ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕದ ಹಲವೆಡೆ ಒಣಹವೆ; ಬೆಂಗಳೂರಿನಲ್ಲಿ ಸಂಜೆ ಮಳೆ ಸಾಧ್ಯತೆ

ರಾಜ್ಯದಲ್ಲಿ ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದ್ದು, ಮುಂಬರುವ ದಿನಗಳಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನವೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ ಎರಡನೇ ವಾರದಲ್ಲಿ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಗಳಾಗಲಿದ್ದು, ಚಳಿಯ ತೀವ್ರತೆ ಆರಂಭವಾಗುವ ಲಕ್ಷಣಗಳಿವೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದ್ದು, ಮುಂಬರುವ ದಿನಗಳಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನವೇ ಮುಂದುವರಿಯಲಿದೆ ಎಂದು (Karnataka Weather) ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ ಎರಡನೇ ವಾರದಲ್ಲಿ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಗಳಾಗಲಿದ್ದು, ಚಳಿಯ ತೀವ್ರತೆ ಆರಂಭವಾಗುವ ಲಕ್ಷಣಗಳಿವೆ. ಆದರೂ ಮುರುಸು ಚಂಡಮಾರುತ ಪರಿಣಾಮದಿಂದಾಗಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಹಲವು ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಬೆಳಗಿನ ಜಾವ ಸಾಧಾರಣ ಮಂಜು ಮುಸುಕುವ ಸಾಧ್ಯತೆಯಿದ್ದು, ಗರಿಷ್ಠ ತಾಪಮಾನ 30°C ಹಾಗೂ ಕನಿಷ್ಠ ತಾಪಮಾನ 20°C ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ. ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗಲಿದ್ದು, ಸೆಖೆಯ ವಾತಾವರಣ ಇರಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಸಂಜೆ ಮಳೆಯ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು. ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ದುರ್ಬಲಗೊಳ್ಳುತ್ತಿರುವ ಅರ್ನಾಬ್ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಇನ್ನಷ್ಟು ಮಳೆ ಎಚ್ಚರಿಕೆ

ಇಲಾಖೆಯ ವರದಿಯ ಪ್ರಕಾರ, ನವೆಂಬರ್ 9 ರ ನಂತರ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡಗಳು ಸಂಪೂರ್ಣವಾಗಿ ಸರಿದು, ಶುಭ್ರವಾದ ಬಿಸಿಲು ಇರಲಿದೆ. ಕರಾವಳಿ ತೀರದಲ್ಲಿ ಸಾಧಾರಣ ಗಾಳಿಯ ವೇಗ ಹೆಚ್ಚಾಗಲಿದ್ದು, ಮೀನುಗಾರರಿಗೆ ಯಾವುದೇ ವಿಶೇಷ ಮುನ್ನೆಚ್ಚರಿಕೆ ನೀಡಿಲ್ಲ. ಸದ್ಯಕ್ಕೆ ರಾಜ್ಯದ ಎಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಕೇಂದ್ರದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Vishakha Bhat Heggar

View all posts by this author