ತದೆ.

ನಂತರ ಚಂದ್ರನ ಮೇಲೆ ಪ್ರಗ್ಯಾನ್ ಹೆಸರಿನ ರೋವರ್ ಸುತ್ತಲಿದೆ. ಅದು ಇತ್ತೀಚಿನ ಪರಿಸ್ಥಿತಿ ಹಾಗೂ ತರಹೇವಾರಿ ಕುತೂಹಲಕರ ಮಾಹಿತಿಗಳನ್ನು ವಿಜ್ಞಾನಿಗಳಿಗೆ ನೀಡಲಿದೆ. ಈಗ ಅಂದುಕೊಂಡಿರುವ ಪ್ರಕಾರ ಆ.೨೩ ಅಥವಾ ೨೪ರಂದು ಚಂದ್ರನ ಮೇಲೆ ವ್ಯೊಮನೌಕೆ ಲ್ಯಾಂಡ್ ಆಗಲಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಕೆಗೆ ಮೊದಲು ಆದ್ಯತೆ ನೀಡಲಾಗುತ್ತದೆ. ಈವರೆಗೆ ಯಾವುದೇ ಉಪಕರಣಗಳೂ ಹೋಗದ ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ತನ್ನ ನೌಕೆ ಯನ್ನು ಇಳಿಸುವ ಸಾಹಸಕ್ಕೆ ಮುಂದಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಉಷ್ಣಾಂಶ -೨೩೦ ಡಿ.ಸೆ. ಗಿಂತ ಕಡಿಮೆ ಇದ್ದು, ಇಲ್ಲಿ ಬಹುಕಾಲದವರೆಗೆ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪಳೆಯುಳಿಕೆಗಳು ಇರುವ ಅಂದಾಜಿದೆ. ಅಲ್ಲದೆ, ೨೦೦೮ರಲ್ಲಿ ಕೈಗೊಂಡ ಚಂದ್ರ ಯಾನ-೧ ಚಂದ್ರನ ದಕ್ಷಿಣ ಧ್ರುವದಲ್ಲಿ ನೀರಿದೆ ಎಂಬುದು ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ ದಕ್ಷಿಣ ಧ್ರುವವನ್ನೇ ಆಯ್ಕೆ ಮಾಡಿ ಕೊಳ್ಳಲಾಗಿದೆ.

ಅಲ್ಲದೆ, ದಕ್ಷಿಣ ಧ್ರುವದಲ್ಲಿ ಈವರೆಗೂ ಬೆಳಕನ್ನೆ ಕಾಣದ ಹಲವು ಪ್ರದೇಶಗಳಿರುವ ಕಾರಣ ಇದು ವಿeನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಅಂದುಕೊಂಡಂತೆ ಚಂದ್ರಯಾನದ ನೌಕೆ ಸಾಫ್ಟ್ ಲ್ಯಾಂಡಿಂಗ್ ಆದರೆ ಈ ಯಶಸ್ಸು ಕಂಡ ವಿಶ್ವದ ೪ನೇ ದೇಶ ಎಂಬ ಕೀರ್ತಿಗೆ ಭಾರತ ಭಾಜನವಾಗಲಿದ್ದು, ಮುಂದಿನ ಪಯಣ ಸುಗಮವಾಗಲಿ.