ಇಂದು ಬೆಂಗಳೂರಲ್ಲಿ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ
Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಇರುವ ಸಾಧ್ಯತೆ ಇದೆ.
Karnataka Weather: ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಶುಕ್ರವಾರ ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 40.4 ಡಿ.ಸೆ ದಾಖಲಾಗಿದೆ. ಇನ್ನು ಚಾಮರಾಜನಗರದಲ್ಲಿ ಅತೀ ಕಡಿಮೆ ಉಷ್ಣಾಂಶ 15.6 ಡಿ.ಸೆ. ದಾಖಲಾಗಿದೆ. ಇನ್ನು ಮಾ.18 ಮತ್ತು 19ರಂದು ಉತ್ತರ ಒಳನಾಡಿನ ಗುಲ್ಬರ್ಗಾ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಬಿಸಿ ಗಾಳಿ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.