ಈಗಾಗಲೇ ರಾಜ್ಯದಲ್ಲಿ ಮದ್ಯ ಮಾರಾಟದ ಪ್ರಮಾಣ ಹೆಚ್ಚುತ್ತಲೇ ಬಂದಿದೆ. ರಾಜ್ಯ ಸರಕಾರವೇ ನೀಡಿರುವ ಅಂಕಿ-ಅಂಶಗಳಂತೆ ೨೦೧೫ರ ನಂತರ ಮದ್ಯ ಮಾರಾಟದ ಜಿವಾರು ಪ್ರಮಾಣ ವಾರ್ಷಿಕ ಸರಾಸರಿ ಶೇ.೮ರಿಂದ ೨೪ರ ತನಕ ಏರಿಕೆ ಕಂಡಿದೆ.
ಹೀಗಿದ್ದೂ ರಾಜ್ಯದಲ್ಲಿ ಹೊಸದಾಗಿ ೧೦೦೦ಕ್ಕೂ ಹೆಚ್ಚು ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡಲು ಅಬಕಾರಿ ಇಲಾಖೆಯ ನಿರ್ಧರಿಸಿರುವುದು ಆತಂಕಕಾರಿಯಾಗಿದೆ. ಈಗಾಗಲೇ ಮದ್ಯಪಾನದ ದುಶ್ಚಟದಿಂದಾಗಿ ಲಕ್ಷಾಂತರ ಕುಟುಂಬಗಳು ಬೀದಿ
ಪಾಲಾಗಿವೆ. ಒಂದೆಡೆ ಬೆಲೆ ಏರಿಕೆ, ಬಡತನ, ನಿರುದ್ಯೋಗದಿಂದ ಜೀವನ ತತ್ತರಿಸುತ್ತಿದ್ದರೆ ಇನ್ನೊಂದೆಡೆ ನೈತಿಕ ಮೌಲ್ಯ ಕುಸಿಯುತ್ತಿದೆ.
ಹೆಣ್ಣು ಮಕ್ಕಳ ಮೇಲಿನ ಅಪರಾಧಗಳ ಹೆಚ್ಚಳಕ್ಕೆ ಮದ್ಯಪಾನವೂ ಒಂದು ಮುಖ್ಯ ಕಾರಣ ಎಂದು ವರದಿಗಳು ಸಾಬೀತುಪಡಿಸು ತ್ತಲೇ ಇವೆ. ಕೌಟುಂಬಿಕ ದೌರ್ಜನ್ಯಗಳಂತೂ ಇನ್ನೂ ಕ್ರೂರ ರೂಪ ಪಡೆದುಕೊಳ್ಳುತ್ತಿವೆ. ಹೆಣ್ಣು ಮಕ್ಕಳು ಬೆವರು ಸುರಿಸಿ ದುಡಿದ ಹಣವನ್ನು ಗಂಡಂದಿರು ಕುಡಿತಕ್ಕಾಗಿ ಹೊಡೆದು ಬಡಿದು ಕಸಿದುಕೊಳ್ಳುವುದು ಈಗಲೂ ಮನೆ ಮನೆಯ ಕಥೆಯಾಗಿದೆ.
ಇದರಿಂದಾಗಿ ಎಷ್ಟೋ ಹೆಣ್ಣುಮಕ್ಕಳು ತಮಗೂ ತಮ್ಮ ಮಕ್ಕಳಿಗೂ ಹೊಟ್ಟೆಗೆ ಬಟ್ಟೆ ಕಟ್ಟಿಕೊಂಡು ಉಪವಾಸ ಮಲಗು ವಂತಾಗುತ್ತಿದೆ. ಒಂದೆಡೆ ಮಹಿಳೆಯರ ಸಬಲೀಕರಣ ಮಾಡುತ್ತೇವೆ ಎಂದು ಹೇಳುತ್ತಿರುವ ಸರಕಾರವೂ ಇನ್ನೊಂದೆಡೆ ಅದೇ ಮಹಿಳೆಯರ ಮೇಲೆ ಕ್ರೂರ ಅಪರಾಧಗಳಿಗೆ ಕಾರಣವಾಗುತ್ತಿದೆ. ಕುಡಿತದ ಚಟದಿಂದ ಇಂದು ಎಷ್ಟೋ ಎಳೆಯ ಜೀವಗಳು ರಸ್ತೆ
ಅಪಘಾತಗಳಲ್ಲಿ ಜೀವ ಕಳೆದುಕೊಳ್ಳುತ್ತಿzರೆ. ಕುಡಿತದ ಚಟಕ್ಕೆ ಬಲಿಯಾಗಿ ಮೌಲ್ಯಯುತ ಜೀವನ ನಡೆಸಬೇಕಾದ ಗಂಡು ಮಕ್ಕಳು ಹಾದಿ ತಪ್ಪಿ ಅನಾರೋಗ್ಯಕ್ಕೆ ಬಲಿಯಾಗುತ್ತಿzರೆ. ಸಣ್ಣ ಮಕ್ಕಳು ಕೂಡ ಕುಡಿಯುವುದನ್ನು ಕಲಿಯುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಸಮಾಜದ ನೈತಿಕ ಸ್ವಾಸ್ಥ್ಯವನ್ನು ಉಳಿಸಿ-ಬೆಳೆಸುವುದನ್ನು ಬಿಟ್ಟು, ಜನಸಾಮಾನ್ಯರ ನೈತಿಕ ಬೆನ್ನೆಲುಬನ್ನು ಮುರಿಯಲು ಕಾರಣವಾಗುವ ಮದ್ಯಪಾನವನ್ನು ಸರಕಾರ ಪ್ರೋತ್ಸಾಹಿಸುತ್ತಿರುವುದು ಅತ್ಯಂತ ಖೇದಕರ. ಸರಕಾರ ಆದಾಯದ ಕೊರತೆ ನೀಗಿಸಲು ಶ್ರೀಮಂತ ಕೈಗಾರಿಕಾಪತಿಗಳ ಮೇಲೆ ಹೆಚ್ಚು ತೆರಿಗೆ ಹಾಕಬೇಕೇ ವಿನಾ ಸಾಮಾನ್ಯ ಜನತೆಯನ್ನು ಮದ್ಯದ ಚಟಕ್ಕೆ ದೂಡಿ, ಅವರ ಜೀವನವನ್ನು ನರಕ ಸದೃಶ ಮಾಡುವುದಲ್ಲ. ಇಡೀ ಸಮಾಜವನ್ನು ಅಧಃಪತನ ಕ್ಕೆ ತಳ್ಳುವ ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು.