ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ ಸೂಚನೆ; ಬೆಂಗಳೂರಿನ ವೆದರ್ ಹೇಗಿರಲಿದೆ?
Karnataka Weather: ರಾಜ್ಯದ ಹಲವಡೆ ಭಾರೀ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದ್ದು, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದ ಹಲವಡೆ ಭಾರೀ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ (Karnataka Weather) ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದ್ದು, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿಯೂ ಮುಂದಿನ ಎರಡು ದಿನ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಅರಬ್ಬಿ ಸಮುದ್ರದ ಮೇಲೆ ಸೃಷ್ಟಿಯಾಗಿರುವ ಕಡಿಮೆ ಒತ್ತಡದ ವ್ಯವಸ್ಥೆ ಮತ್ತು ಚಂಡಮಾರುತದ ಪರಿಚಲನೆಯು ಈ ಅನಿರೀಕ್ಷಿತ ಬದಲಾವಣೆಗೆ ಕಾರಣವಾಗಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳು ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸಂಜೆಯ ವೇಳೆಗೆ ಭಾರೀ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಸೇರಿ ಮೈಸೂರು, ಬಳ್ಳಾರಿ, ಹಾಸನ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಮಳೆಯ ಸಾಧ್ಯತೆ ಇದೆ.