ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ಭಾರಿ ಮಳೆ; ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Holiday for Schools and Colleges: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಳೆಯೂ (ಆ.20) ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ. ಹೀಗಾಗಿ ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ.

ಭಾರಿ ಮಳೆ; ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Prabhakara R Prabhakara R Aug 19, 2025 8:38 PM

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದೆ. ಹೀಗಾಗಿ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಂದ ಇಂದು (ಆ.19) ರಜೆ ಘೋಷಿಸಲಾಗಿತ್ತು. ಮಳೆ ಆರ್ಭಟ (Karnataka Rains) ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ನಾಳೆಯೂ (ಆ.20) ಬೆಳಗಾವಿ, ಧಾರವಾಡ ಸೇರಿ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ (Holiday for Schools and Colleges) ಮುಂದುವರಿದಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 20ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆ ಶಾಲಾ-ಕಾಲೇಜುಗಳಿಗೆ ರಜೆ

ಬೆಳಗಾವಿ ‌ಜಿಲ್ಲೆಯಾದ್ಯಂತ‌ ಕಳೆದ ಎರಡು ದಿನಗಳಿಂದ ಬಾರಿ ಮಳೆ ಸುರಿಯುತ್ತಿದೆ. ಹೀಗಾಗಿ, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಂದು (ಆ.19) ರಜೆ ಘೋಷಣೆ ಮಾಡಲಾಗಿತ್ತು. ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ನಾಳೆಯೂ (ಆ.20) ಕೂಡ ಬೆಳಗಾವಿ ‌ಜಿಲ್ಲೆಯ ಅಂಗನವಾಡಿ, ಶಾಲಾ ಹಾಗೂ ‌ಪಿಯು ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ‌ಮೊಹಮ್ಮದ್ ರೋಷನ್ ಅವರು ‌ಆದೇಶ ಹೊರಡಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲೂ ರಜೆ

ಹಾವೇರಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದಿನಿಂದಲೇ ಹಾವೇರಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಿರಂತರ ಮಳೆ ಹಿನ್ನೆಲೆಯುಲ್ಲಿ ನಾಳೆ (ಆ.20) ಹಾವೇರಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿಜಯ್ ‌ಮಹಾಂತೇಶ್ ಆದೇಶಿಸಿದ್ದಾರೆ.

ಯಾದಗಿರಿಯಲ್ಲಿ ಶಾಲಾ-ಕಾಲೇಜಿಗಳಿಗೆ ರಜೆ ಮುಂದುವರಿಕೆ

ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಹೀಗಾಗಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ನಾಳೆಯೂ ಸಹ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಡಿಡಿಪಿಐ ಚನ್ನಬಸಪ್ಪ ಆದೇಶ ಹೊರಡಿಸಿದ್ದಾರೆ.

ಧಾರವಾಡದಲ್ಲೂ ಶಾಲಾ-ಕಾಲೇಜುಗಳಿಗೆ ರಜೆ

ಧಾರವಾಡ ಜಿಲ್ಲೆಯಲ್ಲೂ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ನಾಳೆ(ಆಗಸ್ಟ್ 20) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಧಾರವಾಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ , ಪಿಯುಸಿ ಹಾಗೂ ಪದವಿ ಕಾಲೇಜುಗಳಿಗೆ ರಜೆ ನೀಡಿ ಡಿಸಿ ದಿವ್ಯಾ ಪ್ರಭು ಆದೇಶ ಹೊರಡಿಸಿದ್ದಾರೆ.

ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಳೆಯೂ (ಆ.20) ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ. ಹೀಗಾಗಿ ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ.