ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದೇಶಾದ್ಯಂತ ಬಿಸಿ ಗಾಳಿ ಎಚ್ಚರಿಕೆ; ಹಲವು ರಾಜ್ಯಗಳಿಗೆ ಸೂಚನೆ ನೀಡಿದ ಹವಾಮಾನ ಇಲಾಖೆ

ದೇಶಾದ್ಯಂತ ಉಷ್ಣ ಅಲೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. ಮುಂದಿನ ಒಂದು ವಾರ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಸಂಗ್ರಹ ಚಿತ್ರ

ನವದೆಹಲಿ: ದೇಶಾದ್ಯಂತ ಉಷ್ಣ ಅಲೆಯ ವಾತಾವರಣ (Heat Wave Warning) ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. ಐಎಂಡಿ ಪ್ರಕಾರ, ಏಪ್ರಿಲ್ 27 ರಂದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಬಿಹಾರ ಮತ್ತು ಗುಜರಾತ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉಷ್ಣ ಗಾಳಿ ಬೀಸಲಿದೆ.

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ಮತ್ತು ರಾಯಲಸೀಮಾದಲ್ಲಿ ಏಪ್ರಿಲ್ 26-30 ರವರೆಗೆ ಬಿಸಿ ಮತ್ತು ಆರ್ದ್ರತೆಯ ವಾತಾವರಣವಿರಲಿದ್ದು, ಕೇರಳ ಮತ್ತು ಮಾಹೆಯಲ್ಲಿ ಏಪ್ರಿಲ್ 27 ರಂದು ಇದೇ ರೀತಿಯ ವಾತಾವರಣವಿರಲಿದೆ. ಕಳೆದ 24 ಗಂಟೆಗಳಲ್ಲಿ ಬೆಳಿಗ್ಗೆ 8:30 ರವರೆಗಿನ ತಾಪಮಾನ ಪಶ್ಚಿಮ ಹಿಮಾಲಯ ಪ್ರದೇಶ, ಈಶಾನ್ಯ ಭಾರತ, ಪಶ್ಚಿಮ ಕರಾವಳಿ ಮತ್ತು ಪರ್ಯಾಯ ದ್ವೀಪದ ದಕ್ಷಿಣ ಭಾಗಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ಹಗಲಿನ ತಾಪಮಾನವು 40°C ನಿಂದ 45°C ವರೆಗೆ ಇದೆ ಎಂದು ಐಎಂಡಿ ತಿಳಿಸಿದೆ. ಶನಿವಾರ ಉತ್ತರ ಪ್ರದೇಶದ ಬಂಡಾದಲ್ಲಿ ದಾಖಲಾದ ಅತ್ಯಧಿಕ ಗರಿಷ್ಠ ತಾಪಮಾನ 47.4°C ಆಗಿತ್ತು.

ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ ಮತ್ತು ನೈಋತ್ಯ ರಾಜಸ್ಥಾನದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5.1°C ಗಿಂತ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಾಖಂಡ, ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಬಿಹಾರ, ಮಧ್ಯಪ್ರದೇಶ, ಗುಜರಾತ್, ಜಾರ್ಖಂಡ್, ವಿದರ್ಭ, ಮತ್ತು ಕೇರಳ ಮತ್ತು ಮಾಹೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 3.1°C ನಿಂದ 5.0°C ರಷ್ಟು ಗಮನಾರ್ಹವಾಗಿ ಹೆಚ್ಚಾಗಿದೆ.

ಕರ್ನಾಟಕ ಹವಾಮಾನ ವರದಿ

ಮುಂದಿನ ಒಂದು ವಾರ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಮೇ 2ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಹೆಚ್ಚಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Vishakha Bhat Heggar

View all posts by this author