ದೇಶಾದ್ಯಂತ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿದ್ದು, ಭಾನುವಾರ ಒಂದೇ ದಿನ 8582 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 44513ಕ್ಕೆ ಏರಿಕೆಯಾಗಿದೆ.
ಕೇರಳದ 7 ತ್ತು ಮಿಜೋರಾಂನಲ್ಲಿ 5 ಜಿಲ್ಲೆಗಳೂ ಸೇರಿದಂತೆ ದೇಶದ 17 ಜಿಲ್ಲೆಗಳಲ್ಲಿ ವಾರದ ಪಾಸಿಟಿವಿಟಿ ದರ ಶೇ.೧೦ಕ್ಕಿಂತ ಹೆಚ್ಚು ವರದಿಯಾಗಿದೆ. ಕೇರಳದ ೭, ಮಹಾರಾಷ್ಟ್ರ ಮತ್ತು ಮಿಜೋರಾಂ ತಲಾ ೪ ಜಿಗಳೂ ಸೇರಿದಂತೆ ದೇಶದ ೨೪ ಜಿಗಳಲ್ಲಿ ವಾರದ ಪಾಸಿಟಿವಿಟಿ ದರ ಶೇ.೫ರಿಂದ ೧೦ರಷ್ಟಿದೆ. ರಾಜ್ಯದಲ್ಲೂ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲೇ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಮತ್ತೆ ಆತಂಕ ಹುಟ್ಟಿಸಿದೆ.
ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದಿರುವುದು ಹಾಗೂ ಬೂಸ್ಟರ್ ಡೋಸ್ ಪಡೆಯುವಲ್ಲಿ ಜನರು ಅಷ್ಟಾಗಿ ಉತ್ಸಾಹ ತೋರದಿರುವುದರಿಂದ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಮತ್ತೊಂದು ಅಪಾಯ ಬಂದೆರ ಗುವ ಮೊದಲೇ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಸಾಮಾಜಿಕ ಗುಂಪುಗೂಡುವಿಕೆಯಿಂದ ದೂರ ಇರಬೇಕು ಅಥವಾ ಅಂತಹ ಸಂದರ್ಭದಲ್ಲಿ ಎಚ್ಚರಿಕೆಯಿಂದ
ಇರಬೇಕು. ಮುಂಜಾಗ್ರತಾ ಡೋಸ್ (ಬೂಸ್ಟರ್ ಡೋಸ್) ಪಡೆಯಲು ಅರ್ಹರಾಗಿರುವ ಎಲ್ಲರೂ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆಯ ಬೇಕು.
ಇದೀಗ ಮಕ್ಕಳು ಕೂಡ ಲಸಿಕೆ ಪಡೆಯಲು ಅವಕಾಶ ಇರುವುದರಿಂದ ಪಾಲಕರು ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸಬೇಕು ಅಥವಾ ಶಾಲೆಗಳಲ್ಲೇ ಮಕ್ಕಳಿಗೆ ಲಸಿಕೆ ಕೊಡಿಸುವ ವ್ಯವಸ್ಥೆ ಜಾರಿಗೆ ತರಬೇಕು. ಅಲ್ಲದೆ ಈ ಹಿಂದೆ ಕೋವಿಡ್‌ನಿಂದ ಸಾವಿಗೀಡಾದವರ ಕುಟುಂಬ ಗಳ ವಾರಸುದಾರರಿಗೆ ರಾಜ್ಯ ಸರಕಾರ ಒಂದು ಲಕ್ಷ ರು. ಮತ್ತು ಕೇಂದ್ರ ಸರಕಾರ ೫೦ ಸಾವಿರ ರು. ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಇದೀಗ ಕೇವಲ ೫೦ ಸಾವಿರ ರು. ನೀಡಲಾಗುತ್ತಿದೆ ಎಂಬ ದೂರುಗಳು ಬರುತ್ತಿವೆ.
ಸರಕಾರ ಘೋಷಣೆ ಮಾಡಿದ್ದೊಂದು, ಪರಿಹಾರ ನೀಡುವುದೊಂದು ಮಾಡಿದರೆ ಸರಕಾರದ ಮೇಲೆ ಜನರಿಗೆ ಅಪನಂಬಿಕೆ ಮೂಡುತ್ತಿದೆ. ಆದ್ದರಿಂದ ಸರಕಾರ ಎಲ್ಲಿ ಲೋಪವಾಗಿದೆ ಎಂಬುದನ್ನು ಪತ್ತೆ ಹಚ್ಚಿ ಘೋಷಣೆ ಮಾಡಿದಷ್ಟು ಪರಿಹಾರವನ್ನು ಕೊಡಬೇಕು.