ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯಾದ್ಯಂತ ಚಳಿ ವಾತಾವರಣ; ಕರಾವಳಿಯಲ್ಲಿ ಒಣ ಹವೆ

ಕರ್ನಾಟಕದಾದ್ಯಂತ ಸದ್ಯ ಒಣ ಹವಾಮಾನ ಮುಂದುವರಿದಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಗಮನಾರ್ಹವಾಗಿ ಹೆಚ್ಚಾಗಿದೆ. ಇನ್ನು ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲೂ ಒಣ ಹವೆ ಇರಲಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕದಾದ್ಯಂತ ಸದ್ಯ ಒಣ ಹವಾಮಾನ ಮುಂದುವರಿದಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚಳಿಯ (Karnataka Weather) ತೀವ್ರತೆ ಗಮನಾರ್ಹವಾಗಿ ಹೆಚ್ಚಾಗಿದೆ. ಭಾರತ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದ ಸಮತಟ್ಟಾದ ಪ್ರದೇಶಗಳ ಪೈಕಿ ಧಾರವಾಡದಲ್ಲಿ ಅತ್ಯಂತ ಕಡಿಮೆ ಅಂದರೆ 12.2°C ಕನಿಷ್ಠ ತಾಪಮಾನ ದಾಖಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದು, ಒಣ ಹವಾಮಾನ ಇರಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಒಣ ಹವಾಮಾನವಿದ್ದು, ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆ ನೀಡಲಾಗಿಲ್ಲ. ಕಾರವಾರದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 37.8°C ಗರಿಷ್ಠ ತಾಪಮಾನ ದಾಖಲಾಗಿದೆ.

ಇನ್ನು ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲೂ ಒಣ ಹವೆ ಇರಲಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ನವೆಂಬರ್ 12 ಮತ್ತು 13ರಂದು ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಇಂದು ಭಾರೀ ಮಳೆ ಸಾಧ್ಯತೆ; ಬೆಂಗಳೂರಿನ ಹವಾಮಾನ ಹೇಗಿದೆ?

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ಸ್ವಚ್ಛ ಅಥವಾ ಭಾಗಶಃ ಮೋಡ ಕವಿದ ಆಕಾಶವಿರಲಿದೆ. ಮುಂಜಾನೆಯ ವೇಳೆ ಕೆಲವೆಡೆ ಮಂಜು ಕವಿಯುವ ಸಾಧ್ಯತೆಯಿದ್ದು, ಇಂದು ನಗರದಲ್ಲಿ ಗರಿಷ್ಠ 28°C ನಿಂದ 29°C ಹಾಗೂ ಕನಿಷ್ಠ 16°C ನಿಂದ 18°C ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.

Vishakha Bhat Heggar

View all posts by this author