ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Rains: ಬೆಂಗಳೂರಿನ ಹಲವೆಡೆ ಮಳೆರಾಯನ ಆರ್ಭಟ; ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ಹೈರಾಣ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29° ಸೆ. ಮತ್ತು 20° ಸೆ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನ ಆರ್‌ಆರ್‌ಎಂಆರ್ ಜಂಕ್ಷನ್‌ನಲ್ಲಿ ಮಳೆಯಿಂದ ಮರ ಬಿದ್ದಿರುವುದು.

ಬೆಂಗಳೂರು: ರಾಜಧಾನಿ ಬೆಂಗಳೂರಿನ (Bengaluru Rains) ಹಲವೆಡೆ ಶನಿವಾರ ಸಂಜೆ ಭಾರಿ ಮಳೆಯಾಗಿದೆ. ಶಾಂತಿನಗರ, ಕೋರಮಂಗಲ, ಜಯನಗರ, ಮೆಜೆಸ್ಟಿಕ್, ಆರ್‌ ಆರ್‌ ನಗರ ಸೇರಿ ಹಲವು ಭಾಗಗಳಲ್ಲಿ ನಿರಂತರ ಮಳೆಯಿಂದ ಸಂಚಾರ ದಟ್ಟಣೆ ಉಂಟಾಗಿ, ವಾಹನ ಸವಾರರು ಪರದಾಡುವಂತಾಯಿತು.

ಇನ್ನು ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ

ನಾಳೆ ಕರಾವಳಿಯಲ್ಲಿ ಗಂಟೆಗೆ 40-50 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ನಾಳೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮುಂದಿನ ಮೂರು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ನಾಳೆ (ಜೂನ್‌ 14) ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಗಾಳಿ ಸಹಿತ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಜೂನ್ 15‌ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Health Tips: ತ್ವಚೆಯ ಸೌಂದರ್ಯ ಹೆಚ್ಚಿಸಬೇಕೇ? ಅಕ್ಕಿ ತೊಳೆದ ನೀರು ಕುಡಿಯಿರಿ!

ಜೂನ್‌ 16ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.