ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸೆಪ್ಟೆಂಬರ್‌ ತಿಂಗಳಿನಲ್ಲಿಯೇ ರಾಜ್ಯದ ಹಲವೆಡೆ ಬರಗಾಲ; ಇಂದಿನ ಹವಾಮಾನ ಹೇಗಿದೆ

ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ ಸಹ ಕೆಲ ಪ್ರದೇಶಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಿದೆ. ಸೆಪ್ಟೆಂಬರ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ ಸಹ ಕೆಲ ಪ್ರದೇಶಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು (Karnataka Weather) ಘೋಷಿಸಿದೆ. ಸೆಪ್ಟೆಂಬರ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (IMD) ಇನ್ನು ಹಲವು ಕಡೆ ಒಣ ಹವೆ ಮುಂದುವರಿಯಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಇದೇ ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 8ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗಲಿದೆ.

ಹವಾಮಾನ ಇಲಾಖೆ (IMD) ವರದಿ ಪ್ರಕಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಗರಿಷ್ಠ ತಾಪಮಾನ 31.3°C ಮತ್ತು ಕನಿಷ್ಠ ತಾಪಮಾನ 20.8°C ಇರಲಿದೆ. ಅಲ್ಲದೇ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಗಿನಿಂದ ಮಧ್ಯಾಹ್ನದವರೆಗೂ ಸುಡು ಬಿಸಿಲು ಇರಲಿದೆ. ಆದರೆ ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಅತ್ಯಂತ ಬಲಗೊಂಡಿದ್ದು ಇದರ ಮಳೆ ಕೊರತೆ ಎದುರಾಗಿದೆ ಎಂದು IMD ಹೇಳಿದೆ. ಮುಂದಿನ ಫೆಬ್ರವರಿ 2027ರ ವರೆಗೆ ಮುಂದುವರಿಯಲಿದ್ದು, ಅಕ್ಟೋಬರ್‌ ತಿಂಗಳಲ್ಲಿ ಆರಂಭವಾಗುವ ಹಿಂಗಾರು ಕೂಡ ಕೊರತೆ ಆಗುವ ಸಾಧ್ಯತೆಯಿದೆ ಎಂದು ವರದಿಗಳು ಹೇಳುತ್ತಿವೆ.

Vishakha Bhat Heggar

View all posts by this author