Friday, 24th September 2021

ಎಲ್ಲ ಮಾದರಿಯ ಕ್ರಿಕೆಟ್‌ನಲ್ಲೂ ಕೊಹ್ಲಿನೇ ನಾಯಕ : ಬಿಸಿಸಿಐ

ನವದೆಹಲಿ: ವಿರಾಟ್ ಕೊಹ್ಲಿಯವರೇ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲೂ ಟೀಂ ಇಂಡಿಯಾ ನಾಯಕ ರಾಗಿ ಮುಂದುವರಿಯಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ಪಷ್ಟಪಡಿಸಿದೆ.

ಐಸಿಸಿ ಟಿ20 ವಿಶ್ವಕಪ್ ಬಳಿಕ ಕೊಹ್ಲಿ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ನಾಯಕತ್ವ ತೊರೆಯ ಲಿದ್ದಾರೆ. ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ನಾಯಕ ನಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಹೇಳಿದ್ದಾರೆ.

ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವ ಬದಲಾಯಿಸುವ ಬಗ್ಗೆ ಬಿಸಿಸಿಐ ಯಾವುದೇ ಸಭೆ ನಡೆಸಿಲ್ಲ ಎಂದು ಧುಮಲ್ ಹೇಳಿದ್ದಾರೆ. ಕೊಹ್ಲಿ ಅವರು ಟೆಸ್ಟ್‌ ಕ್ರಿಕೆಟ್ ನಾಯಕತ್ವ ದಲ್ಲಿ ಯಶಸ್ವಿಯಾಗಿದ್ದಾರೆ.

ಉತ್ತಮ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳನ್ನು ತಂಡ ಹೊಂದಿದ್ದರೂ ಏಕದಿನ ಮತ್ತು ಟಿ20 ಕ್ರಿಕೆಟ್‌ ನಲ್ಲಿ ಐಸಿಸಿ ಪ್ರಮುಖ ಟೂರ್ನಿಗಳಲ್ಲಿ ತಂಡವನ್ನು ಗೆಲ್ಲಿಸು ವುದು ಕೊಹ್ಲಿಗೆ ಸಾಧ್ಯವಾಗಿಲ್ಲ. ಹೀಗಾಗಿ ತಂಡದ ನಾಯಕತ್ವ ರೋಹಿತ್ ಪಾಲಾಗುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

Leave a Reply

Your email address will not be published. Required fields are marked *