ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದಿತ್ವಾ ಚಂಡಮಾರುತ: ನವೆಂಬರ್ 30ರಿಂದ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಿತ್ವಾ ಚಂಡಮಾರುತದಿಂದಾಗಿ ರಾಜ್ಯದಲ್ಲಿ ನವೆಂಬರ್ 30ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಈ ಚಂಡಮಾರುತ ತಮಿಳುನಾಡು, ತೆಲಂಗಾಣ, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಪರಿಣಾಮ ಬೀರಲಿದೆ.

ಶೀಘ್ರದಲ್ಲೇ ಕರ್ನಾಟಕಕ್ಕೆ ಅಪ್ಪಳಿಸಲಿದೆ ದಿತ್ವಾ ಚಂಡಮಾರುತ

(ಸಂಗ್ರಹ ಚಿತ್ರ) -

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay of Bengal) ಬೀಸುತ್ತಿರುವ ದಿತ್ವಾ ಚಂಡಮಾರುತ (Ditwa Cyclone) ಶೀಘ್ರದಲ್ಲೇ ಕರ್ನಾಟಕ (Karnataka) ಸೇರಿದಂತೆ ಹಲವು ರಾಜ್ಯಗಳಿಗೆ ಅಪ್ಪಳಿಸಲಿದೆ. ಇದರಿಂದ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಿತ್ವಾ ಚಂಡಮಾರುತವು ತಮಿಳುನಾಡು, ತೆಲಂಗಾಣ, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ನವೆಂಬರ್ 30ರಿಂದ ಭಾರೀ ಮಳೆ ಉಂಟು ಮಾಡಲಿದೆ. ಸೆನ್ಯಾರ್ ಚಂಡಮಾರುತ ದುರ್ಬಲಗೊಳ್ಳುತ್ತಿದ್ದಂತೆ ದಿತ್ವಾ ಚಂಡಮಾರುತ ರೂಪುಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಎಚ್ಚರಿಕೆ ನೀಡಿದೆ.

ದಿತ್ವಾ ಚಂಡಮಾರುತವು ಶ್ರೀಲಂಕಾ ಕರಾವಳಿ ಮತ್ತು ಪಕ್ಕದ ನೈಋತ್ಯ ಬಂಗಾಳಕೊಲ್ಲಿಯಾದ್ಯಂತ ವಾಯುವ್ಯಕ್ಕೆ ಚಲಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಚಂಡಮಾರುತದ ಪ್ರಭಾವವು ವ್ಯಾಪಕವಾಗಿ ಹರಡುವ ನಿರೀಕ್ಷೆಯಿದೆ. ಇದರಿಂದ ನವೆಂಬರ್ 30ರಿಂದ ಐದು ದಿನಗಳ ಕಾಲ ತಮಿಳುನಾಡು, ತೆಲಂಗಾಣ, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿಗೆ ಜನ್ಮದಿನ; ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ದಿತ್ವಾ ಚಂಡಮಾರುತವು ಕಳೆದ 6 ಗಂಟೆಗಳಲ್ಲಿ ಗಂಟೆಗೆ 8 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ನವೆಂಬರ್ 27ರಂದು ಸಂಜೆ ಒಂದೇ ಪ್ರದೇಶದಲ್ಲಿ ಕೇಂದ್ರೀಕೃತವಾಗಿತ್ತು. ಇದು ಶ್ರೀಲಂಕಾದ ಬಟ್ಟಿಕಲೋವಾದಿಂದ ವಾಯುವ್ಯಕ್ಕೆ ಸುಮಾರು 8 ಕಿ.ಮೀ., ತ್ರಿಕೋನಮಿಯಿಂದ ದಕ್ಷಿಣದಲ್ಲಿ 80 ಕಿ.ಮೀ., ಹಂಬಂಟೋಟಾದಿಂದ ಈಶಾನ್ಯದಲ್ಲಿ 200 ಕಿ.ಮೀ., ಭಾರತ ಪುದುಚೇರಿಯಿಂದ ಆಗ್ನೇಯದಲ್ಲಿ 480 ಕಿ.ಮೀ. ಹಾಗೂ ಚೆನ್ನೈನಿಂದ 580 ಕಿ.ಮೀ. ದೂರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.



ದಿತ್ವಾ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನಲ್ಲಿ ಶನಿವಾರದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಸುತ್ತಮುತ್ತಲಿನ ಐದು ರಾಜ್ಯಗಳಲ್ಲಿ ಹೆಚ್ಚಿನ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ದಿತ್ವಾ ಚಂಡಮಾರುತದಿಂದ ನೈಋತ್ಯ ಬಂಗಾಳಕೊಲ್ಲಿ, ಶ್ರೀಲಂಕಾ ಕರಾವಳಿ, ತಮಿಳುನಾಡಿನಲ್ಲಿ ನವೆಂಬರ್ 27ರಿಂದ 30ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕನ್ಯಾಕುಮಾರಿ, ನಾಗಪಟ್ಟಣಂ, ಪುದುಕ್ಕೊಟ್ಟೈ, ರಾಮನಾಥಪುರಂ, ತಂಜಾವೂರು, ತಿರುವರೂರು, ತೂತುಕ್ಕುಡಿ, ತಿರುನಲ್ವೇಲಿ ಜಿಲ್ಲೆಗಳಲ್ಲಿ ಅರೇಂಜ್ ಅಲರ್ಟ್ ಘೋಷಿಸಲಾಗಿದ್ದು, ಶಿವಗಂಗಾ, ತೆಂಕಸಿ ಮತ್ತು ವಿರುಧುನಗರದಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Lucky Number: ಅತಿ ಹೆಚ್ಚಿನ ದರಕ್ಕೆ ಮಾರಾಟವಾದ ನಂಬರ್ ಪ್ಲೇಟ್; ನಿಮ್ಗೂ ಇತರ ಫ್ಯಾನ್ಸಿ ನಂಬರ್ ಬೇಕಿದ್ದರೆ ಹೀಗೆ ಮಾಡಿ

ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾದಲ್ಲಿ ಡಿಸೆಂಬರ್ 2 ರವರೆಗೆ ಹೆಚ್ಚಿನ ಮಳೆಯಾಗಲಿದೆ. ಕೇರಳದಲ್ಲೂ ನವೆಂಬರ್ 30 ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ತೆಲಂಗಾಣದಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 1 ರಂದು, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 29 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಳೆಯೊಂದಿಗೆ ಗುಡುಗು ಮತ್ತು ಮಿಂಚು ಇರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.