ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕಾಗಿದ್ದು, ಇಂದು (ಅಕ್ಟೋಬರ್ 9, 2026) ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕಾಗಿದ್ದು, ಇಂದು (ಅಕ್ಟೋಬರ್ 9, 2026) ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜಧಾನಿ ಬೆಂಗಳೂರು ಸೇರಿದಂತೆ ಒಟ್ಟು 13 ಜಿಲ್ಲೆಗಳಿಗೆ ‘ಹಳದಿ ಅಲರ್ಟ್‌’ (Yellow Alert) ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಇಂದು ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ. ಇದರೊಂದಿಗೆ ಶಿವಮೊಗ್ಗ, ಚಿಕ್ಕಮಗಳೂರು, ರಾಮನಗರ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿಯೂ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿಗೆ ಹೋಲಿಸಿದರೆ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ. ಇತ್ತ ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿಲ್ಲದೆ, ಒಣ ಹವಾಮಾನ ಮುಂದುವರಿಯಲಿದೆ.

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ಬೆಳಗ್ಗಿನಿಂದಲೇ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ನಿರಂತರ ಮಳೆಯಿಂದಾಗಿ ಶೀತ ಗಾಳಿ ಹೆಚ್ಚಾಗಿದ್ದು, ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ಇಂದು ನಗರದ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಂಭವವಿದೆ

Vishakha Bhat Heggar

View all posts by this author