ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯದ ಹಲವೆಡೆ ಭಾರೀ ಮಳೆ ಸೂಚನೆ; ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather: ಕೆಲ ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಇಂದೂ ಸಹ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಕೆಲ ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಇಂದೂ ಸಹ ಮುಂದುವರಿಯಲಿದೆ. (Karnataka Weather) ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದೆಲ್ಲೆಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 5 ರಿಂದ 11 ರ ತನಕ ಏಳೂ ದಿನ ಹಗುರ ಮಳೆ ಮತ್ತು ಗುಡುಗು ಸಾಧ್ಯ. ಉಡುಪಿಯಲ್ಲಿ ಮೇ 5 ರಿಂದ 7 ರ ತನಕ ಒಣ ಹವೆ ಇದ್ದು ಮೇ 8 ರಿಂದ ಮಳೆ ಆರಂಭ; ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 8 ರಿಂದ ಮಳೆ-ಗುಡುಗು ಶುರು. ಮೇ 4 ರಿಂದ 8 ರ ತನಕ ಕರಾವಳಿಯಲ್ಲಿ ಮಳೆ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಮೇ 6 ಮತ್ತು 7 ರಂದು ಕೆಲವು ಸ್ಥಳಗಳಲ್ಲಿ 64.5 ಮಿ.ಮೀ ಮೀರಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಅವಧಿಯಲ್ಲಿ 30-40 ಕಿ.ಮೀ ವೇಗದ ಚಂಡಮಾರುತದ ಗಾಳಿಯೂ ಬೀಸಲಿದೆ.

ಮೇ 7 ಮತ್ತು 8 ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಇವುಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ. ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ.

Vishakha Bhat Heggar

View all posts by this author