ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಮೋಡ ಕವಿದ (Karnataka Weather) ವಾತಾವರಣ ಹಾಗೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ದಕ್ಷಿಣ ಒಳನಾಡು ಕರ್ನಾಟಕದ ಕೆಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಮಳೆಯ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಯಲ್ಲಿ ತುಂತುರು ಮಳೆಯಾಗಬಹುದು.
ಸೆಪ್ಟೆಂಬರ್ 14 ಮತ್ತು 15ರಂದು ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮಳೆಯ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಮಳೆಯ ಸಾಧ್ಯತೆ ಮುಂದುವರಿಯುವ ನಿರೀಕ್ಷೆಯಿದೆ.
ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಮೋಡಕವಿದ ಹವಾಮಾನ ಇರಲಿದೆ. ಚಾಮರಾಜನಗರ, ರಾಮನಗರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣ ಹವೆ ಮತ್ತು ಶುಷ್ಕ ವಾತಾವರಣ ಇರಲಿದೆ. ಆದರೆ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಬಿರುಗಾಳಿ ಹಾಗೂ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Karnataka Rain: ಈ ಮಳೆ ಟ್ರೇಲರ್ ಮಾತ್ರ, ಇನ್ನೂ 5 ದಿನ ಸುರಿಯಲಿದೆ ಸೈಕ್ಲೋನ್ ಮಳೆ!
ಬೆಂಗಳೂರು ನಗರದಲ್ಲಿ ಹೇಗಿರಲಿದೆ?
ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ. ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಹಾಗೂ ಗಾಳಿಯೊಂದಿಗೆ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.