15 ಡಿಗ್ರಿಗೆ ಇಳಿದ ಬೆಂಗಳೂರು ತಾಪಮಾನ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ರಾಜ್ಯದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.