Friday, 20th September 2024

ಅಭಿವೃದ್ಧಿ ಕಾರ್ಯದತ್ತ ಗಮನಹರಿಸಲಿ

ರಾಜ್ಯ ಬಿಜೆಪಿಯಲ್ಲಿ ಕಳೆದ ಹಲವು ದಿನಗಳಿಂದ ಎದ್ದಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೆಹಲಿ ಒಂದು ತಾರ್ತಿಕ ಅಂತ್ಯ ಹಾಡಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ತಮಗೆ ನೀಡಿದ್ದಾರೆ ಹಾಗೂ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಎಲ್ಲ ಭಿನ್ನಮತೀಯ ಚಟುವಟಿಕೆಯಲ್ಲಿದ್ದವರಿಗೆ ಸಂದೇಶ ರವಾನಿಸಿದ್ದಾರೆ.

ಆದ್ದರಿಂದ ಇಷ್ಟು ದಿನ ಇದ್ದ ಗೊಂದಲ ಗೋಜಲುಗಳಿಗೆಲ್ಲ ಒಂದು ಉತ್ತರ ಸಿಕ್ಕಿದೆ. ವರಿಷ್ಠರ ಮುಂದಿನ ಆದೇಶದವರೆಗೆ ಯಾರು ಏನೇ ತಿಪ್ಪರಲಾಗ ಹಾಕಿದರೂ, ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಆದ್ದರಿಂದ ಯಡಿಯೂರಪ್ಪ ಅವರನ್ನು ಕೆಳಗೆ ಇಳಿಸಿ, ತಾವೇ ಮುಖ್ಯಮಂತ್ರಿಯಾಗಬೇಕು ಎಂದು ಇಸಿ ಹೊಲಿಸಬೇಕು ಎನ್ನುವ ಲೆಕ್ಕಾಚಾರದಲ್ಲಿದ್ದವರು ಇನ್ನಾದರೂ, ಈ ವಿಷಯವನ್ನು ಬಿಟ್ಟು ಇನ್ನಾದರೂ ತಮ್ಮ ಕ್ಷೇತ್ರದ ಅಭಿವೃದ್ಧಿಯತ್ತ ಗಮನಹರಿಸಲಿ.

ಕರೋನಾ ಸಂಕಷ್ಟದಲ್ಲಿ ಬಿಜೆಪಿ ಮಾತ್ರವಲ್ಲದೇ, ಕಾಂಗ್ರೆಸ್‌ನಲ್ಲಿಯೂ ಇದೇ ರೀತಿಯ ಆಂತರಿಕ ಕಿತ್ತಾಟ ನಡೆಯುತ್ತಿದೆ. ಸಂಕಷ್ಟ ಕಾಲದಲ್ಲಿ ಕ್ಷೇತ್ರದ, ರಾಜ್ಯದ ನೆರವಿಗೆ ಬರಬೇಕಾದ ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿ ನಿಭಾಯಿಸುವ ಬದಲು, ಅಧಿಕಾರಕ್ಕಾಗಿ ಕಿತ್ತಾಡಿಕೊಂಡಿರುವುದು ಉತ್ತಮ ಬೆಳವಣಿಗೆಯಲ್ಲ. ಪ್ರತಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್‌ಗಿಂತ ಈ ಸಮಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಮೇಲೆ ಹೆಚ್ಚು ಜವಾಬ್ದಾರಿಯಿರುತ್ತದೆ. ಇಷ್ಟು ದಿನವಾಗಿರುವ ಗೊಂದಲ ಗೋಜಲುಗಳನ್ನು ಇನ್ನಾದರೂ ಬಿಟ್ಟು, ರಾಜ್ಯ ಹಾಗೂ ಕ್ಷೇತ್ರದ ಅಭಿವೃದ್ಧಿಯತ್ತ ಗಮನಹರಿಸಲಿ.