ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಸೂಚನೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather: ರಾಜ್ಯದಲ್ಲಿ ಇಂದಿನಿಂದ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆ ಮತ್ತು ಬಲವಾದ ಬಿರುಗಾಳಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ.

ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಸೂಚನೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 20, 2026 8:44 AM

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆ ಮತ್ತು ಬಲವಾದ ಬಿರುಗಾಳಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ (Karnataka Weather) ಇಲಾಖೆ ಎಚ್ಚರಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಸಾಧ್ಯತೆ ಇದೆ. ಇದರ ಜೊತೆಗೆ ಗುಡುಗು-ಮಿಂಚು ಹಾಗೂ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯೂ ಇದೆ. ಕರಾವಳಿ ಕರ್ನಾಟಕಕ್ಕೆ ಸೆಪ್ಟೆಂಬರ್ 20ರಿಂದ ಮುಂದಿನ ಹಲವು ದಿನಗಳವರೆಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಮಲೆನಾಡು ಭಾಗದಲ್ಲಿ ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 22ರಿಂದ ಮೂರು ದಿನಗಳ ಕಾಲ ಮಳೆ ಹೆಚ್ಚಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 25ರವರೆಗೆ ಮಳೆಯ ಸಾಧ್ಯತೆ ಇದೆ. ಹಾಸನ, ಕೊಡಗು ಹಾಗೂ ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಮಳೆಯ ಚಟುವಟಿಕೆ ಮುಂದುವರಿಯಲಿದೆ ಎನ್ನಲಾಗಿದೆ.

ಕರಾವಳಿ- ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ; ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ?

ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿರುಗಾಳಿ (30-40 ಕಿ.ಮೀ) ಸಹಿತ ಭಾರಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. IMDಯ ನಗರ ಮುನ್ಸೂಚನೆಯ ಪ್ರಕಾರ ಇಂದು ಕನಿಷ್ಠ ತಾಪಮಾನ ಸುಮಾರು 21°C ಹಾಗೂ ಗರಿಷ್ಠ ತಾಪಮಾನ ಸುಮಾರು 31°C ಇರಲಿದೆ.