ಒಂದೆಡೆ ದೇಶದಲ್ಲಿ ಲಸಿಕೆ ತಯಾರಿಕೆ ಹಾಗೂ ವಿತರಣೆಯ ಪ್ರಯತ್ನಗಳು ಪ್ರಗತಿಯ ಹಂತದಲ್ಲಿರುವಾಗಲೇ ರಾಜ್ಯ ಸರಕಾರ ದಿಂದ ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸುತ್ತಿರುವುದು ಸುರಕ್ಷತೆಯ ದೃಷ್ಟಿಯಿಂದ ಉತ್ತಮ ಬೆಳವಣಿಗೆ.
ಕರೋನಾ ನಿರ್ಮೂಲನೆಗಾಗಿ ಲಸಿಕೆ ಪ್ರಯತ್ನಗಳು ಕಡೆಯ ಹಂತದಲ್ಲಿವೆ. ಈ ದಿನಗಳಲ್ಲಿಯೇ ಮತ್ತೊಂದು ಆತಂಕವೂ ಎದು ರಾಗಿದೆ. ಸೆಪ್ಟೆಂಬರ್ ನಲ್ಲಿ ನಡೆಸಲಾದ ಸಮೀಕ್ಷೆ ಪ್ರಕಾರ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ ನಂತರ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಆಗಮಿಸಲಿರುವ ಚಳಿಗಾಲದಲ್ಲಿ ಸೋಂಕು ಮತ್ತಷ್ಟು ಹರಡುವ ಸಾಧ್ಯತೆ ಇರುವ ಕಾರಣದಿಂದಾಗಿ ಜಾಗ್ರತೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪ್ರಯತ್ನದ ಒಂದು ಭಾಗವಾಗಿ ರಾಜ್ಯ ಸರಕಾರವು ಶಾಲಾ – ಕಾಲೇಜುಗಳನ್ನು ಪುನರಾ ರಂಭಿಸುವುದು ಸೂಕ್ತವಲ್ಲ ಎಂಬ ಪ್ರಯತ್ನಕ್ಕೆ ಮುಂದಾಗಿದೆ.
ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಶಿಫಾರಸ್ಸನ್ನು ರಾಜ್ಯ ಸರಕಾರ ಒಪ್ಪಿದೆ. ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ ಡಿಸೆಂಬರ್ ಮೂರನೇ ವಾರದಲ್ಲಿ ಸಭೆ ನಡೆಸಿ, ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಬೆಂಗಳೂರಿನಲ್ಲಿ ಕಾಲೇಜು ಆರಂಭವಾದ ನಂತರ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ೫ ದಿನದಲ್ಲಿ ೧೧೭ ವಿದ್ಯಾರ್ಥಿಗಳು ಹಾಗೂ ೫೧ ಶಿಕ್ಷಕರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆರಂಭಿಸಿರುವ ಕಾಲೇಜುಗಳನ್ನು ಚಳಿಗಾಲ ಮುಗಿಯುವವರೆಗೆ ಸ್ಥಗಿತಗೊಳಿಸಬೇಕಾದ ಅವಶ್ಯಕತೆ ಕಂಡುಬರುತ್ತಿದೆ.
ಸೋಂಕಿತರ ಪ್ರಮಾಣದಲ್ಲಿ ರಾಜ್ಯವು ದೇಶದಲ್ಲಿಯೇ ಮೊದಲ ಸ್ಥಾನದತ್ತ ದಾಪುಗಾಲಿಡುತ್ತಿರುವ ಈ ಸಂದರ್ಭದಲ್ಲಿ ಮುಂಜಾ ಗ್ರತೆಯ ಕ್ರಮವಾಗಿ ಶಾಲಾ – ಕಾಲೇಜುಗಳನ್ನು ಸ್ಥಗಿತಗೊಳಿಸಿರುವುದು ಮಹತ್ವದ ನಿರ್ಣಯ