Friday, 20th September 2024

ಶೈಕ್ಷಣಿಕ ಕ್ಷೇತ್ರ ಆರಂಭಿಸಲು ಸಕಾಲ

ಕರೋನಾ ಎರಡನೇ ಅಲೆಯು ಸಂಪೂರ್ಣ ನಿಯಂತ್ರಣಕ್ಕೆ ಬಂದಿರುವ ಬೆನ್ನಲ್ಲೇ ದೇಶದಲ್ಲಿ ಪದವಿ ಕಾಲೇಜುಗಳನ್ನು ಆರಂಭಿಸಲು ಸರಕಾರಗಳು ಸಿದ್ಧತೆ ನಡೆಸಿಕೊಂಡಿವೆ. ಕರ್ನಾಟಕದಲ್ಲಿಯೂ ಜುಲೈ 26ರಿಂದ ಪದವಿ ಕಾಲೇಜು ಆರಂಭಿಸುವುದಾಗಿ ಸರಕಾರ ಹೇಳಿದೆ. ಸೋಂಕು ನಿಯಂತ್ರಣಕ್ಕೆ ಬರುವುದ ರೊಂದಿಗೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡುತ್ತಿರುವ ಈ ಸಮಯದಲ್ಲಿ ಶೈಕ್ಷಣಿಕ ಕ್ಷೇತ್ರವನ್ನು ಆರಂಭಿಸುವುದು ಸೂಕ್ತ.

ಆನ್ ಲೈನ್ ಶಿಕ್ಷಣವನ್ನು ನೆಚ್ಚಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಪಠ್ಯ ಅರ್ಥವಾಗುವು ದಿಲ್ಲ. ಅದರಲ್ಲಿಯೂ ವಿಜ್ಞಾನ ಹಿನ್ನಲೆಯಿರುವ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಆಫ್ಲೈನ್ ತರ ಗತಿ ಅನಿವಾರ್ಯ. ಆದ್ದರಿಂದ ಸೋಂಕು ನಿಯಂತ್ರಣಕ್ಕೆ ಬರುತ್ತಿರುವಾಗಲೇ ಆರಂಭಿಸುವುದು ಸೂಕ್ತ ನಿರ್ಧಾರ.

ಇನ್ನು ಈಗಾಗಲೇ ಏಮ್ಸ್ ಸೇರಿದಂತೆ ಹಲವು ಸಂಸ್ಥೆಗಳು ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದಕ್ಕೆ ಒಪ್ಪಿಗೆ ನೀಡಿರುವುದರಿಂದ, ಹಂತಹಂತವಾಗಿ ಶಾಲೆಗಳನ್ನು ಆರಂಭಿಸುವುದು ಸೂಕ್ತ. ಮಕ್ಕಳಿಗೆ ಕರೋನಾ ನಿಯಂತ್ರಣಕ್ಕೆ ತಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳೊಂದಿಗೆ ಶಾಲೆಗಳನ್ನು ಆರಂಭಿಸುವುದಕ್ಕೆ ಸಿದ್ಧತೆ ನಡೆಸಿಕೊಳ್ಳಬೇಕಿದೆ.

ಗ್ರಾಮೀಣ ಭಾಗದಲ್ಲಿ ಈಗಾಗಲೇ ಸುಮಾರು ಎರಡು ವರ್ಷಗಳಿಂದ ಶಾಲೆಗಳು ತೆರೆಯದೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ. ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ದಿನದಿಂದ ದಿನಕ್ಕೆ ಹೆಚ್ಚಾಗು ತ್ತಲೇ ಇದೆ. ಇದರೊಂದಿಗೆ ಮಕ್ಕಳಿಗೆ ಸರಿಯಾದ ಪೌಷ್ಠಿಕಾಂಶದ ಆಹಾರವೂ ಸಿಗುತ್ತಿಲ್ಲ.

ಆದ್ದರಿಂದ ಶಾಲೆಗಳನ್ನು ಆರಂಭಿಸುವುದು ಸೂಕ್ತ ಎನ್ನುವ ಮಾತುಗಳನ್ನು ತಜ್ಞರು ಹೇಳುತ್ತಿದ್ದಾರೆ. ಮೂರನೇ ಅಲೆಯ ಆತಂಕದಲ್ಲಿಯೂ ಅರ್ಹರಿಗೆ ಲಸಿಕೆ ನೀಡುವ ಮೂಲಕ, ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಆದ್ದರಿಂದ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಲಸಿಕೆಯನ್ನು ಇನ್ನಷ್ಟು ವೇಗವಾಗಿ ಜನರಿಗೆ ನೀಡುವ ನಿಟ್ಟಿನಲ್ಲಿ ಕ್ರಮವಹಿಸಬೇಕಿದೆ.