ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಮುನ್ಸೂಚನೆ; ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ ಹಲವೆಡೆ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಕೆಲವು ದಿನಗಳ ಕಾಲ ಮಳೆ (Rain) ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather) ತಿಳಿಸಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆಯಾಗಬಹುದೆಂದು ಇಲಾಖೆ ತಿಳಿಸಿದೆ. ನಗರದಲ್ಲಿ ಗರಿಷ್ಠ ತಾಪಮಾನ 34.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23.8 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ದಾಖಲಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯಾಗಲಿದೆ. ಮಂಗಳೂರು ಮತ್ತು ಉಡುಪಿ ಭಾಗಗಳಲ್ಲಿ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಾಧ್ಯತೆ ಕಡಿಮೆ ಇದ್ದು, ಶುಷ್ಕ ವಾತಾವರಣ ಮುಂದುವರಿಯಲಿದೆ.

ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಕೊಟ್ಟ ಸೂಚನೆಯೇನು?

ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದರೂ, ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

Vishakha Bhat Heggar

View all posts by this author