Karnataka weather: ನಾಳೆ ಬೆಂಗಳೂರು ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!
Karnataka weather: ಬೀದರ್‌ನಲ್ಲಿ ಶನಿವಾರ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ 40.8 ಡಿ.ಸೆ ದಾಖಲಾಗಿದೆ. ಇನ್ನು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 3 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ನಂತರ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಹೆಚ್ಚಳವಾಗುತ್ತದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಏಪ್ರಿಲ್ 28ರಂದು ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಹಾವೇರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಮಳೆಯಾಗುವ (Karnataka weather) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 23°C ಇರುವ ಸಾಧ್ಯತೆ ಇದೆ.
ಏಪ್ರಿಲ್ 29ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಕೊಪ್ಪಳ, ಧಾರವಾಡ, ಹಾವೇರಿ, ಗದಗ, ರಾಯಚೂರು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 30ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇದೆ. ಬೀದರ್, ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮೇ 1ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇದೆ. ಬೀದರ್, ಯಾದಗಿರಿ, ಗದಗ, ಕೊಪ್ಪಳ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ಕಲ್ಲಂಗಡಿಯೆಂಬ ರಸಭರಿತ ಹಣ್ಣಿನ ಸತ್ವಗಳು ಗೊತ್ತೇ?
ಮೇ 2 ಮತ್ತು 3ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.