ಪೆಟ್ರೋಲ್ ಮತ್ತು ಡೀಸೆಲ್ ದರವು ಶುಕ್ರವಾರ ೮೦ ಪೈಸೆಯಷ್ಟು ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಬಾರಿಗೆ ದರ
ಏರಿಕೆಯಾಗಿದೆ. ಪಂಚ ರಾಜ್ಯಗಳ ಚುನಾವಣೆಗೂ ಮುನ್ನ ತೈಲ ಕಂಪನಿಗಳು ದರ ಹೆಚ್ಚಳವನ್ನು ತಡೆ ಹಿಡಿಯುವ ಮೂಲಕ ಆಗಿದ್ದ ನಷ್ಟವನ್ನು ಈಗ ಸರಿದೂಗಿಸಿಕೊಳ್ಳಲು ಮುಂದಾದಂತಿದೆ.
ಈ ಬೆಲೆ ಏರಿಕೆಯು ಇನ್ನೂ ಕೆಲವು ದಿನಗಳವರೆಗೆ ಮುಂದುವರಿಯುವ ಸಾಧ್ಯತೆ ಇದೆ. ತೈಲೋತ್ಪನ್ನಗಳ ಬೆಲೆ ಏರಿಕೆಗೂ ತನಗೂ ಸಂಬಂಧ ಇಲ್ಲ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯ ಆಧಾರದಲ್ಲಿ ದೇಶಿ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗುತ್ತಿದೆ ಎಂದು ಕೇಂದ್ರ ಸರಕಾರ ಹೇಳುತ್ತಿದೆ. ಆದರೆ, ಚುನಾವಣೆ ಸಂದರ್ಭದಲ್ಲಿ ಮಾತ್ರ ಸುಮಾರು ನಾಲ್ಕು ತಿಂಗಳ ಅವಧಿಗೆ ದೇಶದಲ್ಲಿ ಪೆಟ್ರೋಲ್ ಬೆಲೆ ಹಾಗೂ ಡೀಸೆಲ್ ಬೆಲೆ ಸ್ಥಿರವಾಗಿದ್ದವು. ಆಗ ಅಂತಾ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿಕೆ ಆಗಿರಲಿಲ್ಲವೇ? ದೇಶದಲ್ಲಿ ತೈಲೋತ್ಪನ್ನಗಳ ಬೆಲೆ ಹೆಚ್ಚಿಸುವ ಹಾಗೂ ಇಳಿಸುವ ಅಽಕಾರವು ಮಾರುಕಟ್ಟೆಯ ಕೈಯಲ್ಲಿ ಇಲ್ಲ, ಅದು ಇರುವುದು ಸಂಪೂರ್ಣವಾಗಿ ಕೇಂದ್ರ ಸರಕಾರದ ಕೈಯಲ್ಲಿ ಎಂಬುದು ಇದರಿಂದ ಸಾಮಾನ್ಯರಿಗೂ ಗೊತ್ತಾಗಿದೆ.
ಹೀಗಾಗಿ, ಈಗಿನ ಸಂದರ್ಭದಲ್ಲಿ ತೈಲೋತ್ಪನ್ನಗಳ ಬೆಲೆಯನ್ನು ಇನ್ನಷ್ಟು ಹೆಚ್ಚಿಸುವ ಮೊದಲು ಸಮಗ್ರವಾಗಿ ಆಲೋಚಿಸಿ ತೀರ್ಮಾನ ಕೈಗೊಳ್ಳಬೇಕಿದೆ. ಇನ್ನೊಂದೆಡೆ ಕಳೆದ ಒಂದು ವರ್ಷದ ಅವಽಯಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯು ?೧೪೦ರಷ್ಟು ಹೆಚ್ಚಳವಾಗಿದೆ. ೨೦೨೦ರ ಮೇ ತಿಂಗಳವರೆಗೆ ಎಲ್‌ಪಿಜಿಗೆ ಸಬ್ಸಿಡಿ ನೀಡಲಾಗುತ್ತಿತ್ತು. ನಂತರದಲ್ಲಿ ಸಬ್ಸಿಡಿ ಮೊತ್ತ ವರ್ಗಾವಣೆಯು ಬಹುತೇಕ ಸ್ಥಗಿತವಾಗಿದೆ. ಹೀಗಿದ್ದರೂ, ಕೇಂದ್ರ ಸರಕಾರವು ಈ ವಿಚಾರವಾಗಿ ಅಽಕೃತ ವಾಗಿ ಚಕಾರ ಎತ್ತುತ್ತಿಲ್ಲ.
ಸಬ್ಸಿಡಿಯನ್ನು ಸ್ಥಗಿತಗೊಳಿಸಿದ್ದು ಏಕೆ? ಆ ಸಬ್ಸಿಡಿ ಹಣ ಯಾವಾಗ ಬರುತ್ತದೆ ಎಂಬುದನ್ನು ಸಾರ್ವಜನಿಕರಿಗೆ ತಿಳಿಸುವ ಹೊಣೆಗಾರಿಕೆ ಕೇಂದ್ರ ಸರಕಾರಕ್ಕಿದೆ. ಈ ಮಟ್ಟಿಗಿನ ಬೆಲೆ ಏರಿಕೆಯು ಸಾರ್ವಜನಿಕರ, ಅದರಲ್ಲೂ ಮುಖ್ಯವಾಗಿ ಕಡಿಮೆ ಆದಾಯ ಇರುವ ವರ್ಗಗಳ ತಿಂಗಳ ಖರ್ಚಿನ ಮೇಲೆ ವಿಪರೀತ ಒತ್ತಡ ಸೃಷ್ಟಿಸುತ್ತದೆ ಎಂಬುದರಲ್ಲಿ ಅನುಮಾನ ಇಲ್ಲ. ಹೀಗಾಗಿ ಜನಸಾಮಾನ್ಯರ ಹಿತಾಸಕ್ತಿ ರಕ್ಷಿಸುವ ಉದ್ದೇಶದಿಂದ ಇಂಧನ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸಲು ಕೇಂದ್ರ ಸರಕಾರ ವಿಶೇಷ ಮುತುವರ್ಜಿ ವಹಿಸಬೇಕಿದೆ.