ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ; ಕೆಲವು ಜಿಲ್ಲೆಗಳಲ್ಲಿ ಒಣಹವೆ
ಶನಿವಾರ ರಾಜ್ಯಾದ್ಯಂತ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲ ಕಡೆ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣಹವೆ ಕಾಯ್ದುಕೊಳ್ಳಲಿದೆ.
ಇಂಟರ್ ನೆಟ್ ಚಿತ್ರ -
ಬೆಂಗಳೂರು: ಶನಿವಾರ ರಾಜ್ಯಾದ್ಯಂತ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ (Karnataka Weather) ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಮುಂಗಾರು ನಿರ್ಗಮನ ಹಾಗೂ ಬದಲಾಗುತ್ತಿರುವ ಹವಾಮಾನ ವ್ಯವಸ್ಥೆಯಿಂದಾಗಿ ಹವಾಮಾನದಲ್ಲಿ ಏರುಪೇರು ಕಂಡುಬಂದಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ವಾರಾಂತ್ಯದ ಅವಧಿಯಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು 'ಯೆಲ್ಲೋ ಅಲರ್ಟ್' ಘೋಷಿಸಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆಯ ವಾತಾವರಣವೇ ಮುಂದುವರಿಯಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣಹವೆ ಕಾಯ್ದುಕೊಳ್ಳಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಇನ್ನುಳಿದ ಭಾಗಗಳಲ್ಲಿ ಜೂ.28ರವರೆಗೂ ಸಾಧಾರಣ ಮಳೆ
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಹಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಗರಿಷ್ಠ ತಾಪಮಾನ 31°C ಹಾಗೂ ಕನಿಷ್ಠ ತಾಪಮಾನ 21°C ಆಸುಪಾಸಿನಲ್ಲಿ ದಾಖಲಾಗಲಿದ್ದು, ಮುಂಜಾನೆ ಶೀತ ಗಾಳಿಯ ವಾತಾವರಣ ಇರಲಿದೆ.